AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಡ್ರಗ್ಸ್ ಮಾಫಿಯಾಗೆ ಪೊಲೀಸರ ಬಿಗ್ ಶಾಕ್: 13 ಕೆಜಿಗೂ ಹೆಚ್ಚು ಮಾದಕ ವಸ್ತುಗಳು ಸೀಜ್!

ಬೆಂಗಳೂರಿನ ಡ್ರಗ್ಸ್ ಮಾಫಿಯಾ ಪೊಲೀಸರ ಬಲೆಗೆ ಬಿದ್ದಿದ್ದು, ನಂದಿನಿ ಲೇಔಟ್ ಮತ್ತು ಯಶವಂತಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 14.75 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 13.7 ಕೆಜಿ ಹೈಡ್ರೋ ಗಾಂಜಾ ಮತ್ತು ಎಂಡಿಎಂಎ ಸೀಜ್ ಮಾಡಲಾಗಿದ್ದು, ಕೇರಳ ಮೂಲದ ಪೆಡ್ಲರ್‌ಗಳು ಹಾಗೂ ರೌಡಿಶೀಟರ್ ಸೇರಿ ಆರು ಮಂದಿಯನ್ನು ಬಂಧಿಸಲಾಗಿದೆ. ವಿದೇಶಿ ಹಾಗೂ ನೈಜೀರಿಯಾ ಪ್ರಜೆಗಳೊಂದಿಗಿನ ಡ್ರಗ್ಸ್ ನಂಟಿನ ಬಗ್ಗೆ ತನಿಖೆ ಮುಂದುವರಿದಿದೆ.

ಬೆಂಗಳೂರಿನ ಡ್ರಗ್ಸ್ ಮಾಫಿಯಾಗೆ ಪೊಲೀಸರ ಬಿಗ್ ಶಾಕ್: 13 ಕೆಜಿಗೂ ಹೆಚ್ಚು ಮಾದಕ ವಸ್ತುಗಳು ಸೀಜ್!
ಆರೋಪಿಗಳು
Shivaprasad B
| Edited By: |

Updated on:May 05, 2026 | 12:56 PM

Share

ಬೆಂಗಳೂರು, ಮೇ 05: ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ನಡೆಯುವ, ಪೆಡ್ಲರ್​ಗಳು ಸಿಕ್ಕಿ ಬೀಳುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಇದೀಗ ಮತ್ತೊಮ್ಮೆ  ಮಾದಕ ವಸ್ತುಗಳ ವಿರುದ್ಧ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 14 ಕೋಟಿ 75 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ (Drugs) ವಶಪಡಿಸಿಕೊಳ್ಳಲಾಗಿದೆ. ನಂದಿನಿ ಲೇಔಟ್ ಮತ್ತು ಯಶವಂತಪುರ ಪೊಲೀಸರು ಒಟ್ಟು 13 ಕೆಜಿ 700 ಗ್ರಾಂ ತೂಕದ ಹೈಡ್ರೋ ಗಾಂಜಾ ಹಾಗೂ ಎಂಡಿಎಂಎ (MDMA) ಕ್ರಿಸ್ಟಲ್ ಅನ್ನು ಸೀಜ್ ಮಾಡಿದ್ದಾರೆ.

ನಂದಿನಿ ಲೇಔಟ್: 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ವಶ

ನಂದಿನಿ ಲೇಔಟ್ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ. ಸೌಗೇಶ್ ಮತ್ತು ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 5.75 ಕೋಟಿ ರೂ.ಮೌಲ್ಯದ 5 ಕೆಜಿ 700 ಗ್ರಾಂ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ವಿದೇಶದಿಂದ ಈ ಹೈಡ್ರೋ ಗಾಂಜಾವನ್ನು ತರಿಸಿ ಸ್ಥಳೀಯರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು ಎಂದು ಹೇಳಲಾಗಿದೆ. ಕೇರಳದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಇವರ ಮೇಲೆ ಈ ಹಿಂದೆಯೇ ಅಲ್ಲಿನ ಎನ್​ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ನಂದಿನಿ ಲೇಔಟ್ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಯಶವಂತಪುರ: 9 ಕೋಟಿ ಮೌಲ್ಯದ ಎಂಡಿಎಂಎ ಸೀಜ್, ನಾಲ್ವರು ಲಾಕ್

ಮತ್ತೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಯಶವಂತಪುರ ಪೊಲೀಸರು ಅಂತರರಾಷ್ಟ್ರೀಯ ಮಟ್ಟದ ಡ್ರಗ್ ಜಾಲವನ್ನು ಬೇಧಿಸಿದ್ದಾರೆ. ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳಾದ ಸೈಯದ್ ಸುಹೇಲ್, ಮೊಹಮ್ಮದ್ ಸಮೀರ್, ಸಾದಿಕ್ ಪಾಷಾ ಮತ್ತು ಮೊಹಮ್ಮದ್ ಹಕ್​ರನ್ನು ಬಂಧಿಸಲಾಗಿದ್ದು, ಈ ನಾಲ್ವರಿಂದ 9 ಕೋಟಿ ರೂಪಾಯಿ ಮೌಲ್ಯದ 8 ಕೆಜಿ ಎಂಡಿಎಂಎ (MDMA) ಸೀಜ್ ಮಾಡಲಾಗಿದೆ.

ಇದನ್ನೂ ಓದಿ ಬೆಂಗಳೂರಿನಲ್ಲಿ ಪೊಲೀಸರ ಮೆಗಾ ಡ್ರಗ್ ಬೇಟೆ: ಒಂದೇ ವಾರದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

ಆರೋಪಿಗಳು ನೈಜೀರಿಯಾ ಪ್ರಜೆಗಳಿಂದ ಡ್ರಗ್ಸ್ ಖರೀದಿಸಿ ನಗರದಲ್ಲಿ ಸ್ಥಳೀಯರಿಗೆ ಪೂರೈಸುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಬಂಧಿತರಿಂದ ಒಂದು ಕಾರು ಹಾಗೂ ಐದು ಮೊಬೈಲ್ ಫೋನ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಲ್ಲಿ ಸೈಯದ್ ಸುಹೇಲ್ ಹೊಸಕೋಟೆ ಠಾಣೆಯ ರೌಡಿಶೀಟರ್ ಆಗಿದ್ದು, ಈ ಹಿಂದೆ ಪ್ರಕರಣವೊಂದರಲ್ಲಿ ಪೊಲೀಸರು ಈತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು. ಸದ್ಯ ಈ ಜಾಲಕ್ಕೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Tue, 5 May 26

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ