ಬೆಂಗಳೂರು: ಪಾರ್ಟಿಗಳಲ್ಲಿ ಡ್ರಗ್ಸ್ ಕಂಡುಬಂದರೆ ರೆಸಾರ್ಟ್, ಹೋಂ ಸ್ಟೇ, ಹೋಟೆಲ್ ಮಾಲೀಕರ ಮೇಲೂ ಕೇಸ್

ಬೆಂಗಳೂರು ಹೊರವಲಯ ರೇವ್ ಪಾರ್ಟಿ, ಮೋಜು ಮಸ್ತಿ‌ಯಿಂದಲೇ ಸುದ್ದಿಯಾಗುತ್ತಿದೆ. ಪಾರ್ಟಿಯಲ್ಲಿ ಡ್ರಗ್ಸ್ ಘಾಟು ಕೂಡ ಜೋರಾಗಿರುತ್ತದೆ. ಇದಕ್ಕೆ ಕಡಿವಾಣ ಹಾಕಲು ಈಶಾನ್ಯ ವಿಭಾಗ ಪೊಲೀಸರು ರೆಸಾರ್ಟ್, ಹೋಂ ಸ್ಟೇ, ಫಾರ್ಮ್ ಹೌಸ್ ಮತ್ತು ಹೋಟೆಲ್ ಮಾಲೀಕರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಇದರಿಂದಾಗಿ, ಡ್ರಗ್ಸ್ ಚಟುವಟಿಕೆ ಕಂಡುಬಂದರೆ ಇನ್ನು ರೆಸಾರ್ಟ್, ಹೋಂ ಸ್ಟೇ, ಹೋಟೆಲ್ ಮಾಲೀಕರೇ ಹೊಣೆಯಾಗಲಿದ್ದಾರೆ.

ಬೆಂಗಳೂರು: ಪಾರ್ಟಿಗಳಲ್ಲಿ ಡ್ರಗ್ಸ್ ಕಂಡುಬಂದರೆ ರೆಸಾರ್ಟ್, ಹೋಂ ಸ್ಟೇ, ಹೋಟೆಲ್ ಮಾಲೀಕರ ಮೇಲೂ ಕೇಸ್
ಸಾಂದರ್ಭಿಕ ಚಿತ್ರ
Updated By: Ganapathi Sharma

Updated on: Jul 07, 2025 | 7:42 AM

ಬೆಂಗಳೂರು, ಜುಲೈ 7: ಬೆಂಗಳೂರು (Bengaluru) ಹೊರವಲಯದಲ್ಲಿ ನಿರಂತರವಾಗಿ ಪಾರ್ಟಿ, ಮೋಜು-ಮಸ್ತಿಗಳು ನಡೆಯುತ್ತಲೇ ಇರುತ್ತವೆ. ರೆಸಾರ್ಟ್, ಹೋಂ ಸ್ಟೇ, ಹೋಟೆಲ್​​ಗನ್ನು ಬುಕ್ ಮಾಡುವ ಪಾರ್ಟಿ ಆಯೋಜಕರು, ಬರ್ತ್ ಡೇ, ಎಂಗೇಜ್​​ಮೆಂಟ್, ಮದುವೆ, ರೇವ್ ಪಾರ್ಟಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾರೆ. ಇಂಥ ಹಲವು ಕಾರ್ಯಕ್ರಮದಲ್ಲಿ ಡ್ರಗ್ಸ್ (Drugs) ಸೇವನೆ ಕೂಡ ನಡೆಯುತ್ತದೆ. ಖಚಿತ ಮಾಹಿತಿ ಮೇರೆಗೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಡ್ರಗ್ಸ್ ಸೀಜ್ ಮಾಡಿದ್ದಾರೆ. ಅದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈಶಾನ್ಯ ವಿಭಾಗ ಪೊಲೀಸರು ಮಾಲೀಕರಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಜುಲೈ 5 ರಂದು ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ರೆಸಾರ್ಟ್, ಹೋಂ ಸ್ಟೇ, ಫಾರ್ಮ್ ಹೌಸ್, ಹೋಟೆಲ್ ಮಾಲೀಕರ ಜೊತೆಗೆ ಸಭೆ ನಡೆಸಿದ ಈಶಾನ್ಯ ವಿಭಾಗ ಡಿಸಿಪಿ ಸಜೀತ್ ಎಚ್ಚರಿಕೆ ಕೊಟ್ಟಿದ್ದಾರೆ. ಮಾಲೀಕರು ಕಾನೂನಾತ್ಮಕವಾಗಿ ಏನು ಮಾಡಬೇಕು? ಏನು ಮಾಡಬಾರದು ಎಂಬ ಸೂಚನೆಯನ್ನು ಈ ಸಭೆಯಲ್ಲಿ ಕೊಡಲಾಗಿದೆ.

ರೆಸಾರ್ಟ್, ಹೋಂ ಸ್ಟೇ ಮಾಲೀಕರಿಗೆ ನೀಡಿದ ಸೂಚನೆಗಳೇನು?

ಯಾವುದೇ ಹೋಂ ಸ್ಟೇ ನಡೆಸುವವರು ಪ್ರವಾಸೋದ್ಯಮ ಇಲಾಖೆ ಸೇರಿದಂತೆ, ಪೊಲೀಸರ‌ ಅನುಮಾತಿ ಪಡೆದಿರಬೇಕು. ಪ್ರತಿನಿತ್ಯ ಬಾಡಿಗೆ ನೀಡುವವರ ಮಾಹಿತಿಯನ್ನು ಪೊಲೀಸರಿಗೆ ತಿಳಿಸಬೇಕು ಎಂದು ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲದೆ, ಕಾನೂನುಬಾಹಿರ ಚಟುವಟಿಕೆಗಳು ಪಾರ್ಟಿಯಲ್ಲಿ ನಡೆದರೆ ಮಾಲೀಕರ ವಿರುದ್ಧವೂ ಕೇಸ್ ಮಾಡಲಾಗುತ್ತದೆ ಎಂದು ಈಶಾನ್ಯ ವಿಭಾಗ ಡಿಸಿಪಿ ಸಜೀತ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ
ಸಿಎಂ ಬದಲಾವಣೆ ಚರ್ಚೆಗೆ ಸ್ವಾಮೀಜಿಗಳೂ ಎಂಟ್ರಿ
ಹೃದಯಾಘಾತ ಪ್ರಕರಣ: ಸಿಎಂ ಹೇಳಿಕೆ ಬೇಜವಾಬ್ದಾರಿ ಪರಮಾವಧಿ, ಜೋಶಿ
ಸಿದ್ದರಾಮಯ್ಯಗೆ ಹೈಕಮಾಂಡ್ ಮಹತ್ವದ ಹುದ್ದೆ: ಅಂತೆ-ಕಂತೆಗಳಿಗೆ ಸಿಎಂ ತೆರೆ
ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳು:ಡಿಕೆ ಶಿವಕುಮಾರ್

ಇದನ್ನೂ ಓದಿ: ಇಡಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಪತ್ತೆ: ನಟಿ ರನ್ಯಾ ರಾವ್​ಗೆ ಸೇರಿದ ಕೋಟ್ಯಾಂತರ ರೂ. ಆಸ್ತಿ ಜಪ್ತಿ

ಪೊಲೀಸರು ಎಷ್ಟೇ ಪ್ರಯತ್ನಪಟ್ಟರೂ ಕೂಡ ಪಾರ್ಟಿಗಳಲ್ಲಿ ಡ್ರಗ್ಸ್ ಪೂರೈಕೆ ಆಗಾಗ ನಡೆಯುತ್ತಲೇ ಇರುತ್ತದೆ. ಅದಕ್ಕೆ ಸಂಪೂರ್ಣ ಕಡಿವಾಣ ಹಾಕುವ ಕೆಲಸವನ್ನು ಪೊಲೀಸರು ಮಾಡಲೇಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 am, Mon, 7 July 25