AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಕೆಎಸ್​ಆರ್ ರೈಲು ನಿಲ್ದಾಣದಲ್ಲಿ ಮಹಿಳೆಗೆ ಕಿರುಕುಳ ನೀಡಿದ ಕುಡುಕ ಟಿಸಿ ಅರೆಸ್ಟ್

ಕೆಎಸ್​ಆರ್ ರೈಲು ನಿಲ್ದಾಣದಲ್ಲಿ (KSR Railway Station) ಮಹಿಳಾ ಪ್ರಯಾಣಿಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಾರತೀಯ ರೈಲ್ವೆಯ ಉಪ ಮುಖ್ಯ ಟಿಕೆಟ್ ಪರಿವೀಕ್ಷಕರೊಬ್ಬರನ್ನು (DCTI) ಬಂಧಿಸಲಾಗಿದೆ.

Bengaluru: ಕೆಎಸ್​ಆರ್ ರೈಲು ನಿಲ್ದಾಣದಲ್ಲಿ ಮಹಿಳೆಗೆ ಕಿರುಕುಳ ನೀಡಿದ ಕುಡುಕ ಟಿಸಿ ಅರೆಸ್ಟ್
ಆರೋಪಿ ಸಂತೋಷ್ ಕುಮಾರ್ ವಿ
Ganapathi Sharma
|

Updated on: Mar 21, 2023 | 3:35 PM

Share

ಬೆಂಗಳೂರು: ನಗರದ ಕೆಎಸ್​ಆರ್ ರೈಲು ನಿಲ್ದಾಣದಲ್ಲಿ (KSR Railway Station) ಮಹಿಳಾ ಪ್ರಯಾಣಿಕರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಾರತೀಯ ರೈಲ್ವೆಯ ಉಪ ಮುಖ್ಯ ಟಿಕೆಟ್ ಪರಿವೀಕ್ಷಕರೊಬ್ಬರನ್ನು (DCTI) ಬಂಧಿಸಲಾಗಿದೆ. ಆರೋಪಿ ಸಂತೋಷ್ ಕುಮಾರ್ ವಿ ಅವರನ್ನು ಈ ಹಿಂದೆಯೇ ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಮಾರ್ಚ್ 14ರಂದು ಸಂತೋಷ್ ಮಹಿಳೆಗೆ ಕಿರುಕುಳ ನೀಡಿದ್ದರು ಎಂದು ಕರ್ನಾಟಕ ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಸಂತೋಷ್ ಮಹಿಳೆಗೆ ಕಿರುಕುಳ ನೀಡುತ್ತಿರುವ ದೃಶ್ಯವನ್ನು ಮತ್ತೊಬ್ಬ ಪ್ರಯಾಣಿಕ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಮಹಿಳೆಯು ಡಿಸಿಟಿಐ ಜತೆ ನೊಂದು ಮಾತನಾಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ನೀವ್ಯಾಕೆ ನನ್ನನ್ನು ತಳ್ಳುತ್ತಿದ್ದೀರಿ, ನಿಧಾನವಾಗಿ ಮಾತನಾಡಿ. ಟಿಕೆಟ್ ಕಾಯ್ದಿರಿಸಿದ ಕಾರಣ ನಾನಿಲ್ಲಿಗೆ ಬಂದಿದ್ದೇನೆ ಎಂದು ಮಹಿಳೆ ಹೇಳುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

ಟಿಕೇಟ್ ತೋರಿಸು ಅಂತ ಆವಾಗಿನಿಂದಲೂ ಕೇಳುತ್ತಾ ಇದ್ದೇನೆ. ಟಿಕೆಟ್ ಚೆಕ್ ಮಾಡುವುದು ನನ್ನ ಕೆಲಸ. ತೋರಿಸಿ ಹೋಗು ಎಂದು ನಿನಗೇ ಹೇಳುತ್ತಿದ್ದೇನೆ” ಎಂದು ಆರೋಪಿ ಹೇಳುತ್ತಿರುವುದೂ ವಿಡಿಯೋದಲ್ಲಿ ಕಂಡುಬಂದಿದೆ.

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಮಹಿಳೆ ಪಶ್ಚಿಮ ಬಂಗಾಳದವರಾಗಿದ್ದು ಉದ್ಯೋಗ ಅರಸುವುದಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಪಶ್ಚಿಮ ಬಂಗಾಳಕ್ಕೆ ತೆರಳುವುದಕ್ಕಾಗಿ ಎಸ್​​ಎಂವಿಟಿ ಬೆಂಗಳೂರು ಹಮ್​ಸಫರ್ ಎಕ್ಸ್​​ಪ್ರೆಸ್​​ ರೈಲಿಗೆ ತೆರಳಿದ್ದಾಗ ಘಟನೆ ನಡೆದಿದೆ.

ಇದನ್ನೂ ಓದಿ: ಕಲಬುರಗಿ: ರೈತ ಮಹಿಳೆಯ ಬರ್ಬರ ಕೊಲೆ; ಅತ್ಯಾಚಾರ ಮಾಡಿ, ಹತ್ಯೆ ಮಾಡಿರುವ ಶಂಕೆ

ಮಹಿಳೆಯು ಬ್ಯಾಗ್​ಗಳೊಂದಿಗೆ ರೈಲು ನಿಲ್ದಾಣಕ್ಕೆ ಬಂದಾಗ ಆರೋಪಿಯು ಟಿಕೆಟ್ ತೋರಿಸುವಂತೆ ಕೇಳಿದ್ದರು. ಆಗ ಮಹಿಳೆಯು ತುಸು ಹೊತ್ತಿನಲ್ಲಿ ತೋರಿಸುತ್ತೇನೆ ಎಂದು ಹೇಳಿದ್ದಾರೆ. ಮದ್ಯ ಕುಡಿದ ಅಮಲಿನಲ್ಲಿದ್ದ ಆರೋಪಿಯು ಆಕೆಗೆ ಕಿರುಕುಳ ನೀಡಿದ್ದಲ್ಲದೆ ತಳ್ಳಿದ್ದಾರೆ. ಪೆನ್​ನಿಂದ ಆಕೆಯ ಮುಖದ ಮೇಲೆ ಮಾರ್ಕ್ ಮಾಡಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಲದೇ ಆರೋಪಿಯು ಮಹಿಳೆಯನ್ನು ನಿಂದಿಸಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಸಂತ್ರಸ್ತೆ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದಾಗ, ಯಾರೂ ನನ್ನನ್ನು ಏನೂ ಮಾಡಲಾಗದು. ಹೋಗು ಇಲ್ಲಿಂದ ಎಂದು ಧಮಕಿ ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಮಹಿಳೆ ನೀಡಿದ ದೂರು ಆಧರಿಸಿ ಕರ್ನಾಟಕ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್