AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಆರ್ಥಿಕ ಸುಳಿಯೊಳಗೆ ಸಿಲುಕಿದ 58 ವರ್ಷ ಇತಿಹಾಸವಿರುವ ಶಾಲೆ; ಬಂದ್​​ಗೆ ನಿರ್ಧಾರ

ಬೆಂಗಳೂರಿನಲ್ಲಿರುವ 58 ವರ್ಷಗಳ ಇತಿಹಾಸವಿರುವ ಈಸ್ಟ್ ವೆಸ್ಟ್ ಅಕಾಡೆಮಿ ಶಾಲೆ ಮುಚ್ಚಲು ನಿರ್ಧರಿಸಲಾಗಿದೆ. ಆಡಳಿತ ಮಂಡಳಿಯ ಈ ನಿರ್ಧಾರ ಸದ್ಯ ಪೋಷಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ 350ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಶಾಲೆ ಮುಚ್ಚದಂತೆ ಪೋಷಕರಿಂದ ಆಗ್ರಹ ಕೇಳಿಬಂದಿದೆ.

ಬೆಂಗಳೂರು: ಆರ್ಥಿಕ ಸುಳಿಯೊಳಗೆ ಸಿಲುಕಿದ 58 ವರ್ಷ ಇತಿಹಾಸವಿರುವ ಶಾಲೆ; ಬಂದ್​​ಗೆ ನಿರ್ಧಾರ
East West AcademyImage Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on: Mar 13, 2026 | 9:03 PM

Share

ಬೆಂಗಳೂರು, ಮಾರ್ಚ್​ 13: ಸುಮಾರು 350 ಮಕ್ಕಳು ವ್ಯಾಸಂಗ ಮಾಡುತ್ತಿರುವ ಈಸ್ಟ್ ವೆಸ್ಟ್ ಅಕಾಡೆಮಿ ಶಾಲೆಯನ್ನ (East West Academy school) ಮುಚ್ಚುವುದಕ್ಕೆ ಆಡಳಿತ ಮಂಡಳಿ ನಿರ್ಧಾರ ಮಾಡಿದೆ. ತೀವ್ರ ಆರ್ಥಿಕ ಸಂಕಷ್ಟವೇ ಇದಕ್ಕೆ ಕಾರಣವೆನ್ನಲಾಗುತ್ತಿದೆ. ಹೀಗಾಗಿ ಮಕ್ಕಳ ಭವಿಷ್ಯವೇ ಅತಂತ್ರವಾಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೋಷಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪೋಷಕರು ಆಕ್ರೋಶ

ರಾಜಾಜಿನಗರ ಮಾರುತಿ ಎಕ್ಸ್​​ಟೆನ್ಷನ್​ನಲ್ಲಿರುವ 58 ವರ್ಷಗಳ ಇತಿಹಾಸವಿರುವ ಈಸ್ಟ್ ವೆಸ್ಟ್ ಅಕಾಡೆಮಿ ಶಾಲೆಗೆ ಇಂದು ಪೋಷಕರು ದೌಡಾಯಿಸಿದ್ದರು. ಏಕೆಂದರೆ ಶಾಲೆಯನ್ನೇ ಬಂದ್​ ಮಾಡುವುದಕ್ಕೆ ಆಡಳಿತ ಮಂಡಳಿ ನಿರ್ಧಾರ ಮಾಡಿರುವುದೇ ಇದಕ್ಕೆ ಕಾರಣ. ಹೀಗಾಗಿ ಶಾಲೆಯಲ್ಲಿ 1ರಿಂದ 10ನೇ ತರಗತಿವರೆಗೆ ಓದುತ್ತಿರುವ 350ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿರುವ ಹಿನ್ನೆಲೆ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Karnataka Budget 2026: ಉರ್ದು ಶಾಲೆಗಳ ಅಭಿವೃದ್ಧಿಗೆ 400 ರೂ. ಕೋಟಿ ಅನುದಾನ ಘೋಷಣೆ ಮಾಡಿದ ಸಿಎಂ ಸಿದ್ಧರಾಮಯ್ಯ

ಇನ್ನು ಶಾಲೆಯು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, ನಿರ್ವಹಣೆ ಕಷ್ಟವಾಗಿದೆ ಎಂದು ಹೇಳುತ್ತಿರುವ ಆಡಳಿತ ಮಂಡಳಿ, ಸಿಬ್ಬಂದಿಗೆ ಸಂಬಳ ಕೊಡುವುದಕ್ಕೆ ಸಾಧ್ಯವಾಗುತ್ತಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ಈ ಶೈಕ್ಷಣಿಕ ವರ್ಷಗಳ ಪರೀಕ್ಷೆಗಳು ಮುಗಿದ ಬಳಿಕ ಮಕ್ಕಳನ್ನ ಬೇರೆ ಶಾಲೆಗೆ ದಾಖಲು ಮಾಡಿ ಅಂತಾ ಪೋಷಕರಿಗೆ ಸೂಚನೆ ನೀಡಿದ್ದಾರೆ. ಆದರೆ ಪೋಷಕರು ಇದಕ್ಕೆ ಸುತಾರಾಂ ಒಪ್ಪುತ್ತಿಲ್ಲ. ಫೀಸ್ ಸ್ವಲ್ಪ ಹೆಚ್ಚಿಗೆ ಮಾಡಿ, ಇನ್ನೊಂದು ವರ್ಷ ಶಾಲೆ ನಡೆಸಿ ಅಂತಾ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: Karnataka Budget 2026: ಸರ್ಕಾರಿ ಕಾಲೇಜುಗಳಲ್ಲಿ 2,000 ಬೋಧಕ ಸಿಬ್ಬಂದಿ ನೇಮಕಕ್ಕೆ ಗ್ರೀನ್​ ಸಿಗ್ನಲ್​ ನೀಡಿದ ಸಿಎಂ

ಇನ್ನು ಈ ಬಗ್ಗೆ ಸ್ಥಳೀಯ ಶಿಕ್ಷಣಾಧಿಕಾರಿ ಕೂಡ ಗಮನ ವಹಿಸದೇ ನಿರ್ಲಕ್ಷ್ಯ ತೋರಿದ್ದಾರಂತೆ. ಮ್ಯಾನೇಜ್​ಮೆಂಟ್ ಕೂಡ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಪೋಷಕರು ಕಿಡಿಕಾರಿದ್ದು, ಶಿಕ್ಷಣ ಇಲಾಖೆ ಈ ಬಗ್ಗೆ ಗಮನ ಹರಿಸಬೇಕಿದೆ.

ವರದಿ: ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ