ಬೆಂಗಳೂರಿನ ಪೂರ್ವ ವಲಯದಲ್ಲಿ ಇಂದು ಜನಸ್ಪಂದನಾ ಕಾರ್ಯಕ್ರಮ; RBANMS ಹೈಸ್ಕೂಲ್​ನಲ್ಲಿ ಜನ ಸಮಸ್ಯೆ ಆಲಿಸಲಿರುವ ಡಿಸಿಎಂ ಡಿಕೆ ಶಿವಕುಮಾರ್

ಇಂದು ಬೆಂಗಳೂರಿನ ಸೇಂಟ್ ಜಾನ್ಸ್ ರಸ್ತೆಯ RBANMS ಹೈಸ್ಕೂಲ್​ನಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್​ ಬೆಂಗಳೂರು ಜನರ ಸಮಸ್ಯೆ ಆಲಿಸಲಿದ್ದಾರೆ. ಒಂದೇ ಸೂರಿನಡಿ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬಿಎಂಆರ್​ಡಿಎ, ಬೆಸ್ಕಾಂ, BMRCL, ಸಾರಿಗೆ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಭಾಗಿಯಾಗಲಿದ್ದಾರೆ.

ಬೆಂಗಳೂರಿನ ಪೂರ್ವ ವಲಯದಲ್ಲಿ ಇಂದು ಜನಸ್ಪಂದನಾ ಕಾರ್ಯಕ್ರಮ; RBANMS ಹೈಸ್ಕೂಲ್​ನಲ್ಲಿ ಜನ ಸಮಸ್ಯೆ ಆಲಿಸಲಿರುವ ಡಿಸಿಎಂ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Follow us
TV9 Web
| Updated By: ಆಯೇಷಾ ಬಾನು

Updated on:Jan 06, 2024 | 6:58 AM

ಬೆಂಗಳೂರು, ಜ.06: ಸಿಲಿಕಾನ್ ಸಿಟಿ ಜನರ ಸಮಸ್ಯೆಗಳನ್ನ ಆಲಿಸಲು ಸರ್ಕಾರ (Congress Government) ಆರಂಭಿಸಿರೋ ಮನೆ ಬಾಗಿಲಿಗೆ ಸರ್ಕಾರ, ಇರಲಿ ನಿಮ್ಮ ಸಹಕಾರ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ಸಿಗ್ತಿದೆ. ಇತ್ತೀಚೆಗಷ್ಟೇ ಕೆ.ಆರ್.ಪುರಂನಲ್ಲಿ ಮೊದಲನೇ ಕಾರ್ಯಕ್ರಮ ನಡೆಸಿ ಯಶಸ್ವಿಯಾಗಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar), ನಿನ್ನೆ ಎರಡನೆಯ ಕಾರ್ಯಕ್ರಮವನ್ನ ಯಶಸ್ವಿಯಾಗಿ ಮುಗಿಸಿದ್ದಾರೆ. ಯಲಹಂಕ ವ್ಯಾಪ್ತಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ (Janaspandana) ಯಶಸ್ವಿಯಾಗಿದೆ. ಇಂದು ಬೆಂಗಳೂರಿನ ಪೂರ್ವ ವಲಯದಲ್ಲಿ ಹೆಬ್ಬಾಳ, ಶಿವಾಜಿನಗರ, ಪುಲಿಕೇಶಿನಗರ ಕ್ಷೇತ್ರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಅದರ ವಿವರ ಇಲ್ಲಿದೆ.

ಇಂದು ಬೆಂಗಳೂರಿನ ಸೇಂಟ್ ಜಾನ್ಸ್ ರಸ್ತೆಯ RBANMS ಹೈಸ್ಕೂಲ್​ನಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್​ ಬೆಂಗಳೂರು ಜನರ ಸಮಸ್ಯೆ ಆಲಿಸಲಿದ್ದಾರೆ. ಒಂದೇ ಸೂರಿನಡಿ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬಿಎಂಆರ್​ಡಿಎ, ಬೆಸ್ಕಾಂ, BMRCL, ಸಾರಿಗೆ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ವೇಳೆ ಗ್ಯಾರಂಟಿ ಯೋಜನೆ ಬಗ್ಗೆ ಅಹವಾಲು ನೀಡಬಹುದು. ಜನಸ್ಪಂದನಾ ಕಾರ್ಯಕ್ರಮದಲ್ಲಿ ಜನರ ದೂರು ಸ್ವೀಕರಿಸಲು 10 ಕೌಂಟರ್​ಗಳನ್ನು ಮಾಡಲಾಗಿದೆ. ವಿಕಲಚೇತನರು, ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಆಯಾ ಇಲಾಖೆಗೆ ಸಂಬಂಧಿಸಿದ ಕಂಪ್ಯೂಟರ್​ನಲ್ಲೇ ದೂರುಗಳನ್ನು ದಾಖಲಿಸಲಾಗುತ್ತೆ. ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ನೀಡಲು ಕಾರ್ಯಕ್ರಮ ಕೈಗೊಳ್ಳಲಾಗಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದೆ ಅಳಲು ತೋಡಿಕೊಂಡ ಜನರು

ಪ್ರತಿನಿತ್ಯ ಹಲವು ಸಮಸ್ಯೆಗಳನ್ನ ಮುಂದಿಟ್ಟುಕೊಂಡು ಜನಪ್ರತಿನಿಧಿಗಳ ಮನೆ ಬಾಗಿಲ ಬಳಿ ಕಾಯ್ತಿದ್ದ ಜನರಿಗೆ ಸರ್ಕಾರ ಹೊಸದಾಗಿ ಜಾರಿಮಾಡಿರೋ ಮನೆ ಬಾಗಿಲಿಗೆ ಸರ್ಕಾರ-ಇರಲಿ ನಿಮ್ಮ ಸಹಕಾರ ಜನಸ್ಪಂದನ ಕಾರ್ಯಕ್ರಮ ಉತ್ತಮ ವೇದಿಕೆ ಕಲ್ಪಿಸಿಕೊಟ್ಟಿದೆ. ಕೆ.ಆರ್.ಪುರಂನಲ್ಲಿ ಈ ಕಾರ್ಯಕ್ರಮ ಉದ್ಘಾಟಿಸಿ ಸುಮಾರು 4 ಸಾವಿರ ದೂರುಗಳನ್ನ ಆಲಿಸಿದ್ದ ಡಿ.ಕೆ.ಶಿವಕುಮಾರ್, ನಿನ್ನೆ ಯಲಹಂಕ, ಬ್ಯಾಟರಾಯನಪುರ ಹಾಗೂ ದಾಸರಹಳ್ಳಿ ವಿಧಾನಸಭಾಕ್ಷೇತ್ರದ ಜನರ ಸಮಸ್ಯೆ ಆಲಿಸಿದರು. ಕಂದಾಯ ಸಚಿವ ಕೃಷ್ಣ ಭೈರೇಗೌಡ, ಶಾಸಕರಾದ ಮುನಿರಾಜು, ಎಸ್.ಆರ್.ವಿಶ್ವನಾಥ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಜನರ ಅಹವಾಲು ಸ್ವೀಕರಿಸಿದರು.

ಯಲಹಂಕ ನ್ಯೂ ಟೌನ್​ನ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂಗೆ ಮೂರು ಕ್ಷೇತ್ರಗಳಿಂದ ಸುಮಾರು ಎರಡೂವರೆ ಸಾವಿರ ದೂರು ಬಂದಿವೆ. ಅಧಿಕಾರಿಗಳ ಜೊತೆ ಜನರ ಸಮಸ್ಯೆ ಆಲಿಸಿದ ಡಿಸಿಎಂ, ಕೆಲ ಜನರಿಗೆ ಸ್ಥಳದಲ್ಲೇ ಸಮಸ್ಯೆ ಬಗೆಹರಿಸಿದ್ರು. ಕಾರ್ಯಕ್ರಮ ಉದ್ಘಾಟಿಸಿದ ಡಿಕೆಶಿ, ವೇದಿಕೆಯಿಂದ ಇಳಿದು ವಿಕಲಚೇತನರ ಅರ್ಜಿ ಸ್ವೀಕರಿಸಿದ್ರು. ಇನ್ನು ಕಷ್ಟ ಅಂತಾ ಬಂದ ಅಂಧ ವಿದ್ಯಾರ್ಥಿನಿ ಇವ್ಯಾಂಜಲಿಗೆ ಬಿಬಿಎಂಪಿಯಲ್ಲಿ ಕೆಲಸ ನೀಡುವಂತೆ ಸೂಚಿಸೋ ಮೂಲಕ ಗಮನಸೆಳೆದ್ರು. ಸುಂಕದಕಟ್ಟೆಯ ಶಾಂತಿಧಾಮ ಶಾಲೆ ವಿದ್ಯಾರ್ಥಿನಿಯಾದ ಇವ್ಯಾಂಜಲಿಗೆ ಪಾಲಿಕೆಯಲ್ಲಿ ಕುಳಿತು ಮಾಡುವ ಕೆಲಸ ಕೊಡುವಂತೆ ಸೂಚಿಸಿದ್ರು. ನಮಗೆ ನೀವು ಅವಕಾಶ ಕೊಟ್ಟಿದ್ದೀರ, ನಿಮ್ಮ ಋಣ ತೀರಿಸ್ತೀನಿ ಅಂತಾ ಜನರಿಗೆ ಅಭಯ ನೀಡಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:57 am, Sat, 6 January 24

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM