AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಇಡಿ ದಾಳಿ ಪ್ರಕರಣ: 11.25 ಕೋಟಿ ನಗದು, 120 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ವಿಜಯ್ ತಾತಾ ಮತ್ತು ಸಹಚರರಿಗೆ ಸಂಬಂಧಿಸಿದ ಒಟ್ಟು ಎಂಟು ಸ್ಥಳಗಳಲ್ಲಿ ಫೆಬ್ರವರಿ 9 ರಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ ಇಡಿ, ಆರೋಪಿಗಳ ಅಕೌಂಟ್‌ನಲ್ಲಿದ್ದ ಸುಮಾರು 11.25 ಕೋಟಿ ಹಣವನ್ನ ಫ್ರೀಜ್ ಮಾಡಲಾಗಿದ್ದು, 120 ಕೋಟಿ ಮೌಲ್ಯದ ಆಸ್ತಿ ಪತ್ರಗಳು, ಡಿಜಿಟಲ್ ಎವಿಡೆನ್ಸ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಇಡಿ ದಾಳಿ ಪ್ರಕರಣ: 11.25 ಕೋಟಿ ನಗದು, 120 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಬೆಂಗಳೂರಿನಲ್ಲಿ ಇಡಿ ದಾಳಿ ಪ್ರಕರಣ: 11.25 ಕೋಟಿ ನಗದು, 120 ಕೋಟಿ ಮೌಲ್ಯದ ಆಸ್ತಿ ಜಪ್ತಿ
ಶಿವಪ್ರಸಾದ್​ ಬಿ.
| Edited By: Rakesh Nayak Manchi|

Updated on: Mar 05, 2024 | 7:09 PM

Share

ಬೆಂಗಳೂರು, ಮಾ.5: ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ವಿಜಯ್ ತಾತ ಮತ್ತು ಸಹಚರರಿಗೆ ಸಂಬಂಧಿಸಿದ ಒಟ್ಟು ಎಂಟು ಸ್ಥಳಗಳಲ್ಲಿ ನಡೆದಿದ್ದ ದಾಳಿ (ED Raid) ಪ್ರಕರಣ ಸಂಬಂಧ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಜಾರಿ ನಿರ್ದೇಶನಾಲಯ (Enforcement Directorate-ED), ಆರೋಪಿಗಳ ಅಕೌಂಟ್‌ನಲ್ಲಿದ್ದ ಸುಮಾರು 11.25 ಕೋಟಿ ಹಣವನ್ನ ಫ್ರೀಜ್ ಮಾಡಲಾಗಿದ್ದು, 120 ಕೋಟಿ ಮೌಲ್ಯದ ಆಸ್ತಿ ಪತ್ರಗಳು, ಡಿಜಿಟಲ್ ಎವಿಡೆನ್ಸ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಜಾರಿ ನಿರ್ದೇಶನಾಲಯ, ಫೆಬ್ರವರಿ 29 ಮತ್ತು ಮಾರ್ಚ್ 1 ರಂದು ಬೆಂಗಳೂರಿನ 8 ಸ್ಥಳಗಳಲ್ಲಿ ಪಿಎಂಎಲ್‌ಎ 2002 ರ ಅಡಿಯಲ್ಲಿ ಆರೋಪಿಗಳಾದ ವಿಜಯಾ ಆರ್ ತಾತಾ ಮತ್ತು ಅವರ ಸಹಚರರ ವಸತಿ ಆವರಣದಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು ಎಂದು ತಿಳಿಸಿದೆ.

ಇದನ್ನೂ ಓದಿ: DK Shivakumar: ಇಡಿ ಪ್ರಕರಣ ರದ್ದಾದರೂ ಡಿಕೆ ಶಿವಕುಮಾರ್​ಗೆ ಕಾಡುತ್ತಿದೆ ಸಿಬಿಐ ಕಂಟಕ!

ಆರ್ ಎಸ್ ಚಂದ್ರಶೇಖರ್, ಮುನಿರಾಜು ಕೆ, ಡಿ ನಾಗೇಂದ್ರ ಬಾಬು, ಮಂಜುನಾಥ್ ಬಿ ಎಸ್ ಮತ್ತು ಸಂಬಂಧಿತ ಕಂಪನಿಗಳ ಕಚೇರಿಗಳ ಮೇಲೆ. ಸಂಚಯ ಲ್ಯಾಂಡ್ ಆ್ಯಂಡ್ ಎಸ್ಟೇಟ್ ಪ್ರೈ. ಲಿಮಿಟೆಡ್, ಬಿಸಿಸಿ ಕನ್ಸ್ಟ್ರಕ್ಷನ್ಸ್ ಪ್ರೈ. ಲಿಮಿಟೆಡ್, ಆಕಾಶ್ ಎಜುಕೇಶನ್ ಅಂಡ್ ಡೆವಲಪ್‌ಮೆಂಟ್ ಟ್ರಸ್ಟ್, ಎಸ್ ವಿ ಕಾಂಕ್ರೀಟ್ ಪ್ರಾಜೆಕ್ಟ್ಸ್ ಪ್ರೈವೇಟ್, M/s ಸಂಚಯ ಲ್ಯಾಂಡ್ & ಎಸ್ಟೇಟ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರಿಗೆ ಸಂಬಂಧಿಸಿದ ಪ್ರಕರಣಗಳು ಇದಾಗಿದೆ.

ಜಾರಿ ನಿರ್ದೇಶನಾಲಯ ಟ್ವೀಟ್

ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಬ್ಯಾಂಕ್ ಖಾತೆಯಲ್ಲಿ 11.25 ಕೋಟಿ ರೂಪಾಯಿ ಪತ್ತೆಯಾಗಿದ್ದು, ಇದನ್ನು ಫ್ರೀಜ್ ಮಾಡಲಾಗಿದೆ. ಇದರೊಂದಿಗೆ 120 ಕೋಟಿ (ಅಂದಾಜು) ಮೌಲ್ಯದ ಸ್ಥಿರ/ಚರ ಆಸ್ತಿಗಳಿಗೆ ಸಂಬಂಧಿಸಿದ ವಿವಿಧ ದಾಖಲೆಗಳನ್ನು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್