AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕೋಣೆಯಲ್ಲಿ ಸಿಕ್ತು ಮಹಿಳೆ ಮತ್ತು ಕೆಲಸದವನ ಶವ! ವಿದೇಶದಿಂದ ಮರಳಿದ ಪತಿಗೆ ಕಾದಿತ್ತು ಶಾಕ್

ಬೆಂಗಳೂರಿನಲ್ಲಿ 65 ವರ್ಷದ ವೃದ್ಧೆ ಹತ್ಯೆಗೀಡಾಗಿದ್ದು, ಅದೇ ಮನೆಯಲ್ಲಿ ಮನೆ ಕೆಲಸಗಾರನ ಶವವೂ ಪತ್ತೆಯಾಗಿದೆ. ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ವೃದ್ಧೆಯ ಕುತ್ತಿಗೆಗೆ ಗಾಯಗಳಾಗಿದ್ದು, ಲೈಂಗಿಕ ದೌರ್ಜನ್ಯವಾಗಿರಬಹುದೆಂದು ಪೊಲೀಸರು ಊಹಿಸಿದ್ದಾರೆ. ಪತಿ ವಿದೇಶದಿಂದ ಮರಳಿದಾಗ ಈ ಘಟನೆ ಬೆಳಕಿಗೆ ಬಂದಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಒಂದೇ ಕೋಣೆಯಲ್ಲಿ ಸಿಕ್ತು ಮಹಿಳೆ ಮತ್ತು ಕೆಲಸದವನ ಶವ! ವಿದೇಶದಿಂದ ಮರಳಿದ ಪತಿಗೆ ಕಾದಿತ್ತು ಶಾಕ್
ಒಂದೇ ಕೋಣೆಯಲ್ಲಿ ಸಿಕ್ತು ಮಹಿಳೆ ಮತ್ತು ಕೆಲಸದವನ ಶವ!
ಭಾವನಾ ಹೆಗಡೆ
|

Updated on: Feb 03, 2026 | 2:41 PM

Share

ಬೆಂಗಳೂರು, ಫೆಬ್ರುವರಿ 03: ನಗರದಲ್ಲಿ ಭಾನುವಾರ ಬೆಳಗಿನ ಜಾವ 65 ವರ್ಷದ ಮಹಿಳೆಯೊಬ್ಬರು ತಮ್ಮ ನಿವಾಸದಲ್ಲೇ (Bengaluru) ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅದೇ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮನೆ ಕೆಲಸಗಾರನ ಶವವೂ ಅದೇ ಕೊಠಡಿಯಲ್ಲಿ ಪತ್ತೆಯಾಗಿದ್ದು, ಆತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ತನ್ನ ಕೋಣೆಯಲ್ಲೇ ಹತ್ಯೆಯಾದ ವೃದ್ಧೆ

ಮಹಿಳೆಯ ಪತಿ ವಿದೇಶ ಪ್ರವಾಸದಿಂದ ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಮರಳಿದ್ದರು. ಮನೆಯ ಬಾಗಿಲನ್ನು ಬಡಿದ ಪತಿಗೆ ಪತ್ನಿಯಿಂದ ಉತ್ತರ ಸಿಗದ ಕಾರಣ ಆತಂಕಗೊಂಡಿದ್ದರು. ಭಯಗೊಂಡ ಪತಿ ಮನೆಯಲ್ಲೇ ಇದ್ದ ತಮ್ಮ ಪುತ್ರಿಗೆ ಕರೆ ಮಾಡಿ ಮನೆಯೊಳಗೆ ಬಂದಿದ್ದರು. ಈ ವೇಳೆ ಮನೆ ಕೆಲಸಗಾರನು ಸಾಮಾನ್ಯವಾಗಿ ಮಲಗುತ್ತಿದ್ದ ಸ್ಥಳದಲ್ಲಿ ಕಾಣಿಸದಿರುವುದಕ್ಕೆ ವ್ಯಕ್ತಿಯಲ್ಲಿ ಅನುಮಾಣ ಮೂಡಿತ್ತು.

ನಂತರ ಪತ್ನಿ ಮಲಗುವ ಕೋಣೆಗೆ ತೆರಳಿದ ಪತಿಗೆ ಶಾಕ್ ಕಾದಿತ್ತು. ಹಾಸಿಗೆಯ ಮೇಲೆ ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಮೀಪದಲ್ಲೇ ಮನೆ ಕೆಲಸಗಾರನ ಶವವೂ ಕಂಡುಬಂದಿದೆ. ಇದನ್ನು ಕಂಡ ಪತಿಯ ಕೂಗಾಟಕ್ಕೆ ಪುತ್ರಿ ಧಾವಿಸಿ ಬಂದು ನೋಡಿದಾಗ ಆಕೆಯೂ ದಂಗಾಗಿದ್ದಳು. ನಂತರ ಪುತ್ರಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಲೈಂಗಿಕ ದೌರ್ಜನ್ಯವಾಗಿರುವ ಸಂದೇಹ

ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯ ಕುತ್ತಿಗೆಯಲ್ಲಿ ಗಾಯದ ಗುರುತುಗಳು ಕಂಡುಬಂದಿದ್ದು, ಕುತ್ತಿಗೆ ಹಿಸುಕಿ ಹತ್ಯೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮನೆ ಕೆಲಸಗಾರ ಮದ್ಯ ವ್ಯಸನಿಯಾಗಿದ್ದು, ವೈದ್ಯರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರಬಹುದೆಂದೂ ಊಹಿಸಿದ್ದಾರೆ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಘಟನೆಗೆ ಸಂಬಂಧಿಸಿದ ಸಂಪೂರ್ಣ ಸತ್ಯಾಸತ್ಯತೆ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ