ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಇವಿ ಬೈಕ್​ ಸಬ್ಸಿಡಿ ಯೋಜನೆ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ

ಬೆಂಗಳೂರಿನಲ್ಲಿ 'ಆಪ್ಕಿ ಇವಿ' ಶೋರೂಂ ಮಾಲೀಕರು ಸಬ್ಸಿಡಿ ನೆಪದಲ್ಲಿ ಗ್ರಾಹಕರಿಗೆ 35 ಕೋಟಿ ರೂ. ಎಲೆಕ್ಟ್ರಿಕ್ ಬೈಕ್ ಸಾಲ ವಂಚನೆ ಮಾಡಿದ್ದಾರೆ. 3,250 ಜನರಿಂದ 20,000 ರೂ. ಠೇವಣಿ ಪಡೆದು, ಅವರ ತಿಳುವಳಿಕೆ ಇಲ್ಲದೆ ಕೊಟಕ್ ಮಹೀಂದ್ರಾ ಬ್ಯಾಂಕ್‌ನಿಂದ ದುಬಾರಿ ಸಾಲ ಮಾಡಿಸಿದ್ದಾರೆ. ಬ್ಯಾಂಕ್ ಮ್ಯಾನೇಜರ್ ಕೂಡ ಇದರಲ್ಲಿ ಭಾಗಿಯಾಗಿದ್ದಾರೆಂಬ ಆರೋಪವಿದೆ. ಸಂತ್ರಸ್ತರು ನ್ಯಾಯಕ್ಕಾಗಿ ಬೈಕ್ ರ್ಯಾಲಿ ನಡೆಸಿ ಪ್ರತಿಭಟಿಸಿದ್ದಾರೆ. ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಇವಿ ಬೈಕ್​ ಸಬ್ಸಿಡಿ ಯೋಜನೆ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ
'ಆಪ್ಕಿ ಇವಿ'

Updated on: Mar 03, 2026 | 3:10 PM

ಬೆಂಗಳೂರು, ಮಾ.3: ಸಿಲಿಕಾನ್ ಸಿಟಿಯಲ್ಲಿ ಎಲೆಕ್ಟ್ರಿಕ್ ಬೈಕ್ ವಿತರಿಸುವ ನೆಪದಲ್ಲಿ ಬರೋಬ್ಬರಿ 35 ಕೋಟಿ ರೂಪಾಯಿ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ‘ಆಪ್ಕಿ ಇವಿ’ (Aapki EV) ಶೋರೂಂ ಮಾಲೀಕರು ಸುಮಾರು 3,250 ಜನರಿಗೆ ಸಬ್ಸಿಡಿ ಆಸೆ ತೋರಿಸಿ ಲೋನ್ ಸುಳಿಗೆ ಸಿಲುಕಿಸಿದ್ದಾರೆ. ಕೇವಲ 20,000 ರೂ. ಡಿಪಾಸಿಟ್ ಮಾಡಿದರೆ ಸಾಕು, ಉಳಿದ ಹಣ ಕೇಂದ್ರ ಸರ್ಕಾರದ ಸಬ್ಸಿಡಿಯಡಿ ಪಾವತಿಯಾಗುತ್ತದೆ ಎಂದು ನಂಬಿಸಲಾಗಿತ್ತು. ಬೈಕ್ ನೀಡುವ ನೆಪದಲ್ಲಿ ಗ್ರಾಹಕರಿಂದ ಆಧಾರ್, ಪಾನ್ ಕಾರ್ಡ್ ಪಡೆದ ಶೋರೂಂ ಮಾಲೀಕರು, ಗ್ರಾಹಕರಿಗೆ ತಿಳಿಯದಂತೆ ಕೊಟಕ್ ಮಹೀಂದ್ರಾ ಬ್ಯಾಂಕ್ ಮೂಲಕ ಲೋನ್ ಮಾಡಿಸಿದ್ದಾರೆ.

ಕೇವಲ 35,000 ರೂ. ಬೆಲೆಬಾಳುವ ಸಾಧಾರಣ ಇವಿ ಬೈಕ್‌ಗೆ ಬರೋಬ್ಬರಿ 1.50 ಲಕ್ಷ ರೂಪಾಯಿ ಲೋನ್ ಮಾಡಿಸಿ ಬ್ಯಾಂಕ್‌ನಿಂದ ಹಣ ಪಡೆದುಕೊಳ್ಳಲಾಗಿದೆ. ಈ ವಂಚನೆಯಲ್ಲಿ ಕೊಟಕ್ ಮಹೀಂದ್ರಾ ಬ್ಯಾಂಕ್ ಮ್ಯಾನೇಜರ್ ಕೂಡ ಭಾಗಿಯಾಗಿದ್ದು, ಗ್ರಾಹಕರ ಅನುಮತಿಯಿಲ್ಲದೆ ಲೋನ್ ಮಂಜೂರು ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಧಾರವಾಡ ಆಯ್ತು, ಈಗ ರಾಜ್ಯಾದ್ಯಂತ ಹೋರಾಟಕ್ಕೆ ಧುಮುಕಲಿರುವ ಉದ್ಯೋಗಾಕಾಂಕ್ಷಿಗಳು!

ಇಲ್ಲಿದೆ ನೋಡಿ ವಿಡಿಯೋ:
EV Bike Showroom Allegedly Cheats People With ₹35 Crore In Name Of Subsidy Scheme

ತಮ್ಮ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಸಾಲ ಇರುವುದನ್ನು ಕಂಡು ಬೆಚ್ಚಿಬಿದ್ದ ಗ್ರಾಹಕರು ಇಂದು ಜಾಲಹಳ್ಳಿ ಮೆಟ್ರೋ ನಿಲ್ದಾಣದಿಂದ ಎಂ.ಜಿ. ರಸ್ತೆವರೆಗೆ ಬೃಹತ್ ಬೈಕ್ ರ್ಯಾಲಿ ನಡೆಸಿ ಪ್ರತಿಭಟಿಸಿದರು. 500ಕ್ಕೂ ಹೆಚ್ಚು ಗ್ರಾಹಕರು ಭಾಗವಹಿಸಿ, ತಮಗೆ ನ್ಯಾಯ ಕೊಡಿಸುವಂತೆ ಮತ್ತು ಆರೋಪಿಗಳಾದ ರವಿ ಹಾಗೂ ಹನುಮಂತರಾಜು ಅವರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಗುಂಟೆ ಮತ್ತು ಪೀಣ್ಯ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಗಲಗುಂಟೆ ಠಾಣಾಧಿಕಾರಿಗಳು, ಶೀಘ್ರವೇ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Tue, 3 March 26

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us