Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡಿಸೆಂಬರ್ 11 ರಿಂದ ನಂದಿ ಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಸೇವೆ ಆರಂಭ

nandi betta: ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟಕ್ಕೆ ಡಿಸೆಂಬರ್ 11 ರಿಂದ ವಿದ್ಯುತ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಕಾರ್ಯನಿರ್ವಹಿಸುವ ಮೇನ್‌ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳನ್ನು ವಿಸ್ತರಿಸಲು ನಿರ್ಧರಿಸಲಾಗಿದೆ.

ಬೆಂಗಳೂರು: ಡಿಸೆಂಬರ್ 11 ರಿಂದ ನಂದಿ ಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಸೇವೆ ಆರಂಭ
ನಂದಿ ಬೆಟ್ಟ ರೈಲು ನಿಲ್ದಾಣ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 06, 2023 | 10:43 AM

ಬೆಂಗಳೂರು, ಡಿಸೆಂಬರ್​​ 06: ಜಗದ್ವಿಖ್ಯಾತ ಪ್ರವಾಸಿ ತಾಣ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮ (Nandi Hills) ಕ್ಕೆ ಡಿಸೆಂಬರ್ 11 ರಿಂದ ವಿದ್ಯುತ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಕಾರ್ಯನಿರ್ವಹಿಸುವ ಮೇನ್‌ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳನ್ನು ವಿಸ್ತರಿಸಲು ನಿರ್ಧರಿಸಲಾಗಿದೆ. 06531/06532 ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ-ಕಂಟೋನ್ಮೆಂಟ್, 06535/06583 ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ, ಮತ್ತು 06593/06594 ಯಶವಂತಪುರ-ಚಿಕ್ಕಬಳ್ಳಾಪುರ-ಯಶವಂತಪುರ ರೈಲುಗಳು ಸಂಚರಿಸಲಿವೆ.

ಯಲಹಂಕ ಮತ್ತು ಚಿಕ್ಕಬಳ್ಳಾಪುರ ನಡುವಿನ ವಿದ್ಯುದ್ದೀಕರಣವು ಮಾರ್ಚ್ 2022 ರಲ್ಲಿ ಪೂರ್ಣಗೊಂಡಿತು, ಆದರೆ ಈ ಮಾರ್ಗದಲ್ಲಿ ವಿದ್ಯುತ್ ರೈಲುಗಳ ಸಂಚಾರವನ್ನು ನೈಋತ್ಯ ರೈಲ್ವೆ ಹಲವು ಕಾರಣಗಳಿಂದ ವಿಳಂಬ ಮಾಡಿದೆ.

ಪ್ರಸ್ತುತ, 06387/06388 ಕೆಎಸ್​ಆರ್​​ ​ಬೆಂಗಳೂರು-ಕೋಲಾರ-ಕಂಟೋನ್ಮೆಂಟ್ ಡೀಸೆಲ್ ಮಲ್ಟಿಪಲ್ ಯುನಿಟ್ ಮತ್ತು 16549/16550 ಕೆಎಸ್​ಆರ್​​ ಬೆಂಗಳೂರು – ಕೋಲಾರ- ಕೆಎಸ್​ಆರ್​​ ಬೆಂಗಳೂರು ರೈಲುಗಳು ನಂದಿ ನಿಲ್ದಾಣದಲ್ಲಿ ನಿಲುಗಡೆ ಮಾಡುತ್ತವೆ.

ಇದನ್ನೂ ಓದಿ: Nandi Hills Ropeway: ಸದ್ಯಕ್ಕಂತೂ ಇಲ್ಲ ನಂದಿ ಹಿಲ್ಸ್ ರೋಪ್ ವೇ! ಕಾಮಗಾರಿ ಮತ್ತಷ್ಟು ವಿಳಂಬವಾಗಲಿದೆ, ಅಸಲಿಗೆ ಇನ್ನೂ ಅನುಮತಿಯೆ ಸಿಕ್ಕಿಲ್ಲ!

ನಂದಿ ನಿಲ್ದಾಣದಿಂದ ನಂದಿ ಬೆಟ್ಟದ ತಪ್ಪಲಿನಲ್ಲಿರುವ ಭೋಗನಂದೀಶ್ವರ ದೇವಸ್ಥಾನಕ್ಕೆ ಸುಮಾರು 1.4 ಕಿ.ಮೀ ದೂರವಿದೆ. ಹೆಚ್ಚುವರಿ 15-18 ಕಿಮೀ. ಕ್ರಮಿಸಬೇಕಾಗುತ್ತದೆ. ನಂದಿ ರೈಲು ನಿಲ್ದಾಣದಿಂದ ಈ ಸ್ಥಳಗಳಿಗೆ ಬಹು-ಮಾದರಿ ಸಾರ್ವಜನಿಕ ಅಥವಾ ಸಾಮಾನ್ಯ ಸಾರಿಗೆ (ಬಸ್ಸುಗಳು, ಆಟೋಗಳು, ಇತ್ಯಾದಿ) ಕಡಿಮೆ ಇದ್ದು ಪ್ರವಾಸಿಗೆರಿಗೆ ಹೆಚ್ಚು ಅನುಕೂಲವಾಗುವುದಿಲ್ಲ ಎನ್ನಲಾಗಿದೆ. ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ನೈಋತ್ಯ ರೈಲ್ವೆ ಇಲಾಖೆ ಸಲಹೆ ನೀಡಿದ್ದಾರೆ.

ನಂದಿ ಬೆಟ್ಟದಲ್ಲಿ ಸೂರ್ಯೋದಯವನ್ನು ನೋಡಬೇಕು ಎನ್ನುವವರು 6:37 ಕ್ಕೆ ನಂದಿ ಬೆಟ್ಟಕ್ಕೆ ತಲುಪುತ್ತಾರೆ. ಆದರೆ ಅಂತಹ ಪ್ರವಾಸಿಗರಿಗೆ ಈ ರೈಲುಗಳ ಸಂಚಾರ ಉಪಯೋಗವಿಲ್ಲ ಎಂದು ಕಾಲೇಜು ವಿದ್ಯಾರ್ಥಿ ಮಂಜು ನಾಯರ್ ಹೇಳಿರುವುದು ವರದಿ ಆಗಿದೆ.

ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯನ್ನು ನೋಡಲು ವಿದ್ಯಾರ್ಥಿಗಳು ಸೇರಿದಂತೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಹಾಗಾಗಿ ಚಿಕ್ಕಬಳ್ಳಾಪುರಕ್ಕೆ ರೈಲು ಸೇವೆಗಳನ್ನು ವಿಸ್ತರಿಸುವುದರಿಂದ ಪ್ರಯೋಜನವಾಗಲಿದೆ. ಆದರೆ ಬೆಟ್ಟಹಲಸೂರು, ದೊಡ್ಡಜಾಲ, ಚನ್ನಸಂದ್ರದಂತಹ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಇರುವುದಿಲ್ಲ.

ಇದನ್ನೂ ಓದಿ: ವೀಕೆಂಡ್ ಮಸ್ತಿ; ಬೆಳ್ಳಂಬೆಳಗ್ಗೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರ ದಂಡು

ರೈಲು ಕಾರ್ಯಕರ್ತ ರಾಜ್‌ಕುಮಾರ್ ದುಗಾರ್ ಮಾತನಾಡಿದ್ದು, “ಬೆಟ್ಟಹಲಸೂರು ಸೇರಿದಂತೆ ಮಧ್ಯಂತರ ನಿಲ್ದಾಣಗಳಲ್ಲಿ ಈ ರೈಲುಗಳು ನಿಲುಗಡೆಯಾಗಬೇಕು. ಆದರೆ ಎಸ್‌ಡಬ್ಲ್ಯೂಆರ್ ಈ ನಿಲ್ದಾಣಗಳಲ್ಲಿ ನಿಲುಗಡೆ ನೀಡುತ್ತಿಲ್ಲ ಏಕೆಂದರೆ ಯಾವುದೇ ಏಜೆಂಟರು ತಿಂಗಳಿಗೆ ಕೇವಲ 1,500 ರೂ.ಗೆ ನಿಲುಗಡೆ ನಿಲ್ದಾಣಗಳನ್ನು ನಿರ್ವಹಿಸಲು ಸಿದ್ಧರಿಲ್ಲ” ಎಂದಿದ್ದಾರೆ.

ನೈಋತ್ಯ ರೈಲ್ವೆ , ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ (ಇಎನ್‌ಟಿಎಚ್) ಜೊತೆಗೆ ಈಗಾಗಲೇ ಈ ಮಾರ್ಗದಲ್ಲಿ ಮೂರು ಪಾರಂಪರಿಕ ಕೇಂದ್ರಗಳನ್ನು ಪುನಃಸ್ಥಾಪಿಸಿದೆ. ದೊಡ್ಡಜಾಲ, ದೇವನಹಳ್ಳಿ ಮತ್ತು ಆವತಿಹಳ್ಳಿ, ಮತ್ತು ನಂದಿ ನಿಲುಗಡೆಯ ಮರುಸ್ಥಾಪನೆ ಕಾರ್ಯವು ಎರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಅದು ಪೂರ್ಣಗೊಂಡ ನಂತರ ನಾವು ಬೇಗನೆ ರೈಲು ಸಂಚಾರ ಆರಂಭಿಸುತ್ತೇವೆ. ಆದ್ದರಿಂದ ಪ್ರವಾಸಿಗರು ನಂದಿ ಬೆಟ್ಟದಲ್ಲಿ ಸೂರ್ಯೋದಯವನ್ನು ವೀಕ್ಷಿಸಬಹುದಾಗಿದೆ ಎಂದು ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕಿ (ಬೆಂಗಳೂರು ವಿಭಾಗ) ಕುಸುಮಾ ಹರಿಪ್ರಸಾದ್​​ ಹೇಳಿರುವುದಾಗಿ ವರದಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.