ವಿದ್ಯುತ್​​ ತಂತಿ ತುಳಿದು ತಾಯಿ-ಮಗು ಸಾವು: ಬೆಸ್ಕಾಂನ ಐವರು ಅಧಿಕಾರಿಗಳು ಸಸ್ಪೆಂಡ್​​​

ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಅಪಘಾತವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆದೇಶಿಸಿದ್ದರು. ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್​​ ತಂತಿ ತುಳಿದು ತಾಯಿ-ಮಗು ಸಾವು: ಬೆಸ್ಕಾಂನ ಐವರು ಅಧಿಕಾರಿಗಳು ಸಸ್ಪೆಂಡ್​​​
ಬೆಸ್ಕಾಂ
Follow us
| Edited By: ವಿವೇಕ ಬಿರಾದಾರ

Updated on:Nov 21, 2023 | 7:53 AM

ಬೆಂಗಳೂರು ನ.21: ಪಾದಚಾರಿ ಮಾರ್ಗದಲ್ಲಿ ವಿದ್ಯುತ್ (Electricity) ಪ್ರವಹಿಸಿ ತಾಯಿ-ಮಗು ಸಜೀವದಹನ ಪ್ರಕರಣ ಸಂಬಂಧ ಬೆಸ್ಕಾಂ (Bescom) ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಇಬ್ಬರು ಹಿರಿಯ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದೇವೆ ಎಂದು ಬೆಸ್ಕಾಂ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಕಾಡುಗೋಡಿ ಉಪವಿಭಾಗದಲ್ಲಿ ಭಾನುವಾರ ನಡೆದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬೆಸ್ಕಾಂ, ಪ್ರಾಥಮಿಕ ಹಂತದ ವಿಚಾರಣೆಯ ಆಧಾರದ ಮೇಲೆ ಅವರ ವಿರುದ್ಧ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ.

ಭಾನುವಾರ ಬೆಳಿಗ್ಗೆ 5.30 ರ ಸುಮಾರಿಗೆ ತಮಿಳುನಾಡಿನಿಂದ ಆಗಮಿಸಿದ ಸೌಂದರ್ಯ (23) ಒಂಬತ್ತು ತಿಂಗಳ ಮಗು ಸುವಿಕ್ಷಾ ಲಿಯಾನೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಾದಚಾರಿ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದಿದ್ದಾರೆ. ಇದರಿಂದ ವಿದ್ಯುತ್​ ಪ್ರವಹಿಸಿ ಮೃತಪಟ್ಟಿದ್ದಾರೆ. ಪತಿ ಸಂತೋಷ್ ಕುಮಾರ್ ಅವರು, ಪತ್ನಿ ಮತ್ತು ಮಗುವನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಘಟನಾ ಸ್ಥಳದಲ್ಲಿ ಅವರ ಲಗೇಜ್-ಟ್ರಾಲಿ ಬ್ಯಾಗ್ ಮತ್ತು ಇತರ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್​ ತಂತಿ ತಗುಲಿ 70 ಜನರ ಸಾವು: ಇಲ್ಲಿದೆ ಸಂಪೂರ್ಣ ಡೀಟೈಲ್ಸ್​

ಈ ಸಂಬಂಧ ಮೃತಳ ಪತಿ ಸಂತೋಷ್ ಕುಮಾರ್ ನೀಡಿದ ದೂರಿನ ಮೇರೆಗೆ ಕಾಡುಗೋಡಿ ಪೊಲೀಸರು ಬೆಸ್ಕಾಂ ಅಧಿಕಾರಿಗಳ ವಿರುದ್ದನಿರ್ಲಕ್ಷ್ಯದ ಆರೋಪದಡಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಬೆಸ್ಕಾಂ ವೈಟ್ ಫೀಲ್ಡ್ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರ (ಇಇ) ಶ್ರೀರಾಮ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ(ಎಇಇ) ಸುಬ್ರಹ್ಮಣ್ಯ, ಸಹಾಯಕ ಅಭಿ ಯಂತರ(ಎಇ) ಚೇತನ್, ಕಿರಿಯ ಅಭಿಯಂತರ(ಜೆಇ) ರಾಜಣ್ಣ ಹಾಗೂ ಸ್ಟೇಷನ್ ಆಪರೇಟರ್ ಮಂಜುನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ ಠಾಣಾ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಅಪಘಾತವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆದೇಶಿಸಿದ್ದರು. ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:44 am, Tue, 21 November 23

ತಾಜಾ ಸುದ್ದಿ
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್