ಬೆಂಗಳೂರಿನಲ್ಲಿ ಇವಿ ಬೈಕ್ ಸ್ಕ್ಯಾಮ್! ಕೋಟ್ಯಾಂತರ ರೂ. ವಂಚಿಸಿ ಸಿಕ್ಕಿಬಿದ್ರು ಆರೋಪಿಗಳು

ಬೆಂಗಳೂರಿನಲ್ಲಿ ಇವಿ ಬೈಕ್ ಮಾರಾಟದ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ರಾಕೇಶ್ ಮತ್ತು ಹನುಮಂತರಾಜು ಬಿಲ್ಕರ್ ಬಂಧಿಸಲಾಗಿದೆ. ಮೋದಿ ಸ್ಕೀಮ್ ಹೆಸರಿನಲ್ಲಿ 35 ಸಾವಿರ ಮೌಲ್ಯದ ಬೈಕ್‌ಗೆ 1.5 ಲಕ್ಷ ರೂ. ಬಿಲ್ ಮಾಡಿ, ಗ್ರಾಹಕರಿಂದ 20 ಸಾವಿರ ಡಿಪಾಸಿಟ್ ಪಡೆದು ಅವರ ಹೆಸರಿನಲ್ಲಿ ಕೊಟಾಕ್ ಮಹೀಂದ್ರಾ ಬ್ಯಾಂಕ್‌ನಿಂದ ಸಾಲ ಮಾಡಿಸಿ ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ವಂಚನೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಭಾಗಿಯಾಗಿರುವ ಶಂಕೆಯೂ ವ್ಯಕ್ತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇವಿ ಬೈಕ್ ಸ್ಕ್ಯಾಮ್! ಕೋಟ್ಯಾಂತರ ರೂ. ವಂಚಿಸಿ ಸಿಕ್ಕಿಬಿದ್ರು ಆರೋಪಿಗಳು
ಆರೋಪಿಗಳಾದ ರಾಕೇಶ್ ಮತ್ತು ಹನುಮಂತರಾಜು

Updated on: Mar 13, 2026 | 10:38 AM

ಬೆಂಗಳೂರು, ಮಾರ್ಚ್​ 13: ಇವಿ ಬೈಕ್ (EV Bike) ಮಾರಾಟದ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಕೇಶ್ ಹಾಗೂ ಹನುಮಂತರಾಜು ಬಿಲ್ಕರ್ ಎಂದು ಗುರುತಿಸಲಾಗಿದೆ. ರಾಕೇಶ್​ನನ್ನು ಪೀಣ್ಯಾ ಪೊಲೀಸರು ಬಂಧಿಸಿದ್ದು, ಹನುಮಂತರಾಜು ಬಿಲ್ಕರ್​ನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಇಬ್ಬರನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಮೋದಿ ಸ್ಕೀಮ್ ಹೆಸರಿನಲ್ಲಿ ವಂಚನೆ

ಮೋದಿ ಸ್ಕೀಮ್ ಹೆಸರಿನಲ್ಲಿ 3250 ಇವಿ ಬೈಕ್ ಮಾರಾಟ ಮಾಡುವ ನೆಪದಲ್ಲಿ ಸುಮಾರು 35 ಸಾವಿರ ರೂಪಾಯಿ ಮೌಲ್ಯದ ಬೈಕ್‌ಗೆ ಒಂದೂವರೆ ಲಕ್ಷ ರೂಪಾಯಿ ಬಿಲ್ ಮಾಡಿ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿತ್ತು. ಸಬ್ಸಿಡಿ ಸೌಲಭ್ಯ ದೊರೆಯುತ್ತದೆ ಎಂದು ನಂಬಿಸಿ ಕೋಟಿ ಕೋಟಿ ರೂಪಾಯಿ ಲೂಟಿ ಮಾಡಲಾಗುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಗ್ರಾಹಕರಿಂದ ಕೇವಲ 20 ಸಾವಿರ ರೂಪಾಯಿ ಡಿಪಾಸಿಟ್ ಪಡೆದು ಅವರ ದಾಖಲೆಗಳನ್ನು ಸಂಗ್ರಹಿಸಲಾಗುತ್ತಿತ್ತು. ಬಳಿಕ ಆ ದಾಖಲೆಗಳನ್ನು ಬಳಸಿ ಗ್ರಾಹಕರ ಹೆಸರಿನಲ್ಲಿ ಕೊಟಾಕ್ ಮಹೀಂದ್ರಾ ಬ್ಯಾಂಕ್‌ನಲ್ಲಿ ಸುಮಾರು 1.5 ಲಕ್ಷ ರೂಪಾಯಿ ಸಾಲ ಮಾಡಿಸಲಾಗುತ್ತಿತ್ತು. ಇದೇ ಹಣವನ್ನು ಇವಿ ಶೋರೂಮ್ ಮಾಲೀಕರು ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ ಬಸ್​​​ನಲ್ಲಿ 90 ಲಕ್ಷಕ್ಕೂ ಅಧಿಕ ಮೌಲ್ಯದ, ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ: ಊಟಕ್ಕೆ ನಿಲ್ಲಿಸಿದಾಗ ಕೃತ್ಯ

‘ಆಪ್ಕಿ ಇವಿ’ ಶೋರೂಮ್‌ನ ಮಾಲೀಕರಾದ ರಾಕೇಶ್ ಮತ್ತು ಹನುಮಂತರಾಜು ಈ ವಂಚನೆಯ ಪ್ರಮುಖ ಆರೋಪಿಗಳಾಗಿದ್ದು, ಪ್ರಕರಣದಲ್ಲಿ ಕೊಟಾಕ್ ಮಹೀಂದ್ರಾ ಬ್ಯಾಂಕ್‌ನ ಮ್ಯಾನೇಜರ್ ಸಹ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬಾಗಲಗುಂಟೆ ಹಾಗೂ ಪೀಣ್ಯಾ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವರದಿ: ಮಂಜುನಾಥ್, ಟಿವಿ9 ಬೆಂಗಳೂರು 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
Loading...
Unable to load recommendations.
Follow Us