Bengaluru Power Cut: ಬೆಂಗಳೂರಿನಲ್ಲಿ ನವೆಂಬರ್ 19 ರಿಂದ 21 ರವರೆಗೆ ಪವರ್ ಕಟ್; ಇಲ್ಲಿದೆ ಫುಲ್ ಡಿಟೇಲ್ಸ್

Power cut in Bangalore: ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಯಾವ ಯಾವ ಏರಿಯಾಗಳಲ್ಲಿ ಕರೆಂಟ್​ ಕಟ್​? ಸಮಯ? ಸಂಪೂರ್ಣ ಪಟ್ಟಿ ಇಲ್ಲಿದೆ ಪರಿಶೀಲಿಸಿ.

Bengaluru Power Cut: ಬೆಂಗಳೂರಿನಲ್ಲಿ ನವೆಂಬರ್ 19 ರಿಂದ 21 ರವರೆಗೆ ಪವರ್ ಕಟ್; ಇಲ್ಲಿದೆ ಫುಲ್ ಡಿಟೇಲ್ಸ್
ವಿದ್ಯುತ್ ವ್ಯತ್ಯಯ
Follow us
TV9 Web
| Updated By: shruti hegde

Updated on:Nov 19, 2021 | 9:21 AM

ಬೆಂಗಳೂರು: ಕೆಲವು ಕಂಪನಿಗಳು ಇನ್ನು ವರ್ಕ್ ಫ್ರಂ ಹೋಮ್​ ನಡೆಸುತ್ತಿರುವುದರಿಂದ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮುಂದುವರೆಸುತ್ತಿದ್ದಾರೆ. ಅಂಥವರಿಗೆ ಕರೆಂಟ್​ ಇಲ್ಲ ಎಂಬುದು ತಲೆನೋವಿನ ಸಂಗತಿ ಎಂದರೆ ತಪ್ಪಾಗಲಾರದು. ಆದರೆ ಇಂದಿನಿಂದ ಮೂರು ದಿನಗಳವರೆಗೆ ಬೆಂಗಳೂರಿನಲ್ಲಿ ವಿದ್ಯುತ್​ ಕಡಿತ (Bengaluru Power Cut) ಉಂಟಾಗಲಿದ್ದು ಉದ್ಯೋಗಿಗಳು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಾದ ಅನಿವಾರ್ಯವಿದೆ. ಬೆಂಗಳೂರಿನ ಕೆಲವು ಏರಿಯಾಗಳು ಇಂದು ಶುಕ್ರವಾರ ನವೆಂಬರ್ 19 ರಿಂದ ನವೆಂಬರ್ 21ರವರೆಗೆ ಅಂದರೆ ಭಾನುವಾರದವರೆಗೆ ವಿದ್ಯುತ್ ಕಡಿತವನ್ನು ಎದುರಿಸಲಿದೆ. ಯಾವ ಯಾವ ಏರಿಯಾಗಳಲ್ಲಿ ವಿದ್ಯುತ್ ಕಡಿತ ಎದುರಾಗಲಿದೆ ಎಂಬ ಪಟ್ಟಿಯನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ತಿಳಿಸಿದೆ. ಮೂರು ದಿನಗಳ ಕಾಲ ಯಾವ ಯಾವ ನಗರದಲ್ಲಿ ಪವರ್ ಕಟ್ (Power Cut) ಆಗಲಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರು ದಕ್ಷಿಣ ಭಾಗದ ಜಯನಗರ, ಜೆಪಿ ನಗರ, ಎಚ್ಎಸ್ಆರ್ ಲೇಔಟ್, ಮಾರುತಿ ಲೇಔಟ್, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇಂದು ಬೆಳಿಗ್ಗೆ 10 ರಿಂದ ಸಂಜೆ 5:30ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ. ಅದೇ ರೀತಿ ಕೋನಪ್ಪನ ಅಗ್ರಹಾರ, ದೊಡ್ಡತೋಗೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30ರವರೆಗೆ ವಿದ್ಯುತ್ ಕಡಿತವಾಗುವ ಸಾಧ್ಯತೆ ಇದೆ.

ಬೆಂಗಳೂರಿನ ಉತ್ತರ ಭಾಗದ ಹೆಬ್ಬಾಳ, ಪೀಣ್ಯ, ಮಲ್ಲೇಶ್ವರಂ, ಜಾಲಹಳ್ಳಿ ಭಾಗಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗುವ ನಿರೀಕ್ಷೆಯಿದೆ. ಇನ್ನು, ಬೆಂಗಳೂರು ಪೂರ್ವ, ಇಂದಿರಾನಗರ, ಶಿವಾಜಿನಗರ ಮತ್ತು ವೈಟ್​ಫೀಲ್ಡ್​ನಲ್ಲಿಯೂ ಸಹ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರವೆಗೆ ವಿದ್ಯುತ್ ಕಡಿತವಾಗಲಿದೆ.

ಬೆಸ್ಕಾಂ ವತಿಯಿಂದ ಹಲವೆಡೆ ಕೇಬಲ್ ಅಳವಡಿಕೆಯ ಕಾರ್ಯ ನಡೆಯುತ್ತಿದ್ದು ಆ ಸಮಯದಲ್ಲಿ ವಿದ್ಯುತ್ ವ್ಯತ್ಯ ಉಂಟಾಗಲಿದೆ. ನಿರ್ವಹಣಾ ಕಾರ್ಯ ಮುಗಿದ ನಂತರ ವಿದ್ಯುತ್ ಸರಬರಾಜು ಮಾಡಲಾಗುವುದು. ಇಂದಿನಿಂದ ಮೂರು ದಿನಗಳ ಕಾಲ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:

ಜ್ಞಾನವನ್ನು, ಸಾಹಸಗಾಥೆಗಳನ್ನು ಹಂಚಿಕೊಳ್ಳಬೇಕು; ಬೆಂಗಳೂರು ಟೆಕ್ ಸಮಿಟ್​ನಲ್ಲಿ ವೆಂಕಯ್ಯ ನಾಯ್ಡು ಭಾಷಣ

Karnataka Weather Today: ಬೆಂಗಳೂರು, ಮಲೆನಾಡು ಸೇರಿ 11 ಜಿಲ್ಲೆಗಳಲ್ಲಿ ಇಂದು ವಿಪರೀತ ಮಳೆ; ಆರೆಂಜ್ ಅಲರ್ಟ್​ ಘೋಷಣೆ

Published On - 9:02 am, Fri, 19 November 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ