AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಹಕ್ಕು ರಕ್ಷಣೆಯಲ್ಲಿ ಬೆಂಗಳೂರು ಫೇಲ್; ರಾಜಧಾನಿಗೆ ಕೊನೆಯ ಸ್ಥಾನ

ಕರ್ನಾಟಕ ಮಕ್ಕಳ ಹಕ್ಕುಗಳ ಸೂಚ್ಯಂಕದ ಪ್ರಕಾರ, ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯದಲ್ಲೇ ಕೊನೆಯ ಸ್ಥಾನದಲ್ಲಿದೆ. ಮಕ್ಕಳ ಮೇಲಿನ ಅಪರಾಧಗಳಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದೆ. ಕೊಡಗು ಮತ್ತು ಉಡುಪಿ ಸುರಕ್ಷಿತ ಜಿಲ್ಲೆಗಳಾಗಿವೆ ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ವರದಿ ಮಾಡಿದೆ. ಕರ್ನಾಟಕ ಮತ್ತು ಬೆಂಗಳೂರಿನ ಮಕ್ಕಳ ಭವಿಷ್ಯದ ಬಗ್ಗೆ ಎಚ್ಚರಿಕೆಯ ಗಂಟೆಯಾಗಿದೆ.

ಮಕ್ಕಳ ಹಕ್ಕು ರಕ್ಷಣೆಯಲ್ಲಿ ಬೆಂಗಳೂರು ಫೇಲ್; ರಾಜಧಾನಿಗೆ ಕೊನೆಯ ಸ್ಥಾನ
ಮಕ್ಕಳ ರಕ್ಷಣೆಯಲ್ಲಿ ಕೊನೆಯ ಸ್ಥಾನಕ್ಕಿಳಿದ ಬೆಂಗಳೂರು
ಭಾವನಾ ಹೆಗಡೆ
|

Updated on: Nov 24, 2025 | 1:40 PM

Share

ಬೆಂಗಳೂರು, ನವೆಂಬರ್ 24: ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ (Protection of children’s rights)ಬೆಂಗಳೂರು ನಗರ ಜಿಲ್ಲೆ ವಿಫಲವಾಗಿದೆ ಎಂದು ಕರ್ನಾಟಕದ ಮಕ್ಕಳ ಹಕ್ಕುಗಳ ಸೂಚ್ಯಂಕ ಬಹಿರಂಗಪಡಿಸಿದೆ. ಜೀವನಕ್ಕಾಗಿ ಅನುಕೂಲಕರ ಪರಿಸ್ಥಿತಿಗಳು, ಪೋಷಣೆಯ ಹಕ್ಕು, ರಕ್ಷಣೆ ನೀಡುವ ಹಕ್ಕು, ಶಿಕ್ಷಣಕ್ಕಿರುವ ಹಕ್ಕು ಮತ್ತು ಭಾಗವಹಿಸುವ ಹಕ್ಕುಗಳ ಮೇಲೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ವರದಿ ಸಿದ್ದಪಡಿಸಿದೆ.

ರಾಜ್ಯದಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವಲ್ಲಿ ಬೆಂಗಳೂರಿಗೆ ಕಳಪೆ ಸ್ಥಾನ ಲಭಿಸಿದ್ದು, ಎಲ್ಲಾ ಜಿಲ್ಲೆಗಳಿಗೂ ಹೋಲಿಸಿದರೆ ಬೆಂಗಳೂರು ಕೊನೆ ಸ್ಥಾನ ಪಡೆದಿದೆ. ಕೊಲಾರ, ಬೆಂಗಳೂರು, ವಿಜಯಪುರ, ಗದಗ ಮತ್ತು ಬೆಳಗಾವಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವಲ್ಲಿ ಕಳಪೆ ಪಟ್ಟವನ್ನು ಹೊಂದಿದ್ದು, ಕೊಡಗು ಮತ್ತು ಉಡುಪಿ ಜಿಲ್ಲೆಯು ಮಕ್ಕಳ ಹಕ್ಕುಗಳಿಗೆ ಅತ್ಯಂತ ಸುರಕ್ಷಿತ ಜಿಲ್ಲೆಗಳಾಗಿವೆ.

ಬೆಂಗಳೂರಿನಲ್ಲಿ  ಹೆಚ್ಚಿದ ಮಕ್ಕಳ ಮೇಲಿನ ಅಪರಾಧ

ಮಕ್ಕಳ ಮೇಲಿನ ಅಪರಾಧಗಳಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದ್ದರೆ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ತುಮಕೂರು, ಬೆಳಗಾವಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳೂ ಈ ಪಟ್ಟಿಗೆ ಸೇರಿವೆ. ಬೆಂಗಳೂರಿನಲ್ಲಿ ಮಕ್ಕಳ ಮೇಲಿನ ಅಪರಾಧ ಪ್ರಮಾಣ ಇತರ ಜಿಲ್ಲೆಗಳಿಗಿಂತ ಎಂಟು ಪಟ್ಟು ಹೆಚ್ಚಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಹಯೋಗದೊಂದಿಗೆ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ (ISEC) ಎಸ್ ಮಾದೇಶ್ವರನ್ ಮತ್ತು ಬಿಪಿ ವಾಣಿ ಈ ಕುರಿತು ಅಧ್ಯಯನದ ನಡೆಸಿದ್ದು, ಹಲವಾರು ಅಂಕಿ ಅಂಶಗಳನ್ನು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ.

2021ರಲ್ಲಿ ರಾಷ್ಟ್ರದ ಮಕ್ಕಳ ಹಕ್ಕು ಸೂಚಕದಲ್ಲಿ ಕರ್ನಾಟಕ 10ನೇ ಸ್ಥಾನದಲ್ಲಿತ್ತು. ಕೇರಳ, ದೆಹಲಿ, ತಮಿಳುನಾಡು, ಗೋವಾ ಮತ್ತು ಸಿಕ್ಕಿಂ ಅಗ್ರ ರಾಜ್ಯಗಳಾಗಿದ್ದವು. ಹೀಗಾಗಿ ಈಗಿನ ವರದಿ ಕರ್ನಾಟಕ ಮಕ್ಕಳ ಹಿತದೃಷ್ಟಿಯಿಂದ ಹಾಗೂ ಬೆಂಗಳೂರಿನ ಮಕ್ಕಳ ಹಿತದೃಷ್ಟಿಯಿಂದ ಎಚ್ಚರಿಕೆಯ ಗಂಟೆಯಾಗಿದೆ.

ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ