ಬೆಂಗಳೂರು: ನುಸುಳುಕೋರರ ಬೇಟೆ; ಬಾಂಗ್ಲಾದವರಿಗೆ ನಕಲಿ ಆಧಾರ್ ಕಾರ್ಡ್‌ ಮಾಡಿಕೊಡುತ್ತಿದ್ದ ಆರೋಪಿ ಬಂಧನ

ಬೆಂಗಳೂರಿನ ಸೂರ್ಯನಗರದಲ್ಲಿ ನಕಲಿ ಗುರುತಿನ ಚೀಟಿಗಳನ್ನು ತಯಾರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅರ್ನಾಬ್ ಮಂಡಲ್ ಎಂಬಾತ ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದವರಿಗೆ ನಕಲಿ ಆಧಾರ್ ಕಾರ್ಡ್ ಮತ್ತು ಇತರ ದಾಖಲೆಗಳನ್ನು 8,000-10,000 ರೂಪಾಯಿಗಳಿಗೆ ತಯಾರಿಸಿಕೊಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ನುಸುಳುಕೋರರ ಬೇಟೆ; ಬಾಂಗ್ಲಾದವರಿಗೆ ನಕಲಿ ಆಧಾರ್ ಕಾರ್ಡ್‌ ಮಾಡಿಕೊಡುತ್ತಿದ್ದ ಆರೋಪಿ ಬಂಧನ
ಸೂರ್ಯಸಿಟಿ ಪೊಲೀಸ್​ ಠಾಣೆ
Follow us
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ

Updated on:Nov 29, 2024 | 8:42 AM

ಬೆಂಗಳೂರು, ನವೆಂಬರ್​ 29: ಬಾಂಗ್ಲಾದೇಶದಿಂದ (Bangladesh) ಅಕ್ರಮವಾಗಿ ಭಾರತದೊಳಗೆ ನುಸುಳಿ ಬಂದಿದ್ದವರಿಗೆ ನಕಲಿ ಗರುತಿನ ಚೀಟಿ (Fake Documents) ಮಾಡಿಕೊಡುತ್ತಿದ್ದ ಆರೋಪಿಯನ್ನು ಸೂರ್ಯಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರ್ನಾಬ್ ಮಂಡಲ್ ಬಂಧಿತ ಆರೋಪಿ. ಆರೋಪಿ ಅರ್ನಾಬ್ ಮಂಡಲ್ ಮೂಲತಃ ಪಶ್ಚಿಮ ಬಂಗಾಳದವನು. ಈ ಬೆಂಗಳೂರು ಹೊರವಲಯದ ಸೂರ್ಯಸಿಟಿ ಬಳಿ ಸೈಬರ್​ ಸೆಂಟರ್ ತೆರೆದಿದ್ದನು.

ಕರ್ನಾಟಕ ಪೊಲೀಸರು ರಾಜ್ಯದಲ್ಲಿ ಅಕ್ರಮವಾಗಿ ನೆಲಸಿರುವ ಬಾಂಗ್ಲಾದೇಶ ಪ್ರಜೆಗಳ ಬೆನ್ನಬಿದ್ದಿದ್ದಾರೆ. ಈಗಾಗಲೆ ಅನೇಕರ ಹೆಡೆಮುರಿ ಕಟ್ಟುತ್ತಿದ್ದಾರೆ. ಈ ಎಲ್ಲ ಬಾಂಗ್ಲಾದೇಶ ಪ್ರಜೆಗಳ ಬಳಿ ಭಾರತದ ನಕಲಿ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಮತ್ತು ಈ ಎಲ್ಲ ನಕಲಿ ಗುರುತಿನ ಚೀಟಿಗಳು ಪಶ್ಚಿಮ ಬಂಗಾಳ ವಿಳಾಸದ್ದಾಗಿವೆ.

ಈ ಬಗ್ಗೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿ, ತನಿಖೆ ಆರಂಭಿಸಿದಾಗ, ಆರೋಪಿ ಅರ್ನಾಬ್​ ಮಂಡಲ್​ ಸೈಬರ್​ ಸೆಂಟರ್​ನಲ್ಲಿ ನಡೆಯುತ್ತಿರುವ ಅಕ್ರಮ ದಂಧೆ ಬಗ್ಗೆ ತಿಳಿದಿದೆ. ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು ಗುರುವಾರ ಸೈಬರ್​ ಸೆಂಟರ್​ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಸಾಕಷ್ಟು ನಕಲಿ ಆಧಾರ್​ ಕಾರ್ಡ್​ ಪತ್ತೆಯಾಗಿವೆ. ಹಾಗೆಯೇ 18 ಮನೆಗಳ ಬಾಡಿಗೆ ಅಗ್ರಿಮೆಂಟ್​​ ಪತ್ತೆಯಾಗಿವೆ.

ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಅರ್ನಾಬ್ ಮಂಡಲ್​ 8 ಸಾವಿರ ರೂ.ಗೆ ನಕಲಿ ಗುರುತಿನ ಚೀಟಿಗಳನ್ನು ಮಾಡಿಕೊಡುತ್ತಿರುವುದಾಗಿ ಬಾಯಿಬಿಟ್ಟಿದ್ದಾನೆ.

ಇದನ್ನೂ ಓದಿ: ಚಿತ್ರದುರ್ಗದ ಗಾರ್ಮೆಂಟ್ಸ್​ಗಳ​ ಮೇಲೆ ದಾಳಿ: 6 ಬಾಂಗ್ಲಾದೇಶ ಪ್ರಜೆಗಳು ಪೊಲೀಸ್​ ವಶಕ್ಕೆ

ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್​ಪಿ ಸಿ.ಕೆ.ಬಾಬಾ ಮಾತನಾಡಿ, ಬಾಂಗ್ಲಾ ಪ್ರಜೆಗಳಿಗೆ ಭಾರತದ ನಕಲಿ ಆಧಾರ್​​​, ಐಡಿ ಕಾರ್ಡ್​ ಮಾಡಿಕೊಡ್ತಿದ್ದನು. ಕಳೆದ ಒಂದು ವರ್ಷದಿಂದ ಇದೇ ರೀತಿ ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರ ದಾಳಿ ವೇಳೆ ನಕಲಿ ದಾಖಲಾತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

18 ಮನೆಗೆ ಸಂಬಂಧಿಸಿದ ಲೀಸ್ ಅಗ್ರಿಮೆಂಟ್,​ 55 ಆಧಾರ್​ ಕಾರ್ಡ್, 40 ಬ್ಯಾಂಕ್ ದಾಖಲಾತಿ, 2 ಕಂಪ್ಯೂಟರ್, 2 ಮೊಬೈಲ್ ಜಪ್ತಿ ಮಾಡಲಾಗಿದೆ. ಒಂದು ಕಾರ್ಡ್​ ಮಾಡಿಕೊಡಲು 8 ಸಾವಿರದಿಂದ 10 ಸಾವಿರ ರೂ. ಪಡೆಯುತ್ತಿದ್ದನು. ನಕಲಿ ಐಡಿ ಕಾರ್ಡ್​ಗಳ ದಂಧೆಯಲ್ಲಿ ಇನ್ನೂ ಹಲವರು ಶಾಮೀಲಾಗಿದ್ದಾರೆ. ನಕಲಿ ಐಡಿ ಕಾರ್ಡ್​ಗಳ ದಂಧೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:40 am, Fri, 29 November 24

ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಯುಐ, ಮ್ಯಾಕ್ಸ್ ಒಟ್ಟಿಗೆ ರಿಲೀಸ್ ಆಗುತ್ತಿರುವ ಬಗ್ಗೆ ಉಪೇಂದ್ರ ಪ್ರತಿಕ್ರಿಯೆ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಏಕದಿನ ಸರಣಿಗಾಗಿ ಕಾಂಗರೂಗಳ ನಾಡಿಗೆ ಕಾಲಿಟ್ಟ ಟೀಂ ಇಂಡಿಯಾ
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಅಣ್ಣ 10 ವರ್ಷಗಳಿಂದ ಕಾಯುತ್ತಿದ್ದೇನೆ ಎಂದ ಫ್ಯಾನ್​ಗೆ ನಿರಾಸೆ ಮಾಡದ ರೋಹಿತ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ಡಿಪೋದಲ್ಲಿ ಯುವಕನಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಬಚಾವ್
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ರಾಜಕಾರಣಿಗಳ ನಡುವೆ ಇದ್ದರೊಬ್ಬ ರೀಯಲ್ ಕ್ರಿಕೆಟರ್-ಪ್ರಕಾಶ್ ರಾಠೋಡ್!
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಅಧಿಕಾರಿಗಳಿಗೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: ಒಳ ನುಗ್ಗಿದ ಮಳೆ ನೀರು
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ಹೃದ್ರೋಗಿ ಪತಿ, ಮಕ್ಕಳೊಂದಿಗೆ 40 ವರ್ಷಗಳಿಂದ ಬಾಡಿಗೆ ಮನೆಯಲ್ಲಿರುವ ಮಹಿಳೆ
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..