PUC, SSLC ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ: ಮೂವರ ಬಂಧನ

| Updated By: ವಿವೇಕ ಬಿರಾದಾರ

Updated on: Mar 25, 2025 | 1:32 PM

ಬೆಂಗಳೂರಿನಲ್ಲಿ ಪಿಯುಸಿ ಮತ್ತು ಎಸ್ಎಸ್ಎಲ್ಸಿ ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ರಾಜ್ಯದಾದ್ಯಂತ ಸ್ಟಡಿ ಸೆಂಟರ್‌ಗಳನ್ನು ನಡೆಸಿ, 350ಕ್ಕೂ ಹೆಚ್ಚು ಜನರಿಗೆ ನಕಲಿ ಅಂಕಪಟ್ಟಿಗಳನ್ನು 5-10 ಸಾವಿರ ರೂಪಾಯಿಗಳಿಗೆ ನೀಡಿದ್ದಾರೆ. ಪೊಲೀಸರು ಈ ಮಾದರಿಯ ಅಂಕಪಟ್ಟಿಗಳು ಸಲ್ಲಿಕೆಯಾದಲ್ಲಿ ಸಿಸಿಬಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

PUC, SSLC ನಕಲಿ ಅಂಕಪಟ್ಟಿ ನೀಡುತ್ತಿದ್ದ ಜಾಲ ಪತ್ತೆ: ಮೂವರ ಬಂಧನ
ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ಆರೋಪಿಗಳು
Follow us on

ಬೆಂಗಳೂರು, ಮಾರ್ಚ್​ 25: ಪಿಯುಸಿ (PUC) ಮತ್ತು ಎಸ್​ಎಸ್​ಎಲ್​​ಸಿ (SSLC) ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸ್ಟೆಡಿ ಸೆಂಟರ್​ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಅಲ್ಲದೇ, ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂದು ಸಂಸ್ಥೆ ಹುಟ್ಟುಹಾಕಿದ್ದರು. ಆರೋಪಿಗಳು ಬೆಂಗಳೂರು, ಬೆಳಗಾವಿ, ಧಾರವಾಡದಲ್ಲಿಂದ್ದುಕೊಂಡು ಈ ಅಕ್ರಮ ದಂಧೆ ನಡೆಸುತ್ತಿದ್ದರು.

ಸ್ಟೆಡಿ ಸೆಂಟರ್​ನಲ್ಲಿ ಕರೆಸ್ಪಾಂಡಿಂಗ್ ವ್ಯಾಸಂಗ ಮಾಡುವರನ್ನು ದಾಖಲಿಸಿಕೊಳ್ಳುತ್ತಿದ್ದರು. ನಂತರ ಕಲವೇ ದಿನಗಳದಲ್ಲಿ ಇವರಿಗೆ ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ ಆರೋಪಿಗಳು ಅಂಕಪಟ್ಟಿಗಳನ್ನು ನೀಡುತಿದ್ದರು. ಆರೋಪಿಗಳು ಧಾರವಾಡದಲ್ಲಿ ಮತ್ತು ಬೆಂಗಳೂರಿನಲ್ಲಿ ಅಂಕಪಟ್ಟಿ ಪ್ರಿಂಟ್ ಮಾಡಿರುವುದು ಪತ್ತೆಯಾಗಿದೆ. ಆರೋಪಿಗಳು ಸುಮಾರು 350 ಜನರಿಗೆ ನಕಲಿ ಅಂಕಪಟ್ಟಿ ನೀಡಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಮತ್ತೊಂದು ಅಕ್ರಮ: ನಕಲಿ ಅಂಕಪಟ್ಟಿ ಮಾಫಿಯಾ ಬೆಳಕಿಗೆ

ಇದನ್ನೂ ಓದಿ
ಮಂಗಳೂರು: ಸೈಬರ್ ವಂಚನೆಗಾಗಿ ಬಡ ಜನರ ಬ್ಯಾಂಕ್​ ಖಾತೆ ಬಳಕೆ, ಇಬ್ಬರ ಬಂಧನ
ಕಾರವಾರದಲ್ಲಿ SSLC ವಿದ್ಯಾರ್ಥಿ, ತುಮಕೂರಿನಲ್ಲಿ PUC ವಿದ್ಯಾರ್ಥಿನಿ ಸಾವು
ಕುಣಿಗಲ್: ದೊಡ್ಡಕೆರೆಯಲ್ಲಿ ಮಹಿಳಾ ಟೆಕ್ಕಿ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ
ಪ್ರೀತಿಸಿ ಮದ್ವೆಯಾಗಿದ್ದ ಪತ್ನಿ ಸ್ನೇಹಿತನ ಜತೆ ಪರಾರಿ: ಪತಿ ದುರಂತ ಸಾವು

ಸರ್ಕಾರಿ ಕೆಲಸಕ್ಕೆ ಸೇರಿದ ನಕಲಿ ಅಂಕಪಟ್ಟಿ ಪಡೆದವರು

ಇವರಿಂದ ನಕಲಿ ಅಂಕಪಟ್ಟಿ ಪಡೆದವರು ಸಾರಿಗೆ ಇಲಾಖೆ, ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಕೆಲಸಕ್ಕೆ ಸೇರಿದ್ದಾರೆ. ಆರೋಪಿಗಳು 5ರಿಂದ 10 ಸಾವಿರ ಹಣ ಪಡೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು. ಸರ್ಕಾರಿ ಇಲಾಖೆಗಳು ಕೆಲಸ ನೀಡುವ ಮೊದಲು ಪರಿಶೀಲನೆ ಮಾಡಿದಾಗ ಸಹ ಇದು ಅಸಲಿ ಅಂಕಪಟ್ಟಿ ಎಂದು ಆರೋಪಿಗಳು ಮಾಹಿತಿ ನೀಡಿದ್ದರು. ಈ ಮಾದರಿಯ ಅಂಕಪಟ್ಟಿ ಎಲ್ಲಿಯಾದರೂ ಸಲ್ಲಿಕೆಯಾಗಿದ್ದಲ್ಲಿ ಸಿಸಿಬಿಗೆ ಮಾಹಿತಿ ನೀಡುವಂತೆ ಪೊಲೀಸರ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ