AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 7 ಜನರ ಕೊಲೆ ಪ್ರಕರಣ: ಕಿರುಚಾಟ ಇಲ್ಲ, ಅನುಮಾನ ಬರುವ ಯಾವ ಚಟುವಟಿಕೆಯೂ ನಡೆದಿಲ್ಲ, ಸ್ಫೋಟಕ ಹೇಳಿಕೆ ನೀಡಿದ ನೆರೆಹೊರೆಯವರು

ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ ಏಳು ಮಂದಿಯ ಭೀಕರ ಹತ್ಯೆ ಪ್ರಕರಣ ದೇಶಾದ್ಯಂತ ಆಘಾತ ಮೂಡಿಸಿದೆ. ಮುಖ್ಯ ಆರೋಪಿ ಕ್ಯಾಬ್ ಚಾಲಕ ಇಂದುಶೇಖರ್‌ನ ಹಿಂಸಾತ್ಮಕ ನಡವಳಿಕೆ, ಪೂರ್ವ ನಿಯೋಜಿತ ಹತ್ಯೆಯ ಹಿಂದಿನ ಸಾಲ, ಆಸ್ತಿ ವ್ಯಾಜ್ಯಗಳು ತನಿಖೆಯಲ್ಲಿ ಬಹಿರಂಗವಾಗಿವೆ. ನೆರೆಹೊರೆಯವರು ಹಾಗೂ ಬಾಡಿಗೆದಾರರು ಆತನ ಕ್ರೂರ ಸ್ವಭಾವದ ಬಗ್ಗೆ ಆಘಾತಕಾರಿ ಮಾಹಿತಿ ನೀಡಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ 7 ಜನರ ಕೊಲೆ ಪ್ರಕರಣ: ಕಿರುಚಾಟ ಇಲ್ಲ, ಅನುಮಾನ ಬರುವ ಯಾವ ಚಟುವಟಿಕೆಯೂ ನಡೆದಿಲ್ಲ, ಸ್ಫೋಟಕ ಹೇಳಿಕೆ ನೀಡಿದ ನೆರೆಹೊರೆಯವರು
ಇಂದುಶೇಖರ್Image Credit source: Tv9 kannada
ಅಕ್ಷಯ್​ ಪಲ್ಲಮಜಲು​​
|

Updated on: Nov 07, 2026 | 4:31 PM

Share

ಬೆಂಗಳೂರು, ನ.7: ರಾಜಧಾನಿ ಬೆಂಗಳೂರಿನ ರಾಜಾಜಿನಗರ 5ನೇ ಬ್ಲಾಕ್‌ನಲ್ಲಿ ನಡೆದ ಒಂದೇ ಕುಟುಂಬದ ಏಳು ಮಂದಿಯ ಭೀಕರ ಹತ್ಯೆ ಪ್ರಕರಣ ದೇಶಾದ್ಯಂತ ಕಂಗೆಡಿಸಿದೆ. ಪ್ರಕರಣದ ಮುಖ್ಯ ಆರೋಪಿ, ಕ್ಯಾಬ್ ಚಾಲಕ ಇಂದುಶೇಖರ್‌ನ ಹಿಂಸಾತ್ಮಕ ಹಿನ್ನೆಲೆ, ನಡವಳಿಕೆ ಹಾಗೂ ಆತ ನಡೆಸಿದ ಪೂರ್ವ ನಿಯೋಜಿತ ಕುಕೃತ್ಯದ ಕರಾಳ ಅಧ್ಯಾಯಗಳು ತನಿಖೆಯ ವೇಳೆ ಒಂದೊಂದಾಗಿ ಹೊರಬರುತ್ತಿವೆ. ಈ ಕುರಿತು ನೆರೆಹೊರೆಯವರು ಹಾಗೂ ಸ್ಥಳೀಯ ಬಾಡಿಗೆದಾರರು ಅತ್ಯಂತ ಆಘಾತಕಾರಿ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ. ಆತ ಸದಾ ಜಗಳವಾಡುವ, ಒರಟು ಸ್ವಭಾವದ ವ್ಯಕ್ತಿಯಾಗಿದ್ದು, ಸಣ್ಣಪುಟ್ಟ ವಿಚಾರಗಳಿಗೂ ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ಎಂದು ತಿಳಿಸಿದ್ದಾರೆ.

‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ಜೊತೆ ಮಾತನಾಡಿದ ಇಂದುಶೇಖರ್ ವಾಸವಿದ್ದ ವಾಣಿಜ್ಯ ಕಟ್ಟಡದ ನಿವಾಸಿಗಳು ಹಾಗೂ ಸುತ್ತಮುತ್ತಲ ಅಂಗಡಿಯವರು ಆರೋಪಿಯ ಬಗ್ಗೆ ಆಘಾತಕಾರಿ ಸತ್ಯಗಳನ್ನು ಬಯಲು ಮಾಡಿದ್ದಾರೆ. ಪಾರ್ಕಿಂಗ್ ಸೇರಿದಂತೆ ಅತ್ಯಂತ ಸಣ್ಣ ವಿಚಾರಗಳಿಗೂ ಇಂದುಶೇಖರ್ ಸ್ಥಳೀಯರೊಂದಿಗೆ ಜಗಳಕ್ಕೆ ಇಳಿಯುತ್ತಿದ್ದ. ಸಾರ್ವಜನಿಕರನ್ನು ಅಸಭ್ಯ ಶಬ್ದಗಳಿಂದ ನಿಂದಿಸುತ್ತಾ ಅಶಾಂತಿ ಸೃಷ್ಟಿಸುತ್ತಿದ್ದ. ಈತನ ನಡವಳಿಕೆಗೆ ಹೆದರಿ ಕಟ್ಟಡದ ಇತರ ಬಾಡಿಗೆದಾರರು ಸಂಪರ್ಕವನ್ನೇ ಇಟ್ಟುಕೊಳ್ಳುತ್ತಿರಲಿಲ್ಲ. ಆತನ ಪತ್ನಿ ಮತ್ತು ಮಗಳ ನಡವಳಿಕೆಯೂ ಅಷ್ಟೇ ಒರಟಾಗಿತ್ತು ಎಂದು ನಿವಾಸಿಗಳು ಹೇಳಿದ್ದಾರೆ.

ಇಂದುಶೇಖರ್ ಯಾರೊಂದಿಗಾದರೂ ಗಲಾಟೆ ಮಾಡುವಾಗಲೆಲ್ಲಾ ಆತನ ಮಗಳು ಅದನ್ನು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಳು. ತಾನು ಮಾಧ್ಯಮ ಕ್ಷೇತ್ರಕ್ಕೆ ಸೇರಿದವನೆಂದು ಹೇಳಿಕೊಂಡು ಇಂದುಶೇಖರ್ ಜನರಿಗೆ ಬೆದರಿಸುತ್ತಿದ್ದ. ಕಟ್ಟಡ ಮಾಲೀಕರ ಮಗನೊಂದಿಗೆ ಆಪ್ತನಾಗಿದ್ದ ಇಂದುಶೇಖರ್, 2ನೇ ಮಹಡಿಯಲ್ಲಿ ನವೀಕರಣ ಕಾಮಗಾರಿ ಮಾಡಲು ಜಿಬಿಎ ಅನುಮತಿ ಬೇಕು ಎನ್ನುವ ನೆಪದಲ್ಲಿ ಕೆಲವು ದಾಖಲೆಗಳಿಗೆ ಸಹಿ ಪಡೆದುಕೊಂಡಿದ್ದ. ಈ ವಿಚಾರವಾಗಿ ಸದ್ಯ ನ್ಯಾಯಾಲಯದಲ್ಲಿ ಸಿವಿಲ್ ವ್ಯಾಜ್ಯ ನಡೆಯುತ್ತಿದೆ ಎಂದು ಬಾಡಿಗೆದಾರರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ಬೆಂಗಳೂರು ಸರಣಿ ಕೊಲೆ ಪ್ರಕರಣ; ಆ 15 ದಿನಗಳಲ್ಲಿ ಏನಾಯಿತು? ಇಲ್ಲಿದೆ ಕಂಪ್ಲೀಟ್ ಟೈಮ್‌ಲೈನ್

ಇಲ್ಲಿಯವರೆಗೆ ತನಿಖೆಯಲ್ಲಿ ಬೆಳಕಿಗೆ ಬಂದ ಅಂಶಗಳೇನು?

ಇದು ಆಕಸ್ಮಿಕವಾಗಿ ನಡೆದ ಘಟನೆಯಲ್ಲ, ಬದಲಿಗೆ ಅತ್ಯಂತ ನಿಖರವಾಗಿ ಯೋಜನೆ ರೂಪಿಸಿ ನಡೆಸಲಾದ ಪೂರ್ವ ನಿಯೋಜಿತ ಹತ್ಯೆಯಾಗಿದೆ. ಸಾಲದ ಸುಳಿ, ಕುಟುಂಬದ ಆಂತರಿಕ ಭಿನ್ನಾಭಿಪ್ರಾಯ ಹಾಗೂ ಆಸ್ತಿ, ಹಣಕಾಸಿನ ವ್ಯಾಜ್ಯಗಳು ಈ ಸರಣಿ ಹತ್ಯೆಗೆ ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪೊಲೀಸ್ ಕಮಿಷನರ್ ನೀಡಿರುವ ಹೇಳಿಕೆಗಳ ಪ್ರಕಾರ, ಆರೋಪಿ ಇಂದುಶೇಖರ್ ತನ್ನ ಅಪ್ರಾಪ್ತ ಮಗಳನ್ನು ಸಂಪೂರ್ಣವಾಗಿ ಬ್ರೈನ್ ವಾಶ್ ಮಾಡಿ, ತನ್ನ ಕುಕೃತ್ಯಕ್ಕೆ ಆಕೆಯನ್ನು ಬೆಂಬಲವಾಗಿ ಮತ್ತು ಸಹಾಯಕಿಯಾಗಿ ಬಳಸಿಕೊಂಡಿದ್ದಾನೆ. ವಾಣಿಜ್ಯ ಕಟ್ಟಡದ ನೆಲಮಹಡಿಯಲ್ಲಿ 5 ಅಂಗಡಿಗಳು ಹಾಗೂ ಮೊದಲ ಮಹಡಿಯಲ್ಲಿ ರಾಜಕೀಯ ಪಕ್ಷವೊಂದರ ಕಚೇರಿಯಿದೆ. ಕಳೆದ 14 ವರ್ಷಗಳಿಂದ 2ನೇ ಮಹಡಿಯಲ್ಲಿ ವಾಸವಾಗಿದ್ದ ಇಂದುಶೇಖರ್, ಕೊಲೆ ಮಾಡುವಾಗ ಯಾವುದೇ ಕಿರುಚಾಟ ಅಥವಾ ಶಬ್ದ ಹೊರಬರದಂತೆ ಅಚ್ಚುಕಟ್ಟಾಗಿ ಸೈಲೆಂಟ್ ಆಗಿ ಕೃತ್ಯ ಎಸಗಿದ್ದಾನೆ.

ಕಳೆದ ಎರಡು ದಿನಗಳಿಂದ ಪೊಲೀಸರು ರಹಸ್ಯವಾಗಿ ಕಟ್ಟಡಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದರು. ಆರೋಪಿಯನ್ನು ವಶಕ್ಕೆ ಪಡೆದು ಸತತ ವಿಚಾರಣೆಗೆ ಒಳಪಡಿಸಲಾಗಿದ್ದು, ಹತ್ಯೆಗೆ ಬಳಸಿದ ಮಾರಕಾಸ್ತ್ರಗಳು ಹಾಗೂ ಘಟನಾ ಸ್ಥಳದಿಂದ ಪ್ರಮುಖ ಸಾಕ್ಷ್ಯಗಳನ್ನು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಕಲೆಹಾಕಿದ್ದಾರೆ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಮೇಲಷ್ಟೇ ತಮ್ಮ ಕಟ್ಟಡದಲ್ಲೇ ಇಂತಹ ಭೀಕರ ನರಮೇಧ ನಡೆದಿದೆಯೆಂಬ ಸತ್ಯ ತಿಳಿದು ನಿವಾಸಿಗಳು ತೀವ್ರ ಆಘಾತಕ್ಕೊಳಗಾಗಿದ್ದಾರೆ. ಪ್ರಮುಖ ಆರೋಪಿ ಇಂದುಶೇಖರ್ ಬಂಧನದಿಂದಾಗಿ ತಾವೀಗ ನೆಮ್ಮದಿಯಿಂದ ನಿಟ್ಟುಸಿರು ಬಿಡುವಂತಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಲೆಟರ್ ವಿಷಯದಲ್ಲಿ ಗಾನವಿಗೆ ಕ್ಲಾಸ್? ಸೂಚನೆ ಕೊಟ್ಟ ಸುದೀಪ್
ಲೆಟರ್ ವಿಷಯದಲ್ಲಿ ಗಾನವಿಗೆ ಕ್ಲಾಸ್? ಸೂಚನೆ ಕೊಟ್ಟ ಸುದೀಪ್
ಸ್ಟಿಂಗ್ ಕೇಸ್: ಕುಮಾರಸ್ವಾಮಿ ವಿರುದ್ಧ ಯತೀಂದ್ರ ಸ್ಫೋಟಕ ಹೇಳಿಕೆ
ಸ್ಟಿಂಗ್ ಕೇಸ್: ಕುಮಾರಸ್ವಾಮಿ ವಿರುದ್ಧ ಯತೀಂದ್ರ ಸ್ಫೋಟಕ ಹೇಳಿಕೆ
ದೇವಿರಮ್ಮ ಜಾತ್ರೆಯಲ್ಲಿ ನಟಿ ಅಮೂಲ್ಯ; ಬೆಟ್ಟ ಏರಿ ದೇವರದರ್ಶನ ಪಡೆದ ನಟಿ
ದೇವಿರಮ್ಮ ಜಾತ್ರೆಯಲ್ಲಿ ನಟಿ ಅಮೂಲ್ಯ; ಬೆಟ್ಟ ಏರಿ ದೇವರದರ್ಶನ ಪಡೆದ ನಟಿ
ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆ ಮುಂದೆ ವಿವಾದಾತ್ಮಕ ಪೋಸ್ಟರ್ !
ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆ ಮುಂದೆ ವಿವಾದಾತ್ಮಕ ಪೋಸ್ಟರ್ !
ಅತ್ತಿಬೆಲೆ ಪಟಾಕಿ ಮಾರುಕಟ್ಟೆಯಲ್ಲಿ ಈ ಬಾರಿ ಮಾರಾಟ ಶೇ 30 ರಷ್ಟು ಕುಸಿತ!
ಅತ್ತಿಬೆಲೆ ಪಟಾಕಿ ಮಾರುಕಟ್ಟೆಯಲ್ಲಿ ಈ ಬಾರಿ ಮಾರಾಟ ಶೇ 30 ರಷ್ಟು ಕುಸಿತ!
ಕೃಷ್ಣ ಭೈರೇಗೌಡ ಎದುರೇ ಕಾಂಗ್ರೆಸ್ ಮಾಜಿ MLC, ಬಿಜೆಪಿ MLA ​ಹೈಡ್ರಾಮಾ!
ಕೃಷ್ಣ ಭೈರೇಗೌಡ ಎದುರೇ ಕಾಂಗ್ರೆಸ್ ಮಾಜಿ MLC, ಬಿಜೆಪಿ MLA ​ಹೈಡ್ರಾಮಾ!
ಏರ್​ಪೋರ್ಟ್ ಪ್ರಯಾಣಿಕರಿಗೆ ಇಂದಿನಿಂದ ತಟ್ಟಲಿದೆ ಟ್ರಾಫಿಕ್ ಬಿಸಿ
ಏರ್​ಪೋರ್ಟ್ ಪ್ರಯಾಣಿಕರಿಗೆ ಇಂದಿನಿಂದ ತಟ್ಟಲಿದೆ ಟ್ರಾಫಿಕ್ ಬಿಸಿ
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಈ ವಾರ ಇಲ್ಲ ಎಲಿಮಿನೇಷನ್? ಪ್ರೋಮೋ ಮೂಲಕ ಸೂಚನೆ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಇಂದು ಈ ರಾಶಿಯವರು ನಿಮ್ಮ ಕೋಪವನ್ನು ಹತೋಟಿಯಲ್ಲಿಡಲೇಬೇಕು!
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ: ತೊಟ್ಟಿಲು ಖರೀದಿಸಿದ ಡಿಕೆಶಿ