ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ದಂಪತಿ

ಬೆಂಗಳೂರಿನ ಸದಾಶಿವನಗರದಲ್ಲಿ ಭೀಕರ ಘಟನೆ ನಡೆದಿದೆ. ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಬಾಧೆಯಿಂದಾಗಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತ ದಂಪತಿ ಮೂಲತಃ ಉತ್ತರ ಪ್ರದೇಶದವರು ಎಂದು ತಿಳಿದುಬಂದಿದೆ.

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ದಂಪತಿ
Bengaluru 4 Death (1)
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on:Jan 06, 2025 | 12:56 PM

ಬೆಂಗಳೂರು, ಜನವರಿ 06: ಸದಾಶಿವನಗರದ (Sadashivanagar) ಆರ್​ಎಂವಿ ಸೆಕೆಂಡ್ ಸ್ಟೇಜ್ ಟೆಂಪಲ್ ರಸ್ತೆಯಲ್ಲಿ ವಾಸವಿದ್ದ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ನೇಣಿಗೆ ಶರಣಾಗಿದ್ದಾರೆ. ಅನೂಪ್ ಕುಮಾರ್ (38), ಪತ್ನಿ ರಾಖಿ (35) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ಐದು ವರ್ಷದ ವಿಶೇಷ ಚೇತನ ಹೆಣ್ಣು ಮಗು ಮತ್ತು ಎರಡು ವರ್ಷದ ಗಂಡು ಮಗುವಿಗೆ ದಂಪತಿ ವಿಷ ಕುಡಿಸಿ, ಬಳಿಕ ತಾವು ನೇಣಿಗೆ ಶರಣಾಗಿದ್ದಾರೆ. ಇಬ್ಬರೂ ಟೆಕ್ಕಿಗಳಾಗಿದ್ದು ವರ್ಕ್ ಫ್ರಂ ಹೋಮ್ ಮಾಡುತಿದ್ದರು ಎಂದು ತಿಳಿದುಬಂದಿದೆ.

ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತದಲ್ಲಿ ಐವರ ಸಾವು

ಪ್ರಕರಣದ ಸಂಬಂಧ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಹೆಚ್​ಟಿ ಮಾತನಾಡಿ, ಆರ್​ಎಂವಿ ಸೆಕೆಂಡ್ ಸ್ಟೇಜ್ ಟೆಂಪಲ್ ರಸ್ತೆಯಲ್ಲಿ ಒಂದೇ ಕುಟುಂಬದ ನಾಲ್ಕು ಜನ ಮೃತರಾದ ಬಗ್ಗೆ ಮಾಹಿತಿ ಬಂತು‌. ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲಿಸಿದ್ದೇವೆ ಎಂದು ತಿಳಿಸಿದರು.

ಸದ್ಯದ ಮಾಹಿತಿ ಪ್ರಕಾರ ಮೃತರು ಮೂಲತಃ ಉತ್ತರಪ್ರದೇಶದ ಅಲಹಾಬಾದ್​ನವರು ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಮೃತ ಅನೂಪ್ ಕುಮಾರ್ ಖಾಸಗಿ ಕಂಪನಿಯಲ್ಲಿ ಸಾಫ್ಟ್​​ವೇರ್ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಮೃತರ ಕುಟುಂಬಸ್ಥರಿಗೆ ಮಾಹಿತಿಯನ್ನು ತಿಳಿಸಿದ್ದೇವೆ. ಸಂಜೆ ವೇಳೆಗೆ ಮೃತರ ಕುಟುಂಬಸ್ಥರು ಬೆಂಗಳೂರಿಗೆ ಬರುವ ಸಾಧ್ಯತೆ ಇದೆ. ಘಟನೆ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಎಫ್.ಎಸ್.ಎಲ್ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾಕೆ ಆತ್ಮಹತ್ಯೆಗೆ ಶರಣಾದರು ಎಂಬುವುದರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದ್ದೇವೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:09 pm, Mon, 6 January 25

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್