AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ: 4 ಲಕ್ಷಕ್ಕೂ ಅಧಿಕ ಮೌಲ್ಯದ ಔಷಧ ಜಪ್ತಿ

ಬೆಂಗಳೂರಿನ ಅನಧಿಕೃತ ಇ-ಕಾಮರ್ಸ್ ಔಷಧ ಗೋದಾಮುಗಳ ಮೇಲೆ ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಇಲಾಖೆ ದಾಳಿ ಮಾಡಿದೆ. ಪರವಾನಗಿ ಇಲ್ಲದೆ ಔಷಧ ಸಂಗ್ರಹಿಸಿ ವಿತರಿಸುತ್ತಿದ್ದ ಆನೇಕಲ್, ದೇವನಹಳ್ಳಿ ಅಮೆಜಾನ್ ಆವರಣಗಳಿಂದ 4 ಲಕ್ಷಕ್ಕೂ ಅಧಿಕ ಮೌಲ್ಯದ ಔಷಧ ಜಪ್ತಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಫ್‌ಡಿಎ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ: 4 ಲಕ್ಷಕ್ಕೂ ಅಧಿಕ ಮೌಲ್ಯದ ಔಷಧ ಜಪ್ತಿ
ಪ್ರಾತಿನಿಧಿಕ ಚಿತ್ರ Image Credit source: Getty images
ವಿನಯ್​ ಕಾಶಪ್ಪನವರ್​
| Edited By: |

Updated on:Sep 08, 2026 | 3:38 PM

Share

ಬೆಂಗಳೂರು, ಸೆಪ್ಟೆಂಬರ್​ 06: ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಅಕ್ರಮವಾಗಿ ಔಷಧಗಳನ್ನು ಸಂಗ್ರಹಿಸಿ, ವಿತರಣೆ ಮಾಡುತ್ತಿದ್ದ ಇ-ಕಾಮರ್ಸ್ ಸಂಸ್ಥೆಗಳ ಗೋದಾಮುಗಳ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಇಲಾಖೆ ಏಕಕಾಲದಲ್ಲಿ ಮಿಂಚಿನ ದಾಳಿ ಮಾಡಿದೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಭ್ಯವಾದ ನಿಖರ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳು, ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಒಟ್ಟು 4,02,352 ರೂ ಮೌಲ್ಯದ ಔಷಧಗಳನ್ನು ಜಪ್ತಿ ಮಾಡಿದ್ದಾರೆ.

ಅಮೆಜಾನ್ ಗೋದಾಮಿನ ಮೇಲೆ ದಾಳಿ: 2.45 ಲಕ್ಷ ಮೌಲ್ಯದ ಔಷಧ ವಶ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ತಟ್ಟನಹಳ್ಳಿಯಲ್ಲಿರುವ ಮೆಸರ್ಸ್ ಅಮೆಜಾನ್ ಸೆಲ್ಲರ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಪರವಾನಗಿ ರಹಿತ ಆವರಣದ ಮೇಲೆ ರಾಜ್ಯ ಗುಪ್ತದಳ ವಿಭಾಗದ ಸಹಾಯಕ ಔಷಧ ನಿಯಂತ್ರಕ ಮನೋಹರ್ ಅವರ ನೇತೃತ್ವದ ತಂಡ ದಾಳಿ ಮಾಡಿದೆ. ಪರಿಶೀಲನೆ ವೇಳೆ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 2,45,352 ರೂ ಮೌಲ್ಯದ ಔಷಧಗಳನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ.

ದೇವನಹಳ್ಳಿ ಏರೋಸ್ಪೇಸ್ ಅಮೆಜಾನ್ ಆವರಣದಲ್ಲೂ ಪರಿಶೀಲನೆ

ಇನ್ನು ಮತ್ತೊಂದೆಡೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಏರೋಸ್ಪೇಸ್ ಪ್ರದೇಶದಲ್ಲಿರುವ ಮೆಸರ್ಸ್ ಅಮೆಜಾನ್ ಸಂಸ್ಥೆಯ ಪರವಾನಗಿ ರಹಿತ ಆವರಣದ ಮೇಲೂ ಏಕಕಾಲದಲ್ಲಿ ದಾಳಿ ಮಾಡಲಾಗಿದೆ. ಜಿಲ್ಲಾ ಔಷಧ ಪರಿವೀಕ್ಷಕಿ ವಿಭಾ ಅವರ ನೇತೃತ್ವದ ತಂಡ ಪರಿಶೀಲನೆ ನಡೆಸಿ, 1,57,000 ರೂ ಮೌಲ್ಯದ ಔಷಧಗಳನ್ನು ಜಪ್ತಿ ಮಾಡಿದೆ.

LIVE TV

ಇದನ್ನೂ ಓದಿ: ಬೆಂಗಳೂರಿನ ಹಾಕಿ ಕ್ಲಬ್‌ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ, ಕೊಳೆತ ತರಕಾರಿ, ಎಕ್ಸ್‌ಪೈರಿ ಕೂಲ್‌ಡ್ರಿಂಕ್ಸ್ ಪತ್ತೆ

ಎರಡೂ ಕಡೆಗಳಲ್ಲಿ ಔಷಧ ಸಂಗ್ರಹಣೆಗೆ ಯಾವುದೇ ಮಾನ್ಯತೆ ಪಡೆದ ದಾಖಲೆಗಳು ಇಲ್ಲದಿರುವುದು ಬೆಳಕಿಗೆ ಬಂದಿದ್ದು, ಔಷಧ ಮಾರಾಟ ಹಾಗೂ ದಾಸ್ತಾನಿನಲ್ಲಿ ಕಡ್ಡಾಯವಾಗಿ ನಿಯಮ ಪಾಲಿಸುವಂತೆ ಎಫ್‌ಡಿಎ ಕಟ್ಟುನಿಟ್ಟಿನ ಸಂದೇಶ ರವಾನಿಸಿದೆ. ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳ ಹೆಸರಿನಲ್ಲಿ ನಿಯಮಬಾಹಿರವಾಗಿ ಔಷಧ ದಾಸ್ತಾನು ಮಾಡುವ ಸಂಸ್ಥೆಗಳ ವಿರುದ್ಧ ಇಂತಹ ಕಾರ್ಯಾಚರಣೆಗಳು ಮುಂದೆಯೂ ಮುಂದುವರಿಯಲಿವೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:48 pm, Sun, 6 September 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ