ಪೋಷಕರೇ ಎಚ್ಚರ! ನಿಮ್ಮ ಮಕ್ಕಳಿಗೂ ಹೀಗಾಗಬಹುದು? ಬೆಂಗಳೂರಿನ ಪ್ರತಿಷ್ಠಿತ ಶಾಲೆ ವಿರುದ್ದ ಎಫ್ಐಆರ್ ದಾಖಲು
ಬೆಂಗಳೂರಿನ ವಸಂತನಗರದ ಪ್ರತಿಷ್ಠಿತ ಶಾಲೆಯ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ವಿರುದ್ದ ಎಫ್ಐಆರ್ ದಾಖಲಾಗಿದೆ. ಶಾಲಾ ಆಡಳಿತ ಮಂಡಳಿಯು 10 ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಯಲ್ಲಿ ದಾಖಲಿಸಿ ಪರೀಕ್ಷೆ ಬರೆಸಿ, ಉದ್ದೇಶಪೂರ್ವಕವಾಗಿ ಫೇಲ್ ಮಾಡಿಸಿದ ಆರೋಪ ಕೇಳಿಬಂದಿದೆ. ಅದರಲ್ಲೂ ಹಿಂದೂ ಮಕ್ಕಳಿಗೆ ಮಾತ್ರ ಹೀಗೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಬೆಂಗಳೂರು, ಜೂನ್ 19: ವಸಂತ ನಗರದ ಪ್ರತಿಷ್ಠಿತ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್ (St. Mary’s Girls High School) ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ವಿರುದ್ದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. 100% ಫಲಿತಾಂಶಕ್ಕಾಗಿ ಸಾಧಾರಣವಾಗಿ ಓದುವ ವಿದ್ಯಾರ್ಥಿಗಳನ್ನು ಅವರ ಪೋಷಕರ ಗಮನಕ್ಕೂ ಬಾರದೆ ಅನಾಥ ಮಕ್ಕಳು ಎಂದು ಸರ್ಕಾರಿ ಶಾಲೆಯಲ್ಲಿ ಅಡ್ಮಿಷನ್ ಮಾಡಿಸಿರುವ ಆರೋಪ ಶಾಲೆ ವಿರುದ್ಧ ಕೇಳಿಬಂದಿದೆ. ಆ ಮೂಲಕ ಮಕ್ಕಳ ಭವಿಷ್ಯದ ಜೊತೆ ಆಟವಾಡಿದರಾ ಎಂಬ ಪ್ರಶ್ನೆ ಹುಟ್ಟುಕೊಂಡಿದೆ.
ಹಿಂದೂ ಮಕ್ಕಳಿಗೆ ಮಾತ್ರ ಹೀಗೆ
ಸದ್ಯ ಶಾಲಾ ಮಂಡಳಿ ವಿರುದ್ಧ ಮಕ್ಕಳು ಹಾಗೂ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಮಕ್ಕಳಿಗೆ ಈ ರೀತಿ ಮಾಡಲ್ಲ. ಹಿಂದೂ ಮಕ್ಕಳಿಗೆ ಈ ರೀತಿ ಮಾಡುತ್ತಾರೆ ಎಂದು ಆರೋಪಿಸಲಾಗಿದ್ದು, ಇವರಿಂದಾಗಿ ಮಕ್ಕಳ ಭವಿಷ್ಯ ಹಾಳಾಯ್ತು ಎಂದು ಅಳಲು ತೊಡಿಕೊಂಡಿದ್ದಾರೆ.
ನಡೆದದ್ದೇನು?
ಶಾಲೆಯ ಸುಮಾರು 10 ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಅಡ್ಮಿಷನ್ ಮಾಡಲಾಗಿದೆ. ಮಕ್ಕಳಿಗೆ ಸರ್ಕಾರಿ ಶಾಲೆ ಸಮವಸ್ತ್ರ ಹಾಕಿ ಫೋಟೋ ಸಹ ತೆಗೆದುಕೊಂಡಿದ್ದಾರೆ. ನಂತರ ಪರೀಕ್ಷೆ ಸಮಯದಲ್ಲಿ ಹಾಲ್ ಟಿಕೆಟ್ ನೀಡಿ ಸರ್ಕಾರಿ ಶಾಲೆಯಲ್ಲಿ ಪರೀಕ್ಷೆ ಬರೆಸಲಾಗಿದೆ. ಪರೀಕ್ಷೆ ಬರೆದ ಮಕ್ಕಳಿಗೆ ಇಂಟರ್ನಲ್ಸ್ ಅಂಕ ಸಿಗದೇ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡಿದಾಗ ಶಾಲೆ ಕಳ್ಳಾಟ ಬಯಲಾಗಿದೆ.
ಇದನ್ನೂ ಓದಿ: ತುಮಕೂರು: ರಾಷ್ಟ್ರಮಟ್ಟದ ವಿದ್ಯಾರ್ಥಿವೇತನಕ್ಕೆ ಸಿದ್ದಗಂಗಾ ಮಠದ ಆರು ವಿದ್ಯಾರ್ಥಿಗಳು ಆಯ್ಕೆ
ಶುಲ್ಕ ಕಟ್ಟಿರುವ ಪೋಷಕರು ತಮ್ಮ ಮಕ್ಕಳನ್ನು ಸೇಂಟ್ ಮೇರಿಸ್ ಶಾಲೆಗೆ ಕಳಿಸಿದ್ದಾರೆ. ಆದರೆ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಇದೆ. ಈ ವಿಚಾರ ಪೋಷಕರ ಗಮನಕ್ಕೂ ಬಂದಿಲ್ಲ. ಇತ್ತ ಶಾಲೆಗೆ ಬಂದಿಲ್ಲ ಎಂದು ಸರ್ಕಾರಿ ಶಾಲೆಯಲ್ಲಿ ಇಂಟರ್ನಲ್ಸ್ ಅಂಕ ನೀಡಿರಲಿಲ್ಲಾ ಎಂಬುದು ಪತ್ತೆಯಾಗಿದೆ.
ಇದನ್ನೂ ಓದಿ: ಜಾತಿ ಗಣತಿ: ಸಿಎಂ ವಿರುದ್ಧವೇ ದಾಳ ಉರುಳಿಸಿದ್ದ ಸಚಿವರು! ತೆರೆಮರೆಯ ರಹಸ್ಯ ಕಹಾನಿಯ ವಿವರ ಇಲ್ಲಿದೆ
ನಂತರ ಪೋಷಕರು ಶಾಲೆ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇದೀಗ ಎಫ್ಐಆರ್ ದಾಖಲಾಗಿದೆ. ಸೂಕ್ತ ಕಾನೂನು ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:56 am, Thu, 19 June 25







