Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ ಮುಂದುವರೆದ ಬಿಬಿಎಂಪಿ ತಪಾಸಣೆ: 10 ರೆಸ್ಟೋರೆಂಟ್‌ ಬಂದ್​

ಬಿಬಿಎಂಪಿ ನೀಡಿರುವ ಮಾಹಿತಿ ಪ್ರಕಾರ, 74 ಬಾರ್​, ಪಬ್​, ರೆಸ್ಟೋರೆಂಟ್​​ಗಳಿಗೆ ನೋಟಿಸ್ ನೀಡಲಾಗಿದೆ. ಇಲ್ಲಿಯವರೆಗೆ ನೀಡಲಾದ ಒಟ್ಟು ನೋಟಿಸ್‌ಗಳ ಸಂಖ್ಯೆ 327ಕ್ಕೆ ತಲುಪಿದೆ. ನೋಟಿಸ್ ಪಡೆದಿರುವ ಉದ್ದಿಮೆಗಳು ಸೂಚಿಸಿರುವ ಬದಲಾವಣೆಗಳನ್ನು ಪಾಲಿಸಬೇಕು ಎಂದು ಬಿಬಿಂಪಿ ಹೇಳಿದೆ.

ನಗರದಲ್ಲಿ ಮುಂದುವರೆದ ಬಿಬಿಎಂಪಿ ತಪಾಸಣೆ: 10 ರೆಸ್ಟೋರೆಂಟ್‌ ಬಂದ್​
ಬಿಬಿಎಂಪಿ
Follow us
ವಿವೇಕ ಬಿರಾದಾರ
|

Updated on: Oct 24, 2023 | 10:22 AM

ಬೆಂಗಳೂರು ಅ.24: ಕೋರಮಂಗಲದ (Kormangala) ಹುಕ್ಕಾ ಬಾರ್ ಮಡ್​​ಪೈಪ್ ಕೆಫೆಯಲ್ಲಿ ಅಗ್ನಿ ದುರಂತ (Fire Accident) ಸಂಭವಿಸಿದ ನಂತರ ಅಲರ್ಟ್ ಆದ ಬಿಬಿಎಂಪಿ (BBMP) ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಗರದ ಪಬ್​, ಬಾರ್​​ ಮತ್ತು ರೆಸ್ಟೋರೆಂಟ್​ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಶನಿವಾರ ಜೆಪಿ ನಗರದಲ್ಲಿರುವ ರೂಫ್‌ಟಾಪ್ ಕೆಫೆ ಸೇರಿದಂತೆ 10 ರೆಸ್ಟೋರೆಂಟ್‌ಗಳನ್ನು ಮುಚ್ಚಿಸಿದ್ದಾರೆ.

ಎಂಟು ವಲಯಗಳಲ್ಲಿ ಒಟ್ಟು 43 ಉದ್ದಿಮೆಗಳನ್ನು ಬಿಬಿಎಂಪಿಯ ಅಧಿಕಾರಿಗಳು ಮುಚ್ಚಿಸಿದ್ದಾರೆ. ಬಿಬಿಎಂಪಿ ಒಟ್ಟು 1,118 ಉದ್ದಿಮೆಗಳಿಗೆ ಪರವಾನಿಗೆ ನೀಡಿದೆ. ಇದರಲ್ಲಿ ಇದುವರೆಗೆ 669 ಉದ್ದಮೆಗಳನ್ನು ತಪಾಸಣೆ ನಡೆಸಲಾಗಿದೆ. 157 ಉದ್ದಿಮೆಗಳು ಟ್ರೇಡ್ ಲೈಸೆನ್ಸ್ ಷರತ್ತುಗಳ ನಿಯಮಗಳನ್ನು ಉಲ್ಲಂಘನೆ ಮಾಡಿವೆ. ಬಿಬಿಎಂಪಿ ನೀಡಿರುವ ಮಾಹಿತಿ ಪ್ರಕಾರ, 74 ಉದ್ದಿಮೆಗಳಿಗೆ ನೋಟಿಸ್ ನೀಡಲಾಗಿದೆ. ಇಲ್ಲಿಯವರೆಗೆ ನೀಡಲಾದ ಒಟ್ಟು ನೋಟಿಸ್‌ಗಳ ಸಂಖ್ಯೆ 327ಕ್ಕೆ ತಲುಪಿದೆ. ನೋಟಿಸ್ ಪಡೆದಿರುವ ಉದ್ದಿಮೆಗಳು ಸೂಚಿಸಿರುವ ಬದಲಾವಣೆಗಳನ್ನು ಪಾಲಿಸಬೇಕು ಎಂದು ಬಿಬಿಎಂಪಿ ಹೇಳಿದೆ.

ಇದನ್ನೂ ಓದಿ: ಬೆಂಗಳೂರಿನ 86 ಪಬ್, ಬಾರ್ ಹಾಗೂ ರೆಸ್ಟೋರೆಂಟ್‌ಗಳಿಗೆ ನೋಟಿಸ್​​, 12 ಬಂದ್​ !

ಅಕ್ಟೋಬರ್​ 18 ರಂದು ಕೊರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಡ್​ಪೈಪ್ ಹುಕ್ಕಾ ಕೆಫೆ ಆರನೇ ಮಹಡಿಯಲ್ಲಿ 8 ರಿಂದ10 ಸಿಲಿಂಡರ್​ಗಳು ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ ಪ್ರಾಣ ಉಳಿಸಿಕೊಳ್ಳಲು ಪ್ರೇಮ್​ ಸಿಂಗ್​ ಎಂಬುವರು ಆರನೇ ಮಹಡಿಯಿಂದ ಕೆಳಗೆ ಜಿಗಿದಿದ್ದು, ಬಲಗೈ ಮೂಳೆ ಮುರಿದಿತ್ತು.

ಅಗ್ನಿಶಾಮಕ ಮತ್ತು ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಕೆಫೆ ಮಾಲೀಕರಿಗೆ ಆಹಾರ ಪೂರೈಸಲು ಮಾತ್ರ ಪರವಾನಗಿ ನೀಡಲಾಗಿತ್ತು, ಆದರೆ ಅವರು ಗ್ರಾಹಕರಿಗೆ ಅಕ್ರಮವಾಗಿ ಹುಕ್ಕಾ ನೀಡುತ್ತಿರುವುದು ಕಂಡುಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ