ಬೆಂಗಳೂರಿಗೆ ಬೆಂಕಿ ನಂದಿಸಲು ಬರಲಿವೆ ರೋಬೋಟ್​ಗಳು! ಅಗ್ನಿಶಾಮಕ ದಳಕ್ಕಿನ್ನು ರೋಬೋ ಬಲ

ಅಗ್ನಿ ಅವಘಡಗಳು ಸಂಭವಿಸಿದಾಗ ಅನೇಕ ಬಾರಿ ಅಗ್ನಿಶಾಮಕ ದಳದ ಸಿಬ್ಬಂದಿ ದುರ್ಘಟನೆ ಸಂಭವಿಸಿದ ಸ್ಥಳಕ್ಕೆ ತೆರಳಲು ಸಾಧ್ಯವಾಗದೇ ಇರುವುದೇ ಅನಾಹುತವನ್ನು ತಡೆಯುವಲ್ಲಿ ಕಷ್ಟಕರವಾಗಿ ಪರಿಣಮಿಸುತ್ತದೆ. ಇಂಥ ಸಂದರ್ಭಗಳಲ್ಲಿ ಯಂತ್ರ ಮಾನವರಾದ ರೋಬೋಟ್​ಗಳು ನೆರವಾಗಬಲ್ಲವು.. ಹೀಗಾಗಿ ಇದರ ಪ್ರಯೋಜನ ಪಡೆಯಲು ರಾಜ್ಯ ಅಗ್ನಿಶಾಮಕದಳ ಮುಂದಾಗಿದೆ. ಮೊದಲ ಹಂತದಲ್ಲಿ ಬೆಂಗಳೂರಿಗೆ ಬೆಂಕಿ ನಂದಿಸಲು ರೋಬೋಟ್​ಗಳು ಬರಲಿವೆ. ಆ ಕುರಿತು ವಿವರ ಇಲ್ಲಿದೆ.

ಬೆಂಗಳೂರಿಗೆ ಬೆಂಕಿ ನಂದಿಸಲು ಬರಲಿವೆ ರೋಬೋಟ್​ಗಳು! ಅಗ್ನಿಶಾಮಕ ದಳಕ್ಕಿನ್ನು ರೋಬೋ ಬಲ
ಬೆಂಗಳೂರಿಗೆ ಬೆಂಕಿ ನಂದಿಸಲು ಬರಲಿವೆ ರೋಬೋಟ್​ಗಳು! (ಸಾಂದರ್ಭಿಕ ಚಿತ್ರ)
Follow us
Kiran Surya
| Updated By: Ganapathi Sharma

Updated on: Jul 10, 2024 | 7:40 AM

ಬೆಂಗಳೂರು, ಜುಲೈ 10: ಬೆಂಗಳೂರು ನಗರದಲ್ಲಿ ಸಾಕಷ್ಟು ಬಾರಿ ಅಗ್ನಿ ಅವಘಡಗಳು ಸಂಭವಿಸಿದಾಗ ಅಗ್ನಿಶಾಮಕ ದಳ ಸಿಬ್ಬಂದಿಗಳು ಕಿರಿದಾದ ರಸ್ತೆಗಳು, ಗೋಡೌನ್, ಬೇಸ್‌ಮೆಂಟ್, ಬಹುಮಹಡಿಗಳು ಸೇರಿದಂತೆ ಕೆಲವು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಲು ಕಷ್ಟಪಡಬೇಕಾಗುತ್ತದೆ. ಇಂತಹ ಸಂದರ್ಭಗಳಲ್ಲಿ ರೋಬೋಟ್ ಬಳಕೆ ಮಾಡಿಕೊಂಡು ಬೆಂಕಿ ನಂದಿಸಬಹುದು. ಸಿಬ್ಬಂದಿ ತೆರಳಲು ಸಾಧ್ಯವಾಗದಂಥ ಸ್ಥಳಗಳಿಗೆ ರಿಮೋಟ್ ಕಂಟ್ರೋಲ್ ರೋಬೋಟ್ ಬಳಸಿಕೊಂಡು ಬೆಂಕಿ ಕಾರ್ಯಾಚರಣೆ ಮಾಡಬಹುದಾಗಿದೆ. ಇದೀಗ ಬೆಂಗಳೂರು ಅಗ್ನಿಶಾಮಕ ದಳದವರೂ ಈ ಕಾರ್ಯಕ್ಕೆ ಮುಂದಾಗಿದ್ದಾರೆ.

1 ಕೋಟಿ ರೂ.ನಲ್ಲಿ 10 ರೋಬೋಟ್ ಖರೀದಿ

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಹತ್ತು ರೋಬೋಟ್​​ಗಳನ್ನು ಖರೀದಿ ಮಾಡಲು ಅಗ್ನಿಶಾಮಕ ದಳ ಮುಂದಾಗಿದೆ. ಈಗಾಗಲೇ ದೆಹಲಿ, ಮುಂಬೈ, ಹರಿಯಾಣ ಸೇರಿದಂತೆ ಕೆಲವು ರಾಜ್ಯಗಳ ಅಗ್ನಿ ಶಾಮಕ ದಳಗಳಲ್ಲಿ ರೋಬೋಟ್​​ಗಳಿದ್ದು ಅವು ದುರ್ಗಮ ಸ್ಥಳಗಳಲ್ಲಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಕೂಡ ಆಗಿವೆ.

ರೋಬೋಟ್ ಸಿಬ್ಬಂದಿಯ ವಿಶೇಷವೇನು?

ಈ ರೋಬೋಟ್‌ನಲ್ಲಿ ಅಗ್ನಿ ನಿರೋಧಕ ಹೊದಿಕೆ, ವಾಟರ್ ಚೆಟ್, ಚಿಕ್ಕ ಗಾಲಿಗಳು, ಚೈನ್ ವ್ಯವಸ್ಥೆ ಇರಲಿದೆ. ಎಲೆಕ್ಟ್ರಾನಿಕ್ ಸರ್ವೈಲೆನ್ಸ್ ಕ್ಯಾಮರಾದ ಕಣ್ಣು ಇರಲಿದ್ದು, ಘಟನಾ ಸ್ಥಳದ ಚಿತ್ರವನ್ನು ಸೆರೆ ಹಿಡಿದು ಕಂಟ್ರೋಲ್ ಯೂನಿಟ್‌ಗೆ ರವಾನಿಸಲಿದೆ. ದಿಢೀರ್ ಅಗ್ನಿ ಅವಘಡಗಳ ವೇಳೆ ಹೆಚ್ಚಿನ ಜೀವಹಾನಿ ತಪ್ಪಿಸಲು ಹಾಗೂ ಸಿಬ್ಬಂದಿ ನಿಖರವಾಗಿ ಕಾರ್ಯನಿರ್ವಹಿಸಲು ಈ ರೋಬೋಟ್ ನೆರವಾಗಲಿದೆ.

ಇದನ್ನೂ ಓದಿ: ಒಂದೇ ದಿನ ಬೆಂಗಳೂರಿನಲ್ಲಿ 91 ಡೆಂಗ್ಯೂ ಪ್ರಕರಣ ಪತ್ತೆ; ಶಿವಮೊಗ್ಗದಲ್ಲಿ ಮಹಿಳೆ ಸಾವು

ಈ ರೋಬೋಟ್​​ಗಳು ಸುಮಾರು 100 ಅಡಿ ದೂರದಿಂದ ನೀರು ಸಿಂಪಡಿಸುವ ಸಾಮರ್ಥ್ಯ ಹೊಂದಿವೆ. ಜೆಟ್ ಮುಖಾಂತರ ಕೇವಲ ನೀರು ಮಾತ್ರವಲ್ಲದೆ, ನೊರೆ, ವಿವಿಧ ದ್ರಾವಣಗಳನ್ನು ಸಿಂಪಡಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು