AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಾಗರಬಾವಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ, ಉಸಿರುಗಟ್ಟಿ ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರಿನ ನಾಗರಬಾವಿಯ ಹೋಟೆಲೊಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 45 ವರ್ಷದ ರಾಜಕುಮಾರ್ ಎಂಬುವವರು ಮೃತಪಟ್ಟಿದ್ದಾರೆ. ಬೆಂಕಿಯಿಂದ ಆವರಿಸಿದ ದಟ್ಟಹೊಗೆಯಿಂದಾಗಿ ಉಸಿರುಗಟ್ಟಿ ಈ ಸಾವು ಸಂಭವಿಸಿದ್ದು, ಗಾಯಗೊಂಡಿರುವ ಉಳಿದ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿಯೂ ಗಂಭೀರವಾಗಿದೆ ಎಂಬುದು ತಿಳಿದುಬಂದಿದೆ.

ಬೆಂಗಳೂರು: ನಾಗರಬಾವಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ, ಉಸಿರುಗಟ್ಟಿ ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ
ನಾಗರಬಾವಿ ಹೋಟೆಲ್​ನಲ್ಲಿ ಬೆಂಕಿImage Credit source: tv9
ಶಿವಪ್ರಸಾದ್​ ಬಿ.
| Edited By: |

Updated on:May 09, 2026 | 9:19 AM

Share

ಬೆಂಗಳೂರು, ಮೇ 9: ಬೆಂಗಳೂರಿನ (Bengaluru) ನಾಗರಬಾವಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ನಾಗರಬಾವಿಯ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಒಟ್ಟು ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮುಖ್ಯಾಂಶಗಳು

  • ನಾಗರಬಾವಿಯ ದುರ್ಗಾ ಶ್ರೀ ಗ್ರ್ಯಾಂಡ್ ಹೋಟೆಲ್​ನಲ್ಲಿ ಅಗ್ನಿ ಅವಘಡ.
  • ಉಸಿರುಗಟ್ಟಿ ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ.
  • ಬೆಂಕಿ ಅವಘಡ ಸಂಭವಿಸಿದಾಗ ಹೋಟೆಲ್​ನ ಮೇಲಿನ ಮಹಡಿಯಲ್ಲಿದ್ದ ಐವರು ಸಿಬ್ಬಂದಿ

ಹೋಟೆಲ್ ಒಳಗೆ ಸಿಲುಕಿದ್ದವರನ್ನು ಭೀಮ, ಶಿವಾನಂದ, ಸತೀಶ್ ಮತ್ತು ರಾಜಕುಮಾರ್ ಎಂದು ಗುರುತಿಸಲಾಗಿದೆ. ದುರದೃಷ್ಟವಶಾತ್, ಅತಿಯಾದ ಹೊಗೆ ಸೇವನೆಯಿಂದ ಅಸ್ವಸ್ಥರಾಗಿದ್ದ 45 ವರ್ಷದ ರಾಜಕುಮಾರ್ ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಳಿದ ನಾಲ್ವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳದ ಕಾರ್ಯಾಚರಣೆ ಮುಂದುವರಿದಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ: ಹೆಂಡತಿ, ಮಕ್ಕಳನ್ನು ಕಳುಹಿಸಿಕೊಡಿ ಎಂದಿದ್ದಕ್ಕೆ ಅಳಿಯನಿಗೆ ಬೆಂಕಿ ಹಚ್ಚಿ ಕೊಲೆ! ಮಾವ, ಭಾವ ಅಂದರ್

ಅಗ್ನಿ ಅವಘಡ ಸಂಭವಿಸಿದಾಗ ಸಿಬ್ಬಂದಿ ಹೋಟೆಲ್​ನ ಮೇಲಿನ ಮಹಡಿಯಲ್ಲಿ ಇದ್ದರು. ಬೆಂಕಿಯ ಜ್ವಾಲೆಗಳು ಜೋರಾಗಿ ಮೇಲಿನ ಫ್ಲೋರ್​ಗೂ ತಗುಲಿದ್ದಲ್ಲದೆ, ದಟ್ಟ ಹೊಗೆ ಆವರಿಸಿತ್ತು. ಈ ವೇಳೆ, ಒಳಗೆ ಐವರು ಸಿಬ್ಬಂದಿ ವಾಸವಿದ್ದ ಜಾಗಕ್ಕೂ ಬೆಂಕಿ ಆವರಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:53 am, Sat, 9 May 26

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ