ಅತ್ತಿಬೆಲೆ ಪಟಾಕಿ ಅಗ್ನಿ ದುರಂತ ಪ್ರಕರಣ ಸಿಐಡಿಗೆ, ಮೃತ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಅತ್ತಿಬೆಲೆಯಲ್ಲಿನ ಪಟಾಕಿ ಗೋಡೌನ್​ ಅಗ್ನಿ ದುರಂತ ದುರದೃಷ್ಟಕರ. ಪ್ರಕರಣವನ್ನು ಸಿಐಡಿಗೆ ನೀಡಲಾಗುವುದು. ಮೃತರ ಕುಟಂಬಸ್ಥರಿಗೆ ಐದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಅತ್ತಿಬೆಲೆ ಪಟಾಕಿ ಅಗ್ನಿ ದುರಂತ ಪ್ರಕರಣ ಸಿಐಡಿಗೆ, ಮೃತ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಸಿಎಂ ಸಿದ್ದರಾಮಯ್ಯ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 08, 2023 | 2:42 PM

ಬೆಂಗಳೂರು ಅ.08: ಆನೆಕಲ್​ ತಾಲೂಕಿನ ಅತ್ತಿಬೆಲೆಯಲ್ಲಿನ (Attibele) ಪಟಾಕಿ ಗೋಡೌನ್​ (Firecrackers Godown) ಅಗ್ನಿ ದುರಂತ (Explosion) ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಅಗ್ನಿಶಾಮಕ ಡಿಜಿ ಕಮಲ್​​ ಪಂತ್ ಅವರ ಚರ್ಚಿಸಿ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಅತ್ತಿಬೆಲೆಯಲ್ಲಿನ ಪಟಾಕಿ ಗೋಡೌನ್​ ಅಗ್ನಿ ದುರಂತ ದುರದೃಷ್ಟಕರ. ಪ್ರಕರಣವನ್ನು ಸಿಐಡಿಗೆ ನೀಡಲಾಗುವುದು. ಮೃತರ ಕುಟಂಬಸ್ಥರಿಗೆ ಐದು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.

ಶನಿವಾರ ಮಧ್ಯಾಹ್ನ 3.15ರಿಂದ 3.30ರ ನಡುವೆ ಘಟನೆ ನಡೆದಿದೆ. ತಮಿಳುನಾಡಿನಿಂದ ಟ್ರಕ್​​ನಲ್ಲಿ ಪಟಾಕಿಯನ್ನು ತರಲಾಗಿದೆ. ಅಗ್ನಿ ದುರಂತಕ್ಕೆ ಕಾರಣ ಏನೂ ಅಂತ ತಿಳಿದುಬಂದಿಲ್ಲ. ವಿದ್ಯುತ್​ ತಂತಿ ಅಥವಾ ಯುಪಿಎಸ್​​ನಿಂದ ಘಟನೆ ನಡೆದಿರುವ ಮಾಹಿತಿ ದೊರೆತಿದೆ. ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಗೋಡೌನ್​ನಲ್ಲಿ ಸುರಕ್ಷತಾ ಕ್ರಮ ಇಲ್ಲದಿರುವ ಬಗ್ಗೆ ಮಾಹಿತಿ ದೊರೆತಿದೆ ಎಂದರು.

ಇದನ್ನೂ ಓದಿ: ರಾಜ್ಯಾದ್ಯಂತ ಇರುವ ಪಟಾಕಿ ಅಂಗಡಿ ಪರಿಶೀಲನೆಗೆ ಡಿಕೆ ಶಿವಕುಮಾರ್​​ ಸೂಚನೆ

ಅಲ್ಲಿ ಕೆಲಸ ಮಾಡುತ್ತಿದ್ದವರು ಎಲ್ಲರೂ ವಿಧ್ಯಾರ್ಥಿಗಳು. ರಜೆ ಸಮಯದಲ್ಲಿ ದುಡಿಮೆಗೆ ಇಲ್ಲಿಗೆ ಬಂದಿದ್ದಾರೆ. ಘಟನೆ ನಡೆದಿರುವುದು ದುಃಖಕರ ಸಂಗತಿ. ಪ್ರಕರಣ ಸಂಬಂಧ ಪಟಾಕಿ ಮಾಲೀಕ ರಾಮಸ್ವಾಮಿ ರೆಡ್ಡಿ, ಪುತ್ರ ನವೀನ್​ ಮತ್ತು ಕಟ್ಟಡದ ಮಾಲೀಕ ಅನಿಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಗೋಡೌನ್​​ನಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿಲ್ಲ. ಪಟಾಕಿ ಮಾರಾಟ ಮಾಡಲು ಹಾಗೂ ಸಂಗ್ರಹಿಸಲು ಎರಡಕ್ಕೂ ಲೈಸೆನ್ಸ್  ಇದೆಯಾ? ಎಂಬುವುದನ್ನು ಪರಿಶೀಲಿಸಬೇಕಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಸಚಿವರಾದ ರಾಮಲಿಂಗಾರೆಡ್ಡಿ, ಭೈರತಿ ಸುರೇಶ್ ಮತ್ತು ಶಾಸಕ ಎಸ್​.ಟಿ.ಸೋಮಶೇಖರ್​ ಸೇರಿದಂತೆ ಹಲವರು ಸಾಥ್ ನೀಡಿದರು. ​​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:03 pm, Sun, 8 October 23