ಬೆಂಗಳೂರಿನಲ್ಲಿ ಮಧ್ಯರಾತ್ರಿ ಪೊಲೀಸರಿಂದ ಫೈರಿಂಗ್: ಹಲ್ಲೆಗೆ ಯತ್ನಿಸಿದ ಜಿಶಾನ್ ಕಾಲಿಗೆ ಗುಂಡು!

ಬೆಂಗಳೂರಿನ ಬಂಡೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಮಾರಕಾಸ್ತ್ರದೊಂದಿಗೆ ಓಡಾಡುತ್ತಿದ್ದ ಆರೋಪಿ ಜಿಶಾನ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದಾಗ, ಪಿಎಸ್‌ಐ ಸಚಿನ್ ಆತನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಗಾಯಾಳು ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿಯನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಲ್ಲಿ ಮಧ್ಯರಾತ್ರಿ ಪೊಲೀಸರಿಂದ ಫೈರಿಂಗ್: ಹಲ್ಲೆಗೆ ಯತ್ನಿಸಿದ ಜಿಶಾನ್ ಕಾಲಿಗೆ ಗುಂಡು!
ಸಾಂದರ್ಭಿಕ ಚಿತ್ರ
Image Credit source: Deccan herald
Edited By:

Updated on: Aug 28, 2026 | 12:21 PM

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಆರೋಪಿ ಮೇಲೆ ಫೈರಿಂಗ್.
  • ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಜಿಶಾನ್ ಕಾಲಿಗೆ ಗುಂಡೇಟು.
  • ಗಾಯಗೊಂಡ ಪೊಲೀಸ್ ಸಿಬ್ಬಂದಿ ಹಾಗೂ ಆರೋಪಿ ಆಸ್ಪತ್ರೆಗೆ ದಾಖಲು.

ಬೆಂಗಳೂರು, ಆಗಸ್ಟ್ 28: ನಗರದ (Bengaluru) ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ಪೊಲೀಸರ ಬಂದೂಕು ಸದ್ದು ಮಾಡಿದೆ. ದ್ವಿಚಕ್ರ ವಾಹನದಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಿದ್ದ ಆರೋಪಿ ಜಿಶಾನ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ನಡೆದಿದ್ದೇನು?

ಸೋಮಸುಂಡ್ರಪಾಳ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಬೈಕ್‌ನಲ್ಲಿ ಮಾರಕಾಸ್ತ್ರದೊಂದಿಗೆ ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಬಂಡೆಪಾಳ್ಯ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಮಾಹಿತಿ ಸಿಗುತ್ತಿದ್ದಂತೆಯೇ ಬಂಡೆಪಾಳ್ಯ ಠಾಣೆಯ ಪಿಎಸ್‌ಐ ಸಚಿನ್ ಹಾಗೂ ಸಿಬ್ಬಂದಿ ಸಂದೀಪ್ ಕಾಂಬ್ಳೆ ತಕ್ಷಣ ಸ್ಥಳಕ್ಕೆ ಧಾವಿಸಿದರು.

ಮಧ್ಯರಾತ್ರಿ ಸುಮಾರು 12.50ರ ವೇಳೆಗೆ ಪೊಲೀಸರು ಆರೋಪಿ ಜಿಶಾನ್‌ನನ್ನು ವಶಕ್ಕೆ ಪಡೆಯಲು ಯತ್ನಿಸಿದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ, ತನ್ನ ಬಳಿಯಿದ್ದ ಮಾರಕಾಸ್ತ್ರದಿಂದ ಸಿಬ್ಬಂದಿ ಸಂದೀಪ್ ಕಾಂಬ್ಳೆ ಅವರ ಮೇಲೆ ಭೀಕರ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ, ಆತ ಪಿಎಸ್‌ಐ ಸಚಿನ್ ಅವರ ಮೇಲೆಯೂ ಹಲ್ಲೆಗೆ ಯತ್ನಿಸಿದಾಗ, ಆತ್ಮರಕ್ಷಣೆಗಾಗಿ ಪಿಎಸ್‌ಐ ಸಚಿನ್ ಅವರು ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ.

YouTube video player

ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲ

ಘಟನೆಯಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿ ಸಂದೀಪ್ ಕಾಂಬ್ಳೆ ಹಾಗೂ ಕಾಲಿಗೆ ಗುಂಡೇಟು ಬಿದ್ದ ಆರೋಪಿ ಜಿಶಾನ್ ಇಬ್ಬರನ್ನೂ ಚಿಕಿತ್ಸೆಗಾಗಿ ತಕ್ಷಣವೇ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 am, Fri, 28 August 26

ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Loading...
Unable to load recommendations.
Follow Us