AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ಮನೆಗಳ ಮುಳುಗಡೆಗೆ ರಸ್ತೆಗಳೇ ಕಂಟಕ: ಮಿಲ್ಲಿಂಗ್ ಮಾಡದೆ ಡಾಂಬರು ಹಾಕಿ ಮನೆಗಳಿಗಿಂತ ರಸ್ತೆ ಎತ್ತರಿಸುತ್ತಿರುವ ಜಿಬಿಎ

ಬೆಂಗಳೂರಿನಲ್ಲಿ ರಸ್ತೆಗಳ ಎತ್ತರ ಹೆಚ್ಚಳದಿಂದ ಮನೆಗಳಿಗೆ ನೀರು ನುಗ್ಗುತ್ತಿದೆ. GBA ಇಂಜಿನಿಯರ್‌ಗಳು 'ಮಿಲ್ಲಿಂಗ್' ನಿಯಮ ಪಾಲಿಸದೆ ಹಳೆಯ ರಸ್ತೆಯ ಮೇಲೆ ಪದರ ಪದರವಾಗಿ ಡಾಂಬರು ಹಾಕುತ್ತಿರುವುದೇ ಇದಕ್ಕೆ ಕಾರಣ. ಗುತ್ತಿಗೆದಾರರ ಲಾಭಕೋರತನ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ನಾಗರಿಕರು ಪ್ರತಿ ಮಳೆಗಾಲದಲ್ಲಿ ಆಸ್ತಿ ನಷ್ಟ ಅನುಭವಿಸುತ್ತಿದ್ದಾರೆ. ಈ ಅವೈಜ್ಞಾನಿಕ ಕಾಮಗಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ ಮನೆಗಳ ಮುಳುಗಡೆಗೆ ರಸ್ತೆಗಳೇ ಕಂಟಕ: ಮಿಲ್ಲಿಂಗ್ ಮಾಡದೆ ಡಾಂಬರು ಹಾಕಿ ಮನೆಗಳಿಗಿಂತ ರಸ್ತೆ ಎತ್ತರಿಸುತ್ತಿರುವ ಜಿಬಿಎ
Bengaluru Flooding Crisis
ಅಕ್ಷಯ್​ ಪಲ್ಲಮಜಲು​​
|

Updated on: Jun 22, 2026 | 11:05 AM

Share

ಬೆಂಗಳೂರು, ಜೂ.22: ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯ ಮಳೆ ಬಂದರೂ ಹಳೆಯ ಬಡಾವಣೆಗಳ ಮನೆಗಳಿಗೆ ನೀರು ನುಗ್ಗಿ ಜಲಾವೃತವಾಗಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇಂಜಿನಿಯರ್‌ಗಳ ಬೇಜವಾಬ್ದಾರಿತನವೇ ನೇರ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ರಸ್ತೆಗಳಿಗೆ ಮರುಡಾಂಬರೀಕರಣ (Resurfacing) ಮಾಡುವ ಮುನ್ನ ಹಳೆಯ ಡಾಂಬರನ್ನು ಕೆರೆದು ತೆಗೆಯುವ ‘ಮಿಲ್ಲಿಂಗ್’ (Milling) ನಿಯಮವನ್ನು ಗಾಳಿಗೆ ತೂರಿ, ಹಳೆಯ ರಸ್ತೆಯ ಮೇಲೆಯೇ ಪದರ ಪದರವಾಗಿ ಹೊಸ ಡಾಂಬರು ಹಾಕುತ್ತಿರುವುದರಿಂದ ರಸ್ತೆಗಳ ಎತ್ತರ ಹೆಚ್ಚಾಗುತ್ತಿದ್ದು, ಮನೆಗಳು ತಗ್ಗು ಪ್ರದೇಶಕ್ಕೆ ತಳ್ಳಲ್ಪಡುತ್ತಿವೆ ಎಂಬ ದೂರುಗಳು ಕೇಳಿ ಬಂದಿದೆ.

ಬೆಂಗಳೂರು ಪೋಸ್ಟ್​​​ ಎಂಬ ಎಕ್ಸ್ ಖಾತೆಯಲ್ಲಿ​​​​​​​​​​ ನಾಗರಿಕರು ಈ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. “ದಶಕಗಳ ಹಿಂದೆ ನಿರ್ಮಿಸಲಾದ ಮನೆಗಳಿಗಿಂತ ಈಗಿನ ರಸ್ತೆಗಳೇ ಎತ್ತರವಾಗಿವೆ. ಮಳೆ ಬಂದಾಗ ರಸ್ತೆಯ ನೀರೆಲ್ಲಾ ಸಹಜವಾಗಿಯೇ ತಗ್ಗಿನಲ್ಲಿರುವ ಮನೆಗಳ ಆವರಣಕ್ಕೆ ನುಗ್ಗುತ್ತಿದೆ. ಜಿಬಿಎ ಇಂಜಿನಿಯರ್‌ಗಳು ನಿಯಮಾವಳಿಗಳನ್ನು ಪಾಲಿಸುತ್ತಿಲ್ಲ” ಎಂದು ನಾಗರಿಕರು ಆತಂಕ ಹಂಚಿಕೊಂಡಿದ್ದಾರೆ.

ಇಲ್ಲಿದೆ ನೋಡಿ ಸ್ಟೋರಿ:

ಪಾಲಿಕೆಯ ನಿಯಮಾವಳಿಗಳ ಪ್ರಕಾರ, ಯಾವುದೇ ರಸ್ತೆಗೆ ಮರುಡಾಂಬರೀಕರಣ ಮಾಡುವ ಮುನ್ನ ಹಳೆಯ ರಸ್ತೆಯ ಮೇಲ್ಭಾಗವನ್ನು ‘ಮಿಲ್ಲಿಂಗ್ ಮೆಷಿನ್’ ಮೂಲಕ ಕೆರೆದು ಸಮತಟ್ಟು ಮಾಡಬೇಕು. ಆದರೆ ಬೆಂಗಳೂರಿನಲ್ಲಿ ಈ ನಿಯಮ ಪಾಲನೆಯಾಗುತ್ತಿಲ್ಲ. ಇದಕ್ಕೆ ಪ್ರಮುಖ ಕಾರಣಗಳು ಇಲ್ಲಿವೆ ನೋಡಿ.

ಕ್ವಿಕ್-ಫಿಕ್ಸ್ (Quick-fix) ತಂತ್ರ: ಹಳೆಯ ರಸ್ತೆ ಕೆರೆಯುವ ಪ್ರಕ್ರಿಯೆಗೆ ಸಮಯ ಮತ್ತು ಶ್ರಮ ಹೆಚ್ಚು ಬೇಕಾಗುತ್ತದೆ. ಹೀಗಾಗಿ ಇಂಜಿನಿಯರ್‌ಗಳು ಮತ್ತು ಗುತ್ತಿಗೆದಾರರು ಶಾರ್ಟ್‌ಕಟ್ ಹುಡುಕುತ್ತಿದ್ದು, ಕೇವಲ ಕಾಟಾಚಾರಕ್ಕೆ ರಸ್ತೆ ನಿರ್ಮಿಸುತ್ತಿದ್ದಾರೆ.

ವೆಚ್ಚ ಉಳಿತಾಯ ಮತ್ತು ನಿರ್ಲಕ್ಷ್ಯ: ಮಿಲ್ಲಿಂಗ್ ಮಾಡಲು ಪ್ರತ್ಯೇಕ ಯಂತ್ರೋಪಕರಣಗಳು ಹಾಗೂ ಹೆಚ್ಚುವರಿ ಅನುದಾನ ಬೇಕಾಗುತ್ತದೆ. ಗುತ್ತಿಗೆದಾರರು ಲಾಭದ ಆಸೆಗೆ ಬಿದ್ದು ಈ ಹಂತವನ್ನು ಸಂಪೂರ್ಣವಾಗಿ ಕೈಬಿಡುತ್ತಿದ್ದಾರೆ. ಇದಕ್ಕೆ ಅಧಿಕಾರಿಗಳ ಮೌನ ಸಮ್ಮತಿಯೂ ಇದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಟೋಲ್ ಕಟ್ಟಲ್ಲ ಅಂದ್ರೆ ಒನ್ ವೇ ನಲ್ಲಿ ನುಗ್ತೀರಾ?: ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ

ಇನ್ನು ಈ ಬಗ್ಗೆ ಎಕ್ಸ್​​ನಲ್ಲಿ ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ನಿಯಮಗಳಿದ್ದರೂ ಬಿಬಿಎಂಪಿ ಇಂಜಿನಿಯರ್‌ಗಳು ‘ಮಿಲ್ಲಿಂಗ್’ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಏಕೆ ಜಾರಿಗೊಳಿಸುತ್ತಿಲ್ಲ? ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವ ಕಾಮಗಾರಿಗಳಲ್ಲಿ ಇಂತಹ ‘ಕ್ವಿಕ್-ಫಿಕ್ಸ್’ ಆಟಗಳಿಗೆ ಬ್ರೇಕ್ ಹಾಕುವುದು ಯಾವಾಗ? ಎಂಬೆಲ್ಲ ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರತಿ ವರ್ಷ ಮಳೆಗಾಲದಲ್ಲಿ ಕೋಟ್ಯಂತರ ರೂಪಾಯಿ ಆಸ್ತಿ-ಪಾಸ್ತಿ ನಷ್ಟ ಅನುಭವಿಸುತ್ತಿರುವ ಹಳೆಯ ಮನೆಗಳ ಮಾಲೀಕರು, ಈ ಅವೈಜ್ಞಾನಿಕ ರಸ್ತೆ ಕಾಮಗಾರಿಗಳ ವಿರುದ್ಧ ಜಿಬಿಎ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್