ಬೆಂಗಳೂರಿನಲ್ಲಿ ಕಳೆದ ಒಂದೆರಡು ವಾರದಿಂದ ಭಾರಿ ಮಳೆ ಸುರಿಯುತ್ತಿದೆ. ಹಲವು ಕಡೆ ರಸ್ತೆ, ಮನೆಗಳೆಲ್ಲವೂ ಜಲಾವೃತವಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ನಿವಾಸಿಗಳ ಕುಂದುಕೊರತೆಯನ್ನು ಆಲಿಸಲು ಪ್ರತಿ ವಾರ್ಡ್‌ನಲ್ಲೂ ಕುಂದುಕೊರತೆ ವಿಭಾಗವನ್ನು ಸ್ಥಾಪಿಸುವಂತೆ ಕರ್ನಾಟಕ ಹೈಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದೆ.
ಬುಧವಾರ ಹೊರಡಿಸಿದ ಆದೇಶದಲ್ಲಿ ಬೆಂಗಳೂರಿನ ಪ್ರತಿ ವಾರ್ಡ್‌ನಲ್ಲಿ ವಿಭಾಗವನ್ನು ಸ್ಥಾಪಿಸುವುದು ಕಡ್ಡಾಯವಾಗಿದೆ. ಪ್ರತಿ ವಿಭಾಗದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವ ಎಂಜಿನಿಯರ್ ಇರುತ್ತಾರೆ.
ಸುದ್ದಿಯನ್ನು ಇಂಗ್ಲಿಷ್ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ
ನಿವಾಸಿಗಳ ಕುಂದುಕೊರತೆಗಳನ್ನು ನಿಭಾಯಿಸಲು ಪ್ರತಿ ವಾರ್ಡ್‌ನಲ್ಲಿರುವ ವಾರ್ಡ್ ಎಂಜಿನಿಯರ್‌ಗೆ ಸೂಚಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ. ನಿವಾಸಿಗಳ ಕುಂದುಕೊರತೆಗಳನ್ನು ಆಲಿಸುವ ಮತ್ತು ವ್ಯವಸ್ಥಿತ ನೀರಿನ ಹರಿವು ನಿರ್ವಹಿಸಲು ಪ್ರತಿ ವಾರ್ಡ್‌ಗೆ ಎಂಜಿನಿಯರ್‌ಗಳ ತಂಡವನ್ನು ಸ್ಥಾಪಿಸಲು ಸೂಚಿಸುವಂತೆ ನ್ಯಾಯಾಲಯ ಬಿಬಿಎಂಪಿಗೆ ಸೂಚಿಸಿದೆ.
ಪ್ರಸ್ತಾವನೆಯನ್ನು ತ್ವರಿತಗೊಳಿಸುವಂತೆ ಮತ್ತು ರಾಜ್ಯ ಸರ್ಕಾರದ ಅನುಮೋದನೆಯನ್ನು ಶೀಘ್ರವಾಗಿ ಪಡೆಯುವಂತೆ ನಾಗರಿಕ ಸಂಸ್ಥೆಗೆ ನಿರ್ದೇಶನ ನೀಡಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ನ್ಯಾಯಾಲಯದ ವಿಭಾಗೀಯ ಪೀಠವು ಬಿಬಿಎಂಪಿಯು ರಸ್ತೆಗಳ ಕಳಪೆ ನಿರ್ವಹಣೆ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸುತ್ತಿದ್ದಾರೆ.
ವಿಚಾರಣೆ ವೇಳೆ ಬಿಬಿಎಂಪಿ ವಕೀಲರು ನಗರದಲ್ಲಿ ಪ್ರವಾಹ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಬೆಂಗಳೂರಿನ ಎಲ್ಲಾ ಕೆರೆಗಳಿಗೆ ಸ್ಲೂಸ್ ಗೇಟ್ ಅಳವಡಿಸಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ತತ್‌ಕ್ಷಣದ ಕ್ರಮವಾಗಿ, ಪಂಪ್‌ಗಳನ್ನು ಬಳಸಿ ಜಲಾವೃತ ಪ್ರದೇಶಗಳಿಂದ ನೀರನ್ನು ಹೊರಬಿಡಲಾಗುತ್ತಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.