AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರಿಗೆ ಬಿಗ್​​ ಶಾಕ್​​​​​: ಚಳಿಗಾಲದಲ್ಲಿ ಹೊರಗೆ ಹೋಗುವ ಮುನ್ನ ಎಚ್ಚರ

Bangalore seasonal flu: ಬೆಂಗಳೂರಿನಲ್ಲಿ ಕಾಲೋಚಿತ ಜ್ವರ ಮತ್ತು ಉಸಿರಾಟದ ಕಾಯಿಲೆಗಳು ಗಣನೀಯವಾಗಿ ಹೆಚ್ಚಾಗುತ್ತಿವೆ. ತಾಪಮಾನದ ಏರಿಳಿತ, ಗಾಳಿಯ ಗುಣಮಟ್ಟದಲ್ಲಿನ ಬದಲಾವಣೆ ಇದಕ್ಕೆ ಪ್ರಮುಖ ಕಾರಣ. ಮಕ್ಕಳು, ಹಿರಿಯರು, ಗರ್ಭಿಣಿಯರು ಮತ್ತು ದೀರ್ಘಕಾಲದ ಕಾಯಿಲೆ ಇರುವವರು ಹೆಚ್ಚು ಅಪಾಯದಲ್ಲಿದ್ದಾರೆ. ರೋಗಲಕ್ಷಣಗಳನ್ನು ನಿರ್ಲಕ್ಷಿಸದೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಮತ್ತು ಸೋಂಕು ಹರಡದಂತೆ ಜಾಗೃತಿ ವಹಿಸಲು ವೈದ್ಯರು ಸಲಹೆ ನೀಡಿದ್ದಾರೆ.

ಬೆಂಗಳೂರಿಗರಿಗೆ ಬಿಗ್​​ ಶಾಕ್​​​​​: ಚಳಿಗಾಲದಲ್ಲಿ ಹೊರಗೆ ಹೋಗುವ ಮುನ್ನ ಎಚ್ಚರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jan 02, 2026 | 6:39 PM

Share

ಬೆಂಗಳೂರು, ಜ.2: ಬೆಂಗಳೂರಿನಲ್ಲಿ ವೈರಲ್ ಜ್ವರ (seasonal flu Bangalore) ಮತ್ತು ಇತರ ಉಸಿರಾಟದ ಕಾಯಿಲೆಗಳು ಗಮನಾರ್ಹವಾಗಿ ಹೆಚ್ಚಾಗುತ್ತಿವೆ ಎಂದು ವರದಿಯಾಗಿದೆ. ಕೆಮ್ಮು, ಜ್ವರ ಮತ್ತು ಉಸಿರಾಟಕ್ಕೆ ಸಂಬಂಧಿಸಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಗಳು ವರದಿ ಮಾಡಿದೆ. ತಾಪಮಾನದಲ್ಲಿನ ಏರಿಳಿತ, ಅದರಲ್ಲೂ ಗಾಳಿಯ ಗುಣಮಟ್ಟದಲ್ಲಿ ಬದಲಾವಣೆ, ರಾತ್ರಿ ಹೊತ್ತು ತಂಪಾದ ಗಾಳಿ, ಇದು ಸೋಂಕುಗಳು ಹರಡಲು ಅನುಕೂಲಕರ ಪರಿಸ್ಥಿತಿಗಳನ್ನು ಸೃಷ್ಟಿಸಿವೆ ಎಂದು ವೈದ್ಯರು ಹೇಳಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ಹೊರ ರೋಗಿಗಳಿಗೆ ನೀಡಲಾಗುವ ಸೌಲಭ್ಯದ ಆಧಾರದಿಂದ ಕಾಲೋಚಿತ ಜ್ವರ ಪ್ರಕರಣಗಳು ಹೆಚ್ಚಾಗಿದೆ ಎಂಬ ವರದಿಯನ್ನು ನೀಡಲಾಗಿದೆ ಎಂದು ದಿ ಹಿಂದೂ ವರದಿ ತಿಳಿಸಿದೆ .

ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳು ರೋಗಿಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯಾಗಿದೆ ಎಂಬ ವರದಿಯನ್ನು ನೀಡಿದೆ. ಇನ್ನು ಈ ಜ್ವರಕ್ಕೆ ಆಸ್ತಮಾ, ಬ್ರಾಂಕೈಟಿಸ್, (ಶ್ವಾಸಕೋಶದ ಉಸಿರಾಟದ ನಾಳಗಳು ಉರಿ) ಮಧುಮೇಹ, ಅಲರ್ಜಿಗಳು ಮತ್ತು ಹೃದ್ರೋಗದಂತಹ ಆರೋಗ್ಯ ಸಮಸ್ಯೆಗಳು ಇರುವವರೇ ತುತ್ತಾಗುತ್ತಿದ್ದಾರೆ ಎಂದು ಹೇಳಲಾಗಿದೆ. ಹೆಚ್ಚಿನ ಪ್ರಮಾಣದ ಪ್ರಕರಣಗಳು 65 ವರ್ಷಕ್ಕಿಂತ ಮೇಲ್ಪಟ್ಟ ಜನರಲ್ಲಿ ಕಂಡು ಬಂದಿದೆ. ರೋಗಿಗಳಲ್ಲಿ ಸಾಮಾನ್ಯವಾಗಿ ಆರಂಭದಲ್ಲಿ ಸೌಮ್ಯ ಜ್ವರ ಪತ್ತೆ ಮಾಡಲಾಗಿದೆ. ನಂತರ ನಿರಂತರ ಕೆಮ್ಮು, ಶೀತ, ಎದೆಯ ಅಸ್ವಸ್ಥತೆ ಮತ್ತು ತಲೆನೋವು ಕಾಣಿಸಿಕೊಳ್ಳುತ್ತದೆ.

ಸೋಂಕಿತ ಮೇಲ್ಮೈ ಸಂಪರ್ಕದಿಂದ ಅಂದರೆ ಉಸಿರಾಟ ಗಾಳಿ, ಕೆಮ್ಮು, ಸ್ವರ್ಶದಿಂದ ಈ ರೋಗವು ಹರಡುವ ಸಾಧ್ಯತೆ ಹೆಚ್ಚು ಎಂದು ಹೇಳಲಾಗಿದೆ. ಋತುಮಾನದ ಜ್ವರವು ಸಾಮಾನ್ಯವಾಗಿ ಒಂದು ವಾರದೊಳಗೆ ಪರಿಹರವಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಮಕ್ಕಳು, ಹಿರಿಯ ನಾಗರಿಕರು, ಗರ್ಭಿಣಿಯರು ಮತ್ತು ದುರ್ಬಲಗೊಂಡ ರೋಗನಿರೋಧಕ ಶಕ್ತಿ ಅಥವಾ ದೀರ್ಘಕಾಲದ ಕಾಯಿಲೆಗಳನ್ನು ಹೊಂದಿರುವ ಜನರು ಸೇರಿದಂತೆ ಇತರ ರೋಗಿಗಳು ಇದರಿಂದ ಹೆಚ್ಚಿನ ಅಪಾಯಗಳನ್ನು ಅನುಭವಿಸಬಹುದು.

ಇದನ್ನೂ ಓದಿ: ಈ ಅಭ್ಯಾಸಗಳಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಸಾಧ್ಯತೆ ಹೆಚ್ಚು; ಈ ಬಗ್ಗೆ ಜಾಗೃತೆ ವಹಿಸಬೇಕು ಎನ್ನುತ್ತಾರೆ ಡಾ. ಸಂತೋಷ್

ಇದನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ ಅಥವಾ ವೈದ್ಯಕೀಯ ಚಿಕಿತ್ಸೆ ಪಡೆಯುವುದನ್ನು ವಿಳಂಬ ಮಾಡಬೇಡಿ ಎಂದು ವೈದ್ಯರು ಹೇಳಿದ್ದಾರೆ. ಇದನ್ನು ತಡೆಯಲು ಸರ್ಕಾರ ಈಗಾಗಲೇ ಕೆಲವೊಂದು ಶಿಬಿರಗಳು ನಡೆಸುತ್ತಿದೆ. ಇದಕ್ಕಾಗಿ ವೈದ್ಯಕೀಯ ಸೌಲಭ್ಯಗಳು ಹೆಚ್ಚಿಸುವ ಕೆಲಸವನ್ನು ಮಾಡುತ್ತಿದೆ. ಚಳಿಗಾಲದ ತಿಂಗಳುಗಳಲ್ಲಿ ಸಾರ್ವಜನಿಕ ಜಾಗೃತಿ ಅಭಿಯಾನಗಳನ್ನು ನಡೆಸುವಂತೆ ಜಿಲ್ಲಾ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಇದರ ಬಗ್ಗೆ ಖಾಸಗಿ ಆಸ್ಪತ್ರೆಗಳು ಸಹ ಇದೇ ರೀತಿಯ ಕಳವಳಗಳನ್ನು ವ್ಯಕ್ತಪಡಿಸಿದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Fri, 2 January 26