AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಂಬರ್‌ಶಿಪ್​​​ಗೆ ಲಕ್ಷಾಂತರ ರೂ ಪಡೆಯುವ ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ಗಳ ಬಣ ಬಯಲು

Bengaluru Food Safety Raids: ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಂದ ದಾಳಿ ಮುಂದುವರೆದಿದ್ದು, ಇಂದು ಬೆಂಗಳೂರಿನ ಪ್ರಮುಖ ಕ್ಲಬ್​​ಗಳ ಮೇಲೆ ದಾಳಿ ಮಾಡಿ ತೀವ್ರ ತಪಾಸಣೆ ಮಾಡಿದ್ದಾರೆ. ಈ ದಾಳಿ ವೇಳೆ ಜಿರಳೆ ಕಾಟ ಸೇರಿದಂತೆ ಹಲವು ಗಂಭೀರ ಲೋಪಗಳು ಪತ್ತೆಯಾಗಿವೆ.

ಮೆಂಬರ್‌ಶಿಪ್​​​ಗೆ ಲಕ್ಷಾಂತರ ರೂ ಪಡೆಯುವ ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ಗಳ ಬಣ ಬಯಲು
ಕ್ಲಬ್​​ಗಳ ಮೇಲೆ ಆಹಾರ ಇಲಾಖೆ ದಾಳಿImage Credit source: tv9 kannada
ವಿನಯ್​ ಕಾಶಪ್ಪನವರ್​
| Edited By: |

Updated on: Aug 26, 2026 | 6:16 PM

Share

ಮುಖ್ಯಾಂಶಗಳು

  • ಬೆಂಗಳೂರಿನ ಪ್ರತಿಷ್ಠಿತ ಕ್ಲಬ್​​ಗಳ ಮೇಲೆ ಆಹಾರ ಇಲಾಖೆ ದಾಳಿ
  • ಆಹಾರ ಸುರಕ್ಷತಾ ನಿಯಮ ಉಲ್ಲಂಘಿಸಿದ ಕ್ಲಬ್‌ಗಳು
  • ತಪಾಸಣೆ ವೇಳೆ ಕಳಪೆ ಗುಣಮಟ್ಟದ ಆಹಾರ, ಜಿರಳೆಗಳು ಪತ್ತೆ

ಬೆಂಗಳೂರು, ಆಗಸ್ಟ್​​ 26: ಪಂಚತಾರಾ ಹೋಟೆಲ್, ಪಬ್, ಇಂದಿರಾ ಕ್ಯಾಂಟೀನ್ ಬಳಿಕ ಇದೀಗ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು (Food Safety Raids) ಜಿಬಿಎ ವ್ಯಾಪ್ತಿಯ ಪ್ರಮುಖ ಪ್ರತಿಷ್ಠಿತ ಕ್ಲಬ್‌ಗಳ (Clubs) ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಕ್ಲಬ್‌ಗಳ ಅಡುಗೆಮನೆಗಳಲ್ಲಿ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯವನ್ನು ಸಂಪೂರ್ಣವಾಗಿ ಗಾಳಿಗೆ ತೂರಲಾಗಿದ್ದು, ಬಹುತೇಕ ಕಡೆಗಳಲ್ಲಿ ಜಿರಳೆಗಳ ಕಾಟ ಮತ್ತು ಅಸ್ವಚ್ಛತೆ ಪತ್ತೆಯಾಗಿದೆ. ಆ ಮೂಲಕ ಸದಸ್ಯತ್ವ ಪಡೆಯಲು 2 ಲಕ್ಷದಿಂದ ಬರೋಬ್ಬರಿ 25 ಲಕ್ಷದವರೆಗೂ ಶುಲ್ಕ ವಸೂಲಿ ಮಾಡುವ ರಾಜಧಾನಿಯ ಹೈಫೈ ಕ್ಲಬ್‌ಗಳ ಅಸಲಿ ಬಣ್ಣ ಬಯಲಾಗಿದೆ.

ಪ್ರತಿಷ್ಠಿತ 8 ಕ್ಲಬ್‌ಗಳ ಮೇಲೆ ದಾಳಿ 

ಸೆಂಚುರಿ ಕ್ಲಬ್, ಕೆಎಸ್‌ಸಿಎ (KSCA) ಕ್ಲಬ್, ಬೌರಿಂಗ್ ಕ್ಲಬ್, ಕ್ಯಾಥೊಲಿಕ್ ಕ್ಲಬ್, ಟೆನ್ನಿಸ್ ಕ್ಲಬ್, ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಹಾಗೂ ಮಲ್ಲೇಶ್ವರಂ ಕ್ಲಬ್‌ಗಳಲ್ಲಿ ಅಧಿಕಾರಿಗಳು ತಪಾಸಣೆ ಮಾಡಿದರು. ಈ ಕ್ಲಬ್‌ಗಳಲ್ಲಿ ದಕ್ಷಿಣ ಭಾರತ, ಉತ್ತರ ಭಾರತದ ಚಿಕನ್ ತಂದೂರಿ, ಫಿಶ್ ತವಾ ಫ್ರೈ, ಪನೀರ್ ಟಿಕ್ಕಾ, ಬಿರಿಯಾನಿ ಸೇರಿದಂತೆ ವಿವಿಧ ಬಗೆಯ ಸಸ್ಯಾಹಾರಿ ಮತ್ತು ಮಾಂಸಾಹಾರಿ ಭಕ್ಷ್ಯಗಳನ್ನು ತಯಾರಿಸಲಾಗುತ್ತಿತ್ತು. ದಾಳಿ ವೇಳೆ ಅಡುಗೆ ಮನೆಯ ಸ್ವಚ್ಛತೆ, ಸಿಬ್ಬಂದಿಯ ವೈಯಕ್ತಿಕ ನೈರ್ಮಲ್ಯ, ಡ್ರೈನೇಜ್, ಹಾಟ್ ವಾಟರ್ ವ್ಯವಸ್ಥೆ, ಫ್ರೋಜನ್ ಸ್ಟೋರೇಜ್ ಮತ್ತು ಎಣ್ಣೆಯ ಗುಣಮಟ್ಟವನ್ನು ತಪಾಸಣೆ ಮಾಡಲಾಗಿದೆ.

ಕೆಎಸ್‌ಸಿಎ ಕ್ಲಬ್‌ನಲ್ಲಿ ಅತಿ ಹೆಚ್ಚು ಲೋಪಗಳು ಪತ್ತೆ

ಅತ್ಯಂತ ಜನಪ್ರಿಯ ಕೆಎಸ್‌ಸಿಎ ಕ್ಲಬ್‌ನಲ್ಲಿ ಆಹಾರ ಸುರಕ್ಷತಾ ನಿಯಮಗಳ ಭಾರೀ ಉಲ್ಲಂಘನೆ ಪತ್ತೆಯಾಗಿದೆ. ಆಹಾರ ಸಿದ್ಧಪಡಿಸುವ ಸಿಬ್ಬಂದಿ ವೈಯಕ್ತಿಕ ನೈರ್ಮಲ್ಯದ ಕೊರತೆ ಕಂಡುಬಂದಿದ್ದು, ಆಹಾರ ಕತ್ತರಿಸಲು ನಿಷೇಧಿತ ಪ್ಲಾಸ್ಟಿಕ್ ಕಟಿಂಗ್ ಬೋರ್ಡ್ ಬಳಸುತ್ತಿದ್ದರು. ಡ್ರೈನೇಜ್ ಬ್ಲಾಕ್ ಆಗಿದ್ದು, ಫ್ರೋಜನ್ ಸ್ಟೋರೇಜ್ ಪ್ರದೇಶ ತೀವ್ರ ಅಸ್ವಚ್ಛತೆಯಿಂದ ಕೂಡಿತ್ತು.

ಇದನ್ನೂ ಓದಿ: ಸಿಬ್ಬಂದಿ ಕೊರತೆ ನಡುವೆಯೂ ಕಳಪೆ ಆಹಾರ ವಿರುದ್ಧ ಸಮರ ಸಾರಿರುವ ಆಹಾರ ಸುರಕ್ಷತಾ ಇಲಾಖೆ ಮೇಲೆ ಈಗ ಜನರಿಗೂ ಸಿಟ್ಟು! ಯಾಕೆ ಗೊತ್ತೇ?

ಸಸ್ಯಾಹಾರಿ ಮತ್ತು ಮಾಂಸಾಹಾರಿ ಪದಾರ್ಥಗಳನ್ನು ಪ್ರತ್ಯೇಕವಾಗಿ ಇಡದೆ ಒಟ್ಟಿಗೆ ಸಂಗ್ರಹಿಸಲಾಗಿತ್ತು. ಜೊತೆಗೆ ‘ಕೆ ಶಕ್ತಿ’ ತೊಗರಿಬೇಳೆ ಹಾಗೂ ತಿಲಾಪಿಯಾ ಮೀನಿನ ಪ್ಯಾಕೆಟ್‌ಗಳ ಮೇಲೆ ಪ್ಯಾಕಿಂಗ್ ದಿನಾಂಕ, ಬ್ಯಾಚ್ ನಂಬರ್, ಎಂಆರ್‌ಪಿಯಂತಹ ಕಡ್ಡಾಯ ಲೇಬಲ್ ವಿವರಗಳೇ ಇರಲಿಲ್ಲ. ಪಾತ್ರೆ ತೊಳೆಯುವ ಸ್ಥಳದಲ್ಲಿ ಬಿಸಿನೀರಿನ ವ್ಯವಸ್ಥೆಯೂ ಇರಲಿಲ್ಲ.

ಜಿರಳೆಗಳ ಕಾಟ

ತಪಾಸಣೆ ವೇಳೆ ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್ ಹಾಗೂ ಮಲ್ಲೇಶ್ವರಂ ಕ್ಲಬ್‌ಗಳ ಆಹಾರ ಸಂಗ್ರಹಣಾ ಸ್ಥಳಗಳಲ್ಲಿ ಸ್ವಚ್ಛತೆಯ ಕೊರತೆಯ ಜೊತೆಗೆ ಜಿರಳೆಗಳ ಕಾಟ ಇರುವುದು ಕಂಡುಬಂದಿದೆ. ಕ್ಯಾಥೊಲಿಕ್ ಕ್ಲಬ್‌ನಲ್ಲಿ ಆಹಾರ ತಯಾರಿ ಮತ್ತು ಪಾತ್ರೆ ತೊಳೆಯುವ ಜಾಗದಲ್ಲಿ ನಿಯಮ ಉಲ್ಲಂಘನೆಯಾಗಿದ್ದರೆ, ಟೆನ್ನಿಸ್ ಕ್ಲಬ್‌ನಲ್ಲಿ ಸಿಬ್ಬಂದಿಯ ವೈದ್ಯಕೀಯ ಪ್ರಮಾಣಪತ್ರದ ದಾಖಲೆಗಳೇ ಇರಲಿಲ್ಲ. ಇನ್ನು ವಿಜಯನಗರ ಹಾಗೂ ಮಹಾಲಕ್ಷ್ಮಿ ಲೇಔಟ್ ಕ್ಲಬ್‌ಗಳಲ್ಲೂ ಆಹಾರ ಸಂಗ್ರಹಣೆ ಹಾಗೂ ತಯಾರಿಕೆಯಲ್ಲಿ ಗಂಭೀರ ಲೋಪಗಳು ಪತ್ತೆಯಾಗಿವೆ. ಸದ್ಯ ಲೋಪ ಎಸಗಿರುವ ಕ್ಲಬ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಆಹಾರ ಇಲಾಖೆ ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ