AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಫುಟ್​ಪಾತ್ ಒತ್ತುವರಿ ತೆರವು ಮಾಡಿದರೂ ಮತ್ತೆ ಅತಿಕ್ರಮಣ: ತೆರವುಗೊಂಡ ಜಾಗ ಒಂದೇ ವಾರದಲ್ಲಿ ಯಥಾಸ್ಥಿತಿಗೆ!

ಬೆಂಗಳೂರಿನಲ್ಲಿ ಫುಟ್‌ಪಾತ್‌ ಒತ್ತುವರಿ ತೆರವು ಕಾರ್ಯಾಚರಣೆ ನಡೆದರೂ, ಅದೇ ಜಾಗಗಳಲ್ಲಿ ಕೆಲವೇ ದಿನಗಳಲ್ಲಿ ಮತ್ತೆ ಅಂಗಡಿಗಳು ತಲೆ ಎತ್ತುತ್ತಿವೆ. ಜಯನಗರ, ಸಿದ್ದಾಪುರ, ಮಲ್ಲೇಶ್ವರಂನಲ್ಲಿ ಪಾದಚಾರಿಗಳ ಜಾಗ ಮತ್ತೆ ಅತಿಕ್ರಮಣವಾಗಿದೆ. ಫುಟ್​ಪಾತ್ ಒತ್ತುವರಿ ತೆರವು ಮಾಡಿದ್ದರೂ, ತೆರವುಗೊಂಡ ಪ್ರದೇಶಗಳನ್ನು ಹಾಗೆಯೇ ಉಳಿಸಿಕೊಳ್ಳುವುದು ಪಾಲಿಕೆಗೆ ಸವಾಲಾಗಿದೆ.

ಬೆಂಗಳೂರಿನಲ್ಲಿ ಫುಟ್​ಪಾತ್ ಒತ್ತುವರಿ ತೆರವು ಮಾಡಿದರೂ ಮತ್ತೆ ಅತಿಕ್ರಮಣ: ತೆರವುಗೊಂಡ ಜಾಗ ಒಂದೇ ವಾರದಲ್ಲಿ ಯಥಾಸ್ಥಿತಿಗೆ!
ಫುಟ್‌ಪಾತ್‌ ಒತ್ತುವರಿImage Credit source: tv9
ಆರುಣ್ ಕುಮಾರ್​ ಆರ್​.
| Edited By: |

Updated on:Aug 21, 2026 | 7:47 AM

Share

ಮುಖ್ಯಾಂಶಗಳು

  • ತೆರವು ಮಾಡಿದ ಜಾಗದಲ್ಲೇ ಮತ್ತೆ ಒತ್ತುವರಿ
  • ಜಯನಗರ, ಸಿದ್ದಾಪುರ, ಮಲ್ಲೇಶ್ವರಂನಲ್ಲಿ ಯಥಾಸ್ಥಿತಿ
  • ತೆರವುಗೊಂಡ ಜಾಗ ಕಾಪಾಡುವುದೇ ಪಾಲಿಕೆಗೆ ಸವಾಲು

ಬೆಂಗಳೂರು, ಆಗಸ್ಟ್ 21: ಬೆಂಗಳೂರಿನಲ್ಲಿ (Bengaluru) ಫುಟ್‌ಪಾತ್‌ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದರೂ, ಅಧಿಕಾರಿಗಳು ತೆರವುಗೊಳಿಸಿದ ಕೆಲವೇ ದಿನಗಳಲ್ಲಿ ಅದೇ ಜಾಗದಲ್ಲಿ ಮತ್ತೆ ಅಂಗಡಿ-ಮುಂಗಟ್ಟುಗಳು ತಲೆ ಎತ್ತುತ್ತಿರುವುದು ಕಂಡುಬಂದಿದೆ. ಜಯನಗರ, ಗಾಂಧಿ ಬಜಾರ್‌, ಸಿದ್ದಾಪುರ ಹಾಗೂ ಮಲ್ಲೇಶ್ವರಂ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ತೆರವುಗೊಂಡ ಜಾಗ ಮತ್ತೆ ಒತ್ತುವರಿಯಾಗಿರುವುದು ಗಮನಕ್ಕೆ ಬಂದಿದೆ.

ಪಾದಚಾರಿಗಳ ಸುಗಮ ಸಂಚಾರಕ್ಕಾಗಿ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಅಕ್ರಮ ಶೆಡ್‌ಗಳು, ಮೆಟ್ಟಿಲುಗಳು, ಅಂಗಡಿ ಸಾಮಗ್ರಿಗಳು ಸೇರಿದಂತೆ ವಿವಿಧ ರೀತಿಯ ಅತಿಕ್ರಮಣಗಳನ್ನು ತೆರವುಗೊಳಿಸುತ್ತಿವೆ. ಆದರೆ ಕಾರ್ಯಾಚರಣೆ ಮುಗಿಸಿ ಅಧಿಕಾರಿಗಳು ಸ್ಥಳದಿಂದ ತೆರಳಿದ ಬಳಿಕ ಮತ್ತೆ ವ್ಯಾಪಾರ ಚಟುವಟಿಕೆಗಳು ಆರಂಭವಾಗುತ್ತಿರುವುದು ಪಾಲಿಕೆಯ ಕಾರ್ಯವೈಖರಿಯ ಮೇಲೆಯೇ ಪ್ರಶ್ನೆ ಮೂಡಿಸಿದೆ.

ಜಯನಗರದಲ್ಲಿ ಮತ್ತೆ ಬೀದಿಬದಿ ವ್ಯಾಪಾರ

ಜಯನಗರ 4ನೇ ಬ್ಲಾಕ್‌ನ ಮುಖ್ಯರಸ್ತೆಯಲ್ಲಿ ವಾರದ ಹಿಂದಷ್ಟೇ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿತ್ತು. ಬೀದಿಬದಿ ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಿದರೂ ಇದೀಗ ಅದೇ ಸ್ಥಳದಲ್ಲಿ ಮತ್ತೆ ವ್ಯಾಪಾರ ಸಾಮಗ್ರಿಗಳು ಹಾಗೂ ಅಂಗಡಿಗಳು ಕಾಣಿಸಿಕೊಂಡಿವೆ. ಫುಟ್‌ಪಾತ್‌ ಮೇಲೆಯೇ ವ್ಯಾಪಾರ ನಡೆಯುತ್ತಿರುವುದರಿಂದ ಪಾದಚಾರಿಗಳು ರಸ್ತೆಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳಿಗೂ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದಾಪುರದಲ್ಲಿ 10 ದಿನದಲ್ಲೇ ಮತ್ತೆ ಒತ್ತುವರಿ

ನಿಮ್ಹಾನ್ಸ್‌ ಆಸ್ಪತ್ರೆ ಸಮೀಪದ ಸಿದ್ದಾಪುರ ಮುಖ್ಯರಸ್ತೆಯಲ್ಲೂ ಇದೇ ಪರಿಸ್ಥಿತಿ ಕಂಡುಬಂದಿದೆ. ಕೆಲ ದಿನಗಳ ಹಿಂದೆ ಜಿಬಿಎ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ 40ಕ್ಕೂ ಹೆಚ್ಚು ಅಂಗಡಿಗಳನ್ನು ತೆರವುಗೊಳಿಸಿದ್ದರು.

ಆದರೆ ಕಾರ್ಯಾಚರಣೆ ನಡೆದ ಕೇವಲ 10 ದಿನಗಳಲ್ಲೇ ಫುಟ್‌ಪಾತ್‌ ಮೇಲೆ ಮತ್ತೆ 10ಕ್ಕೂ ಹೆಚ್ಚು ಅಂಗಡಿಗಳು ತಲೆ ಎತ್ತಿವೆ. ಒತ್ತುವರಿ ಮಾಡಿದವರಿಂದ ದುಪ್ಪಟ್ಟು ದಂಡ ವಸೂಲಿ ಮಾಡುವ ಎಚ್ಚರಿಕೆ ನೀಡಿದ್ದರೂ, ದಂಡಕ್ಕೂ ಹೆದರದೆ ಮತ್ತೆ ವ್ಯಾಪಾರ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಮಲ್ಲೇಶ್ವರಂನಲ್ಲೂ ಯಥಾಸ್ಥಿತಿ

ಮಲ್ಲೇಶ್ವರಂ 18ನೇ ಕ್ರಾಸ್‌ನಲ್ಲಿ ಸುಮಾರು 15 ದಿನಗಳ ಹಿಂದಷ್ಟೇ ದೊಡ್ಡ ಪ್ರಮಾಣದಲ್ಲಿ ಫುಟ್‌ಪಾತ್‌ ತೆರವು ಕಾರ್ಯಾಚರಣೆ ನಡೆಸಲಾಗಿತ್ತು. ಹಲವು ಬೀದಿಬದಿ ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಿ, ಪಾದಚಾರಿಗಳ ಸಂಚಾರಕ್ಕೆ ಜಾಗ ಕಲ್ಪಿಸಲಾಗಿತ್ತು.

ಆದರೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಮತ್ತೆ ಅದೇ ಸ್ಥಳದಲ್ಲಿ ಹೂವು, ಪೂಜಾ ಸಾಮಗ್ರಿ ಹಾಗೂ ಬಟ್ಟೆ ಮಳಿಗೆಗಳು ಕಾಣಿಸಿಕೊಂಡಿವೆ. ಫುಟ್‌ಪಾತ್‌ ಮೇಲೆ ವ್ಯಾಪಾರ ನಡೆಯುತ್ತಿರುವುದರಿಂದ ಪಾದಚಾರಿಗಳ ಸಂಚಾರಕ್ಕೆ ಮತ್ತೆ ಅಡ್ಡಿಯಾಗಿದೆ.

ತೆರವುಗೊಳಿಸುವುದಷ್ಟೇ ಸಾಕೇ?

ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವುದರ ಜತೆಗೆ ತೆರವುಗೊಂಡ ಜಾಗದಲ್ಲಿ ಮತ್ತೆ ಅತಿಕ್ರಮಣವಾಗದಂತೆ ನೋಡಿಕೊಳ್ಳುವುದು ಕೂಡ ಪಾಲಿಕೆ ಅಧಿಕಾರಿಗಳ ಜವಾಬ್ದಾರಿಯಾಗಿದೆ. ತೆರವುಗೊಂಡ ಕೆಲವೇ ದಿನಗಳಲ್ಲಿ ಮತ್ತೆ ಒತ್ತುವರಿ ನಡೆಯುತ್ತಿರುವುದು ಕಾರ್ಯಾಚರಣೆಯ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆ ಮೂಡಿಸಿದೆ.

ಇದನ್ನೂ ಓದಿ: ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್ ಓಡಿಸಿದ್ರೆ 5 ಸಾವಿರ ರೂ ದಂಡ! ಸಾರಿಗೆ ಸಚಿವರಿಗೆ ಕೃಷ್ಣಬೈರೇಗೌಡ ಪತ್ರ

ತೆರವುಗೊಂಡ ಪ್ರದೇಶಗಳಲ್ಲಿ ಮತ್ತೆ ಅತಿಕ್ರಮಣಕ್ಕೆ ಅವಕಾಶ ನೀಡದಂತೆ ಆಯಾ ವಲಯದ ಸಹಾಯಕ ಅಭಿಯಂತರರು ನಿಗಾ ವಹಿಸಬೇಕು. ಕರ್ತವ್ಯಲೋಪ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:44 am, Fri, 21 August 26

Follow Us
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಬಂಗಲೆಯ ಹೊರಗೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
ಕೆನ್ನೆಗೆ ಬಾರಿಸಿದ ಟೀಚರ್; ಕುಸಿದುಬಿದ್ದು ಪ್ರಾಣಬಿಟ್ಟ 6 ವರ್ಷದ ಮಗು!
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ