ಫುಟ್‌ಪಾತ್ ಮೇಲೆ ರೈಡಿಂಗ್‌ಗೆ ಬ್ರೇಕ್: 500 ರೂ. ದಂಡ 5,000 ರೂ.ಗೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ

ಬೆಂಗಳೂರಿನಲ್ಲಿ ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವ ಸವಾರರಿಗೆ ಶಾಕ್ ನೀಡಲು ಸಾರಿಗೆ ಇಲಾಖೆ ಮುಂದಾಗಿದೆ. ಪ್ರಸ್ತುತ 500 ರೂ. ದಂಡವನ್ನು 5,000 ರೂ.ಗೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಟ್ರಾಫಿಕ್ ತಪ್ಪಿಸಲು ಕಾಲುದಾರಿ ಬಳಸುವುದರಿಂದ ಪಾದಚಾರಿಗಳಿಗೆ ತೊಂದರೆಯಾಗುತ್ತಿದ್ದು, ಅವರ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸಚಿವ ಕೃಷ್ಣ ಬೈರೇಗೌಡರ ಮನವಿ ಮೇರೆಗೆ ಸಾರಿಗೆ ಸಚಿವರು ಈ ಪ್ರಸ್ತಾವನೆಗೆ ಶೀಘ್ರದಲ್ಲೇ ಅಂಕಿತ ಹಾಕುವ ಸಾಧ್ಯತೆ ಇದೆ.

ಫುಟ್‌ಪಾತ್ ಮೇಲೆ ರೈಡಿಂಗ್‌ಗೆ ಬ್ರೇಕ್: 500 ರೂ. ದಂಡ 5,000 ರೂ.ಗೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ
ಸಾಂದರ್ಭಿಕ ಚಿತ್ರ
Edited By:

Updated on: Aug 24, 2026 | 3:06 PM

ಬೆಂಗಳೂರು, ಆ.24: ರಾಜಧಾನಿಯಲ್ಲಿ ಟ್ರಾಫಿಕ್ ಜಾಮ್‌ನಿಂದ ತಪ್ಪಿಸಿಕೊಳ್ಳಲು ಫುಟ್‌ಪಾತ್ (ಕಾಲುದಾರಿ) ಮೇಲೆ ವಾಹನ ಚಲಾಯಿಸುವ ಸವಾರರಿಗೆ ಶಾಕ್ ನೀಡಲು ಸರ್ಕಾರ ಮುಂದಾಗಿದೆ. ಫುಟ್‌ಪಾತ್‌ಗಳ ಮೇಲೆ ವಾಹನ ಚಲಾಯಿಸುವವರ ವಿರುದ್ಧ ವಿಧಿಸಲಾಗುವ ದಂಡದ ಪ್ರಮಾಣವನ್ನು 500 ರಿಂದ 5,000 ರೂ.ಗೆ ಹೆಚ್ಚಿಸಲು ಸಾರಿಗೆ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಸದ್ಯ ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ 500 ರೂಪಾಯಿ ದಂಡ ವಿಧಿಸಲಾಗುತ್ತಿದೆ. ಇದನ್ನು 10 ಪಟ್ಟು ಅಂದರೆ 5,000 ರೂಪಾಯಿಗೆ ಹೆಚ್ಚಿಸುವಂತೆ ಸಾರಿಗೆ ಇಲಾಖೆಯು ಪ್ರಸ್ತಾವನೆ ಸಲ್ಲಿಸಿದೆ. ಈ ಹಿಂದೆ ಅಂದರೆ ಎರಡು ದಿನಗಳ ಹಿಂದೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಫುಟ್‌ಪಾತ್ ಮೇಲೆ ವಾಹನ ಚಾಲನೆ ತಡೆಯಲು ದಂಡದ ಪ್ರಮಾಣ ಹೆಚ್ಚಿಸುವಂತೆ ಸಾರಿಗೆ ಸಚಿವ ಭೈರತಿ ಸುರೇಶ್ ಗೆ ಪತ್ರ ಬರೆದಿದ್ದರು.

ನಗರದಲ್ಲಿ ಪೀಕ್ ಅವರ್‌ಗಳಲ್ಲಿ ಟ್ರಾಫಿಕ್ ಹೆಚ್ಚಾದಾಗ, ಅದರಲ್ಲೂ ಮುಖ್ಯವಾಗಿ ದ್ವಿಚಕ್ರ ವಾಹನ (ಟೂ-ವೀಲರ್) ಸವಾರರು ನಿಯಮ ಮುರಿದು ಫುಟ್‌ಪಾತ್‌ಗಳ ಮೇಲೆಯೇ ವಾಹನ ಚಲಾಯಿಸುತ್ತಿದ್ದಾರೆ. ಇದರಿಂದ ಪಾದಚಾರಿಗಳು ಭೀತಿಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಸಾರಿಗೆ ಇಲಾಖೆ ಸಲ್ಲಿಸಿರುವ ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಶೀಘ್ರದಲ್ಲೇ ಅಂಕಿತ ಹಾಕುವ ಸಾಧ್ಯತೆಯಿದೆ.

ಇದನ್ನೂ ಓದಿ: ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಡ್ರಗ್ಸ್ ಫ್ಯಾಕ್ಟರಿಯೇ ಪತ್ತೆ: 1.13 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್​​, 7 ಜನರ ಬಂಧನ

ಸಾರಿಗೆ ಸಚಿವರಿಗೆ ಕೃಷ್ಣಬೈರೇಗೌಡ ಪತ್ರ:

ರಾಜಧಾನಿಯಲ್ಲಿ ಟ್ರಾಫಿಕ್‌ನಿಂದ ತಪ್ಪಿಸಿಕೊಳ್ಳಲು ಫುಟ್‌ಪಾತ್ (ಕಾಲುದಾರಿ) ಮೇಲೆ ಬೇಕಾಬಿಟ್ಟಿ ದ್ವಿಚಕ್ರ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಫುಟ್‌ಪಾತ್‌ಗಳ ಮೇಲೆ ವಾಹನ ಓಡಿಸುವ ಸವಾರರಿಗೆ ವಿಧಿಸುತ್ತಿರುವ ಪ್ರಸ್ತುತ 500 ರೂ. ದಂಡದ ಮೊತ್ತವನ್ನು 5,000 ರೂ.ಗೆ ಹೆಚ್ಚಿಸುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ಸಾರಿಗೆ ಸಚಿವ ಭೈರತಿ ಸುರೇಶ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಸದ್ಯಕ್ಕೆ ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದರೆ 500 ರೂಪಾಯಿ ದಂಡವಿದೆ. ಇದನ್ನು 10 ಪಟ್ಟು ಅಂದರೆ 5,000 ರೂಪಾಯಿ ಮಾಡುವಂತೆ ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Loading...
Unable to load recommendations.
Follow Us