ಬೆಂಗಳೂರು: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವರು ಬುಧವಾರ ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊದಲೆ ನಿಗದಿಯಾದಂತೆ ಹೆಚ್​ಡಿ ಕುಮಾರಸ್ವಾಮಿಯವರು ಇಂದು (ಆ.30) ಕೋಲಾರ ಜಿಲ್ಲೆಯ ಶ್ರೀನಿವಾಸಪುರಕ್ಕೆ ಭೇಟಿ ನೀಡಬೇಕಿತ್ತು. ಇಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ವೇಳೆ  ರೈತರ ಬೆಳೆ ನಾಶಪಡಿಸಿರುವ ಆರೋಪ ಕೇಳಿಬಂದಿತ್ತು.

ಬೆಂಗಳೂರು: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Follow us
| Updated By: ವಿವೇಕ ಬಿರಾದಾರ

Updated on:Aug 30, 2023 | 9:57 AM

ಬೆಂಗಳೂರು: ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy) ಅವರು ಬೆಂಗಳೂರಿನ (Bengaluru) ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್​.ಡಿ  ಕುಮಾರಸ್ವಾಮಿಯವರು ಇಂದು (ಆ.30) ಕೋಲಾರ ಜಿಲ್ಲೆಯ ಶ್ರೀನಿವಾಸಪುರಕ್ಕೆ ಭೇಟಿ ನೀಡಬೇಕಿತ್ತು. ಅರಣ್ಯ ಭೂಮಿ ಒತ್ತುವರಿ ತೆರವು ವೇಳೆ ರೈತರ ಬೆಳೆ ನಾಶಪಡಿಸಿರುವ ಆರೋಪ ಕೇಳಿ ಬಂದಿತ್ತು.ಈ ಹಿನ್ನೆಲೆಯಲ್ಲಿ ಸ್ಥಳೀಯ ರೈತರು ಹಾಗೂ ಅಧಿಕಾರಿಗಳೊಂದಿಗೆ ಹೆಚ್​ಡಿ ಕುಮಾರಸ್ವಾಮಿಯವರು ಮಾತುಕತೆ ನಡೆಸಲಿದ್ದರು. ಆದರೆ, ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದ ಶ್ರೀನಿವಾಸಪುರ ಭೇಟಿ ರದ್ದಾಗಿದೆ.

ಹಲವು ವರ್ಷಗಳಿಂದ ರೈತರು ಹಾಗೂ ಅರಣ್ಯ ಇಲಾಖೆ ನಡುವೆ ನ್ಯಾಯಾಲಯದಲ್ಲಿ ಭೂ ವಿವಾದವಿತ್ತು, ನ್ಯಾಯಾಲಯದಲ್ಲಿ ‌ಅರಣ್ಯ ಇಲಾಖೆ ಪರ ಆದೇಶ ಬಂದ ಹಿನ್ನೆಲೆಯಲ್ಲಿ  ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ, ಚಿಂತಗುಂಡ, ಕೇತಗಾನಹಳ್ಳಿ ಬಳಿ ಕಳೆದ 6 ದಿನಗಳಲ್ಲಿ ಇದುವರೆಗೆ ಸುಮಾರು 560 ಎಕರೆ ಒತ್ತುವರಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯ ನಡೆದಿದೆ.  ತೆರವು ಕಾರ್ಯಾಚರಣೆ ವೇಳೆ ಕೋಳಿ ಫಾರಂಗಳು, ಮಾವಿನ ಮರಗಳು, ಎಲೆಕೋಸು, ಕ್ಯಾಪ್ಸಿಕಂ ಹಾಗೂ ಇತರೆ ಬೆಳೆಗಳು, ಪಂಪ್ ಸೆಟ್, ಬೋರ್ ವೆಲ್ ಎಲ್ಲವನ್ನೂ ತೆರವು ನಾಶಪಡಿಸಿದ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮಗನ ರಾಜಕೀಯ ಭವಿಷ್ಯ ನುಡಿದ ಅಪ್ಪ ಹೆಚ್​ಡಿ ಕುಮಾರಸ್ವಾಮಿ: ಮುಂದಿನ 5 ವರ್ಷ ನೋ ಪಾಲಿಟಿಕ್ಸ್​

ವಿಧಾನಸಭೆ ಚುನಾವಣೆ ಸಮಯದಲ್ಲೂ ಆಸ್ಪತ್ರೆಗೆ ದಾಖಲು

ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ಪಕ್ಷದ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ವೇಳೆಯೂ ಆಯಾಸದಿಂದಾಗಿ ಜ್ವರ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ವಿಶ್ರಾಂತಿ ಇಲ್ಲದೆ ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಅವರು ಈಗ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದರು. ಈ ವೇಳೆ ಹೆಚ್​ಡಿ ಕುಮಾರಸ್ವಾಮಿಯವರಿಗೆ ಸಣ್ಣ ಪ್ರಮಾಣದಲ್ಲಿ ಲಂಗ್ಸ್​ ಇನ್ಫೆಕ್ಷನ್ ಹಾಗೂ ಡಸ್ಟ್​ ಅಲರ್ಜಿ ಕೂಡ ಇತ್ತು. ಇದಲ್ಲದೆ ಜ್ವರ ಕೂಡಾ ಬಂದಿರುವ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Wed, 30 August 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ