AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು: ಬೆಂಗಳೂರಿನ ಆಸ್ಪತ್ರೆಯಲ್ಲಿ 3,000 ರೋಬೋಟಿಕ್ ಶಸ್ತ್ರಚಿಕಿತ್ಸೆ ಪೂರ್ಣ!

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯು ‘ಡಾ ವಿಂಚಿ ಎಕ್ಸ್‌ಐ’ ತಂತ್ರಜ್ಞಾನ ಬಳಸಿ 3,000 ರೋಬೋಟಿಕ್ ಶಸ್ತ್ರಚಿಕಿತ್ಸೆಗಳನ್ನು ಪೂರ್ಣಗೊಳಿಸಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಯುರಾಲಜಿ, ಕ್ಯಾನ್ಸರ್ ಹಾಗೂ ಕಿಡ್ನಿ ಕಸಿ ಸೇರಿದಂತೆ 12 ವೈದ್ಯಕೀಯ ವಿಭಾಗಗಳಲ್ಲಿ ಈ ಅತ್ಯಾಧುನಿಕ ಚಿಕಿತ್ಸೆ ನೀಡಲಾಗಿದ್ದು, ದೇಶದಲ್ಲೇ ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು: ಬೆಂಗಳೂರಿನ ಆಸ್ಪತ್ರೆಯಲ್ಲಿ 3,000 ರೋಬೋಟಿಕ್ ಶಸ್ತ್ರಚಿಕಿತ್ಸೆ ಪೂರ್ಣ!
ಸಾಂದರ್ಭಿಕ ಚಿತ್ರImage Credit source: gettyimages.com
ಭಾವನಾ ಹೆಗಡೆ
|

Updated on: Aug 02, 2026 | 8:59 AM

Share

ಮುಖ್ಯಾಂಶಗಳು

  • ಫೋರ್ಟಿಸ್ ಆಸ್ಪತ್ರೆಯಲ್ಲಿ 3,000 ರೋಬೋಟಿಕ್ ಶಸ್ತ್ರಚಿಕಿತ್ಸೆಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ.
  • ಡಾ ವಿಂಚಿ ಎಕ್ಸ್‌ಐ ತಂತ್ರಜ್ಞಾನ ಬಳಸಿ ದೇಶದಲ್ಲೇ ವೇಗದ ಸಾಧನೆ.
  • 12 ವೈದ್ಯಕೀಯ ವಿಭಾಗಗಳಲ್ಲಿ ರೋಬೋಟಿಕ್ ತಂತ್ರಜ್ಞಾನ ಬಳಸಿ ಚಿಕಿತ್ಸೆ ನೀಡಲಾಗಿದೆ.

ಬೆಂಗಳೂರು, ಆಗಸ್ಟ್ 02: ದೇಶದ ವೈದ್ಯಕೀಯ ಕ್ಷೇತ್ರದಲ್ಲಿ ಬೆಂಗಳೂರು ಮತ್ತೊಮ್ಮೆ ತನ್ನ ಶ್ರೇಷ್ಠತೆಯನ್ನು ಸಾಬೀತುಪಡಿಸಿದೆ. ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯು ‘ಡಾ ವಿಂಚಿ ಎಕ್ಸ್‌ಐ’ (Da Vinci Xi) ಶಸ್ತ್ರಚಿಕಿತ್ಸಾ ವ್ಯವಸ್ಥೆಯನ್ನು ಬಳಸಿ ಯಶಸ್ವಿಯಾಗಿ 3,000 ರೋಬೋಟ್ ನೆರವಿನ ಶಸ್ತ್ರಚಿಕಿತ್ಸೆಗಳನ್ನು (Robotic Surgeries) ಪೂರ್ಣಗೊಳಿಸುವ ಮೂಲಕ ದೇಶದಲ್ಲೇ ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

12 ವೈದ್ಯಕೀಯ ವಿಭಾಗಗಳಲ್ಲಿ ರೋಬೋಟಿಕ್ ತಂತ್ರಜ್ಞಾನ ಬಳಕೆ

2018ರಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸಾ ಯೋಜನೆಯನ್ನು ಪ್ರಾರಂಭಿಸಿದ ಆಸ್ಪತ್ರೆಯು, ಕಳೆದ ಎಂಟು ವರ್ಷಗಳಲ್ಲಿ ವಿವಿಧ 12 ಪ್ರಮುಖ ವೈದ್ಯಕೀಯ ವಿಭಾಗಗಳಲ್ಲಿ ಈ ಅತ್ಯಾಧುನಿಕ ತಂತ್ರಜ್ಞಾನವನ್ನು ಯಶಸ್ವಿಯಾಗಿ ಬಳಸಿಕೊಂಡಿದೆ. ಯುರಾಲಜಿ (ಮೂತ್ರಶಾಸ್ತ್ರ), ಕಿಡ್ನಿ ಕಸಿ, ಸ್ತ್ರೀರೋಗ ಶಾಸ್ತ್ರ, ಸರ್ಜಿಕಲ್ ಆಂಕಾಲಜಿ (ಕ್ಯಾನ್ಸರ್ ಶಸ್ತ್ರಚಿಕಿತ್ಸೆ), ಗ್ಯಾಸ್ಟ್ರೋಇಂಟಸ್ಟೈನಲ್, ಗ್ಯಾಸ್ಟ್ರಿಕ್ ಬೈಪಾಸ್ ಹಾಗೂ ಹೃದ್ರೋಗ ಶಸ್ತ್ರಚಿಕಿತ್ಸೆಗಳಲ್ಲಿ ರೋಬೋಟಿಕ್ ತಂತ್ರಜ್ಞಾನವನ್ನು ಬಳಸಲಾಗಿದೆ.

ಒಂದೇ ಸೂರಿನಡಿ ಎರಡು ‘ಡಾ ವಿಂಚಿ ಎಕ್ಸ್‌ಐ’ ರೋಬೋಟಿಕ್ ಸಿಸ್ಟಮ್‌ಗಳನ್ನು ಹೊಂದಿರುವ ಭಾರತದ ಕೆಲವೇ ಕೆಲವು ಆಸ್ಪತ್ರೆಗಳಲ್ಲಿ ಫೋರ್ಟಿಸ್ ಒಂದಾಗಿದೆ. ಅಲ್ಲದೆ, ದೇಶದಲ್ಲೇ ಮೊದಲ ಬಾರಿಗೆ ಮೂತ್ರಪಿಂಡ ಕಸಿಗಾಗಿ ‘ಟ್ರೀಟ್’ (TREAT – Total Robot Enabled and Assisted Transplant) ಕಾರ್ಯಕ್ರಮವನ್ನು ಇದು ಪ್ರಾರಂಭಿಸಿದೆ.

ಸುರಕ್ಷಿತ ಮತ್ತು ನಿಖರ ಚಿಕಿತ್ಸೆಗೆ ಆದ್ಯತೆ

ಈ ಸಾಧನೆಯ ಕುರಿತು ಮಾತನಾಡಿದ ಆರೋಗ್ಯ ಸಚಿವ ಯು.ಟಿ. ಖಾದರ್, “ಕರ್ನಾಟಕವು ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯುನ್ನತ ಸೇವೆ ಮತ್ತು ನಾವೀನ್ಯತೆಗೆ ಹೆಸರುವಾಸಿಯಾಗಿದೆ. ಆಧುನಿಕ ವೈದ್ಯಕೀಯ ತಂತ್ರಜ್ಞಾನವು ರೋಗಿಗಳಿಗೆ ಹೆಚ್ಚು ಸುರಕ್ಷಿತವಾದ ಚಿಕಿತ್ಸೆ, ಸುಲಭ ಲಭ್ಯತೆ ಹಾಗೂ ಉತ್ತಮ ಫಲಿತಾಂಶವನ್ನು ನೀಡುವಂತಾಗಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ