ಬೆಂಗಳೂರು, ಏ.05: ಶಂಕರಾನಂದ ಆಶ್ರಮ ಟ್ರಸ್ಟ್ಗೆ ಸಿಎಸ್ಆರ್ (CSR) ಫಂಡ್ ಕೊಡಿಸುವುದಾಗಿ ನಂಬಿಸಿ 15 ಲಕ್ಷ ರೂ. ಹಣವನ್ನು ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿ ನಾಲ್ವರು ಆರೋಪಿಗಳನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ. ಇವರು ಹಲವು ಕಂಪನಿಗಳಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಎಂದು ಹೇಳಿಕೊಂಡು ನಾವು ನಿಮಗೆ ಫಂಡಿಂಗ್ ಮಾಡಿಸುವುದಾಗಿ ಹೇಳಿ ಮೂಮೆಂಟ್ ಚಾರ್ಜ್, ಪ್ರೋಸೆಸಿಂಗ್ ಚಾರ್ಜ್ ಎಂದು ಹಣ ವಸೂಲಿ ಮಾಡುತ್ತಿದ್ದರು. ಹಣ ಪಡೆದ ನಂತರ ಸರಿಯಾಗಿ ದಾಖಲೆಗಳನ್ನು ಪೂರ್ಣಗೊಳಿಸಿಲ್ಲ, ಯೋಜನೆ ರದ್ದಾಗಿದೆ ಎಂದು ನೆಪ ಹೇಳಿ ವಂಚಿಸುತ್ತಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರು: ಪಿಜಿಯಲ್ಲಿ ಕಳವು ಮಾಡುತ್ತಿದ್ದ ಆರೋಪಿ ಮಹಿಳೆಯನ್ನ ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ರಾಜೇಶ್ವರಿ ಬಂಧಿತ ಆರೋಪಿ. ಪಿಜಿಯಲ್ಲೇ ವಾಸವಿದ್ದ ಓರ್ವ ಮಹಿಳೆಯ 7 ಲಕ್ಷದ 80 ಸಾವಿರದ ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣ ದಾಖಲಿಸಿಕೊಂಡು ರಾಜೇಶ್ವರಿ ಎಂಬಾಕೆಯನ್ನ ಬಂಧಿಸಲಾಗಿದೆ.
ಇದನ್ನೂ ಓದಿ:ಸರ್ಕಾರದ ಹೆಸರಿನಲ್ಲಿ ನಕಲಿ ಆದೇಶ ಹೊರಡಿಸಿ ವಂಚನೆಗೆ ಯತ್ನ; ವಿಧಾನಸೌಧ ಠಾಣೆಯಲ್ಲಿ 2 ಪ್ರಕರಣ ದಾಖಲು
ತುಮಕೂರು: ಪಿಸ್ತೂಲ್ನಿಂದ ಫೈರ್ ಮಾಡಿ ಸುಲಿಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಏಜಾಸ್ ಮಿರ್ದಹ (30) ಹಾಗೂ ಸಹಿಬುಲ್ ಅನ್ಸಾರಿ (30), ಬಂಧಿತ ಆರೋಪಿಗಳು. ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಉರ್ಕೆಹಳ್ಳಿ ಗ್ರಾಮದಲ್ಲಿ ಮಾ.26 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಗೆ ಎಂಟ್ರಿ ಕೊಟ್ಟಿದ್ದ ಆರೋಪಿಗಳು, ಮನೆಯಲ್ಲಿದ್ದ ಹಣ ದೋಚಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳನ್ನ ಹಿಡಿಯಲು ಹೋದ ಮನೆ ಮಾಲೀಕ ಗಂಗಣ್ಣನ ಮೇಲೆ ಪಿಸ್ತೂಲ್ನಿಂದ ಫೈರ್ ಮಾಡಿ ಎಸ್ಕೇಪ್ ಆಗಿದ್ದರು.
ಈ ಪ್ರಕರಣ ಸಂಬಂಧ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದ ಕುಣಿಗಲ್ ಪೊಲೀಸರು, ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಇದೀಗ ಸುಲಿಗೆ ಮಾಡಲು ಯತ್ನಿಸಿದ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಒಂದು ಬೈಕ್, ಎರಡು ಪಿಸ್ತೂಲ್, ನಾಲ್ಕು ಗುಂಡು, ಹಾಗೂ ಒಂದು ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:26 pm, Fri, 5 April 24