AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿ ಬದಿ ವ್ಯಾಪಾರಿಗಳ ಎತ್ತಂಗಡಿಯಾದರೂ ಪಾದಚಾರಿಗಳಿಗೆ ಜಾಗವಿಲ್ಲ! ಗಾಂಧಿ ಬಜಾರ್‌ನಲ್ಲಿ ಅಕ್ರಮ ಪಾರ್ಕಿಂಗ್ ಕಾಟ

ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿ ಫುಟ್‌ಪಾತ್‌ಗಳು ವಾಹನಗಳ ಪಾರ್ಕಿಂಗ್ ಹಾಗೂ ಅತಿಕ್ರಮಣಕ್ಕೆ ಸಿಲುಕಿವೆ. ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ನಡೆದ ನಂತರವಂತೂ ಆ ಜಾಗಗಳೆಲ್ಲ ಪಾರ್ಕಿಂಗ್​ಗೆ ಅತಿಕ್ರಮಿಸಲ್ಪಟ್ಟಿವೆ. ಪಾದಚಾರಿಗಳು ರಸ್ತೆಯಲ್ಲೇ ನಡೆದುಕೊಂಡು ಹೋಗುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಶಾಶ್ವತ ಪರಿಹಾರಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಎತ್ತಂಗಡಿಯಾದರೂ ಪಾದಚಾರಿಗಳಿಗೆ ಜಾಗವಿಲ್ಲ! ಗಾಂಧಿ ಬಜಾರ್‌ನಲ್ಲಿ ಅಕ್ರಮ ಪಾರ್ಕಿಂಗ್ ಕಾಟ
ಗಾಂಧಿ ಬಜಾರ್‌ನಲ್ಲಿ ಅಕ್ರಮ ಪಾರ್ಕಿಂಗ್ ಕಾಟImage Credit source: tv9
ಗಣಪತಿ ಶರ್ಮಾ
|

Updated on: Aug 04, 2026 | 9:24 AM

Share

ಮುಖ್ಯಾಂಶಗಳು

  • ಗಾಂಧಿ ಬಜಾರ್‌ನಲ್ಲಿ ಫುಟ್‌ಪಾತ್‌ಗಳೇ ಪಾರ್ಕಿಂಗ್ ತಾಣ
  • ರಸ್ತೆಯಲ್ಲೇ ನಡೆಯುವ ಪಾದಚಾರಿಗಳಿಗೆ ಅಪಾಯ
  • ಅಕ್ರಮ ಪಾರ್ಕಿಂಗ್ ತೆರವಿಗೆ ಶಾಶ್ವತ ಪರಿಹಾರಕ್ಕೆ ಸಾರ್ವಜನಿಕರ ಆಗ್ರಹ

ಬೆಂಗಳೂರು, ಆಗಸ್ಟ್ 4: ಬೆಂಗಳೂರು (Bengaluru) ನಗರದಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ, ಪಾದಚಾರಿಗಳ ಸುರಕ್ಷತೆಗೆ ಅಗತ್ಯವಾದ ಮೂಲಸೌಕರ್ಯ ಮಾತ್ರ ಇನ್ನೂ ಸಮರ್ಪಕವಾಗಿಲ್ಲ. ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿ ಫುಟ್‌ಪಾತ್‌ಗಳನ್ನೇ ವಾಹನಗಳ ಪಾರ್ಕಿಂಗ್ ಹಾಗೂ ಅತಿಕ್ರಮಣಕ್ಕೆ ಬಳಸುತ್ತಿರುವುದರಿಂದ ಪಾದಚಾರಿಗಳು ರಸ್ತೆಯಲ್ಲೇ ನಡೆದುಕೊಂಡು ಹೋಗುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಂಧಿ ಬಜಾರ್‌ನ ಹಲವು ಕಡೆ ಫುಟ್‌ಪಾತ್‌ಗಳ ಮೇಲೆ ಕಾರು, ಬೈಕ್‌ಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಲಾಗುತ್ತಿದೆ. ಮತ್ತೊಂದೆಡೆ ಬೀದಿ ಬದಿ ವ್ಯಾಪಾರಿಗಳು ಹಾಗೂ ಇತರ ಅತಿಕ್ರಮಣಗಳಿಂದ ಪಾದಚಾರಿಗಳಿಗೆ ಫುಟ್‌ಪಾತ್ ಬಳಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜನರು ವಾಹನಗಳ ನಡುವೆಯೇ ರಸ್ತೆಯಲ್ಲಿ ಸಂಚರಿಸಬೇಕಾಗಿದ್ದು, ಅಪಘಾತದ ಆತಂಕ ಎದುರಾಗಿದೆ.

ವಿಶೇಷವಾಗಿ ಜನನಿಬಿಡ ಪ್ರದೇಶವಾಗಿರುವ ಗಾಂಧಿ ಬಜಾರ್‌ನಲ್ಲಿ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಜನರು ಓಡಾಡುತ್ತಾರೆ. ಆದರೆ ಪಾದಚಾರಿಗಳಿಗಾಗಿ ಮೀಸಲಿರುವ ಜಾಗವೇ ವಾಹನಗಳ ಪಾಲಾಗಿರುವುದರಿಂದ ವೃದ್ಧರು, ಮಕ್ಕಳು ಹಾಗೂ ಮಹಿಳೆಯರು ಸೇರಿದಂತೆ ಎಲ್ಲರೂ ಸಮಸ್ಯೆ ಎದುರಿಸುವಂತಾಗಿದೆ.

ಫುಟ್​ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆದರೂ ಮತ್ತದೇ ಸಮಸ್ಯೆ

ಫುಟ್‌ಪಾತ್ ಅತಿಕ್ರಮಣ ಹಾಗೂ ಅಕ್ರಮ ಪಾರ್ಕಿಂಗ್ ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಆಗಾಗ್ಗೆ ಕಾರ್ಯಾಚರಣೆ ನಡೆಸುತ್ತಾರೆ. ಆದರೆ ಕಾರ್ಯಾಚರಣೆ ಮುಗಿದ ಕೆಲವೇ ದಿನಗಳಲ್ಲಿ ಮತ್ತೆ ಫುಟ್‌ಪಾತ್‌ಗಳಲ್ಲಿ ವಾಹನಗಳ ನಿಲುಗಡೆ ಹಾಗೂ ಅತಿಕ್ರಮಣ ಮುಂದುವರಿಯುತ್ತಿದೆ ಎಂಬುದು ಸಾರ್ವಜನಿಕರ ಆರೋಪ.

ಪಾದಚಾರಿಗಳಿಗಾಗಿ ನಿರ್ಮಿಸಿರುವ ಫುಟ್‌ಪಾತ್‌ಗಳನ್ನು ಅದೇ ಉದ್ದೇಶಕ್ಕೆ ಬಳಸುವಂತೆ ನೋಡಿಕೊಳ್ಳಬೇಕು. ಅಕ್ರಮ ಪಾರ್ಕಿಂಗ್ ಮತ್ತು ಅತಿಕ್ರಮಣದ ವಿರುದ್ಧ ನಿರಂತರ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು ಕಾರ್ಯಾಚರಣೆ: ಜಿಬಿಎ ಗುರಿ ಎಷ್ಟು ಗೊತ್ತಾ?

ವಾಹನಗಳ ಸಂಚಾರಕ್ಕೆ ನೀಡುವಷ್ಟೇ ಆದ್ಯತೆಯನ್ನು ಪಾದಚಾರಿಗಳ ಸುರಕ್ಷತೆಗೂ ನೀಡಬೇಕು. ಫುಟ್‌ಪಾತ್ ಇದ್ದರೂ ಅದನ್ನು ಬಳಸಲು ಸಾಧ್ಯವಾಗದ ಪರಿಸ್ಥಿತಿ ಮುಂದುವರಿದರೆ, ನಗರದಲ್ಲಿ ಪಾದಚಾರಿಗಳ ಸುರಕ್ಷತೆ ಹೇಗೆ ಸಾಧ್ಯ ಎಂಬ ಪ್ರಶ್ನೆ ಎದುರಾಗಿದೆ.

ವರದಿ: ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ