Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ರಾಜ್ಯದೆಲ್ಲೆಡೆ ಇಂದು ಗೌರಿ ಗಣೇಶ ಹಬ್ಬ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಇಂದು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ.

ಗಣೇಶ ಚತುರ್ಥಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ
ಬಿಬಿಎಂಪಿ
Follow us
ಗಂಗಾಧರ​ ಬ. ಸಾಬೋಜಿ
| Updated By: Digi Tech Desk

Updated on:Sep 19, 2023 | 9:57 AM

ಬೆಂಗಳೂರು, ಸೆಪ್ಟೆಂಬರ್​ 18: ರಾಜ್ಯದೆಲ್ಲೆಡೆ ಇಂದು ಗೌರಿ ಗಣೇಶ ಹಬ್ಬ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಇಂದು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪಶುಪಾಲನೆ ವಿಭಾಗದ ಜಂಟಿ ನಿದೇರ್ಶಕರು ತಿಳಿಸಿದ್ದಾರೆ. ಅದೇ ರೀತಿಯಾಗಿ ನಗರದಾದ್ಯಂತ ಗಣೇಶ ಪೆಂಡಾಲ್​​ಗಳನ್ನು ಆಯೋಜಿಸುವವರಿಗೆ ನಾಗರಿಕ ಸಂಸ್ಥೆ ಕೆಲ ನಿಯಮಗಳ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ.

ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಮತ್ತು ತಯಾರಿಕೆಗೆ ಬಿಬಿಎಂಪಿ ಈಗಾಗಲೇ ಕಟ್ಟುನಿಟ್ಟಿನ ನಿಷೇಧ ಹೇರಿದ್ದು, ನಿಯಮಗಳನ್ನು ಉಲ್ಲಂಘಿಸಿದರೆ ತಯಾರಕರು ಭಾರಿ ದಂಡ ವಿಧಿಸಬೇಕಾಗುತ್ತದೆ. ನಗರದ ವಿವಿಧ ಸ್ಥಳಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುತ್ತಿರುವುದರಿಂದ ಬೀದಿಗಳಲ್ಲಿ ಯಾರಿಗೂ ತೊಂದರೆಯಾಗದಂತೆ ಆಚರಣೆಗೆ ಬಿಬಿಎಂಪಿ ನಿರ್ದೇಶನ ನೀಡಿದೆ.

ಇದನ್ನೂ ಓದಿ: Ganesh Chaturthi Guidelines 2023: ಗೌರಿ ಗಣೇಶ ಹಬ್ಬಕ್ಕೆ ಬೆಂಗಳೂರು ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್

ನಗರದಲ್ಲಿ ಪರಿಸರ ಸ್ನೇಹಿ ರೀತಿಯಲ್ಲಿ ಹಬ್ಬ ಆಚರಣೆಗೆ ಸೂಚಿಸಲಾಗಿದ್ದು, ಒಂದು ವೇಳ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ನಾಗರಿಕ ಸಂಸ್ಥೆ ತಿಳಿಸಿದೆ. ದೇಣಿಗೆಗಳ ಹೆಸರಿನಲ್ಲಿ ಜನರಿಂದ ಬಲವಂತವಾಗಿ ಹಣವನ್ನು ಸಂಗ್ರಹಿಸದಂತೆ ಸಂಘಟಕರಿಗೆ ಆದೇಶಿಸಲಾಗಿದೆ.

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಒಂದೇ ಸೂರಿನಡಿ ಸಬ್ ಡಿವಿಜನ್ ಮೂಲಕ ಅನುಮತಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತಿದೆ. ಏರಿಯಾದಲ್ಲಿ 10-20 ಫ್ಲೆಕ್ಸ್​​ಗಳನ್ನು ಹಾಕುವಂತಿಲ್ಲ. ಬೆಸ್ಕಾಂ, ಪೊಲೀಸ್, BBMP ಅಧಿಕಾರಿಗಳು ಒಂದೇ ಕಡೆ ಇದ್ದು, ಅನುಮತಿ ನೀಡಲಾಗುತ್ತೆ. ಬಟ್ಟೆಯಲ್ಲಿ ತಯಾರಿಸುವ ಬ್ಯಾನರ್​ ಬಳಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮ; ಕೆಆರ್​ ಮಾರ್ಕೆಟ್​ನಲ್ಲಿ ಖರೀದಿ ಭರಾಟೆ ಜೋರು

ವಾರ್ಡ್​ನಲ್ಲಿ ಎರಡು ಕಡೆ ಟ್ಯಾಂಕರ್ ಇರಲಿದೆ. ಪಿಒಪಿ ಗಣೇಶ ಬ್ಯಾನ್​ ಮಾಡಲಾಗಿದ್ದು, ಅದರ ಬದಲಾಗಿ ಮಣ್ಣಿನ ಗಣೇಶ ಕೂರಿಸುವಂತೆ ಬಿಬಿಎಂಪಿ ಮನವಿ ಮಾಡಿದೆ.

ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕ್ರಮಗಳು

  • ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ
  • ಗಣೇಶ ಕೂರಿಸಲು ಕಾನೂನು ಬಾಹಿರಬಾಗಿ ಹಣ ಸಂಗ್ರಹ ಮಾಡುವಹಾಗಿಲ್ಲ
  •  ಕಾರ್ಯಕ್ರಮ ನಡೆಸಲು ಚಪ್ಪರ, ಶಾಮಿಯಾನ, ಪೆಂಡಾಲ್ ಗೆ ವಿಶೇಷ ಅನುಮತಿ ಪಡೆಯಬೇಕು
  • ವಿವಾದಿತ ಜಾಗದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವಹಾಗಿಲ್ಲ
  • ಮೆರವಣಿಗೆ ವೇಳೆ ಏನೇ ಅಹಿಕತರ ಘಟನೆ ನಡೆದರೆ ಸಂಘಟಕರೇ ಅದಕ್ಕೆ ಹೊಣೆ
  • ಆಯೋಜಕರು ಕಾರ್ಯಕ್ರಮ ನಡೆಯುವ ಜಾಗದಲ್ಲಿ ಬೆಂಕಿ ನಂದಿಸುವ ಸಾಮಾಗ್ರಿಗಳು, ಸಿಸಿಟಿವಿ ಸೇರಿದಂತೆ ಅಗತ್ಯ ಕ್ರಮವಹಸಿಬೇಕು
  • ಮೂರ್ತಿ ಸ್ಥಾಪನೆಮಾಡಿರುವ ಜಾಗದಲ್ಲಿ ಕಟ್ಟಿಗೆ, ಉರುವಲು, ಸೀಮೆ ಎಣ್ಣೆ ಒಟ್ಟಾರೆ ಬೆಂಕಿ ಸಂಬಂಧಿಸಿದ ಸಾಮಾಗ್ರಿಗಳನ್ನು ಇಡಬಾರದು
  • ವಿದ್ಯುತ್ ಸಂಪರ್ಕ ಬೇಕಾಗಿರುವ ಬಗ್ಗೆ ಬೆಸ್ಕಾಂ ಮತ್ತು ಅಗ್ನಿ ಶಾಮಕ ಇಲಾಖೆಯ NOC ಕಡ್ಡಾಯ
  • ಧ್ವನಿ ವರ್ಧಕ ಬಳಕೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್
  • ಯಾವುದೇ ಕಾರಣಕ್ಕೂ DJ ಸೌಂಡ್ ಸಿಸ್ಟಮ್ ಅಳವಡಿಕೆಗೆ ಅವಕಾಶ ಇಲ್ಲ
  • ಮೆರವಣಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಪ್ರಾರ್ಥನೆ ಸ್ಥಳಗಳ ಮುಂಭಾಗದಲ್ಲಿ ಪಟಾಕಿ, ಸಿಡಿ ಮದ್ದು ನಿಷೇಧ
  • ಗಣಪನ ವಿಸರ್ಜನೆ ಕಾರ್ಯಕ್ರಮ ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು. ಬೆಂಗಳೂರು ಪೊಲೀಸರು ಗಣೇಶ ಕೂರಿಸುವ ಕಾರ್ಯಕ್ರಮದ ವರ್ತಕರಿಗೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:20 am, Mon, 18 September 23

ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?