ಬೆಂಗಳೂರು, ಸೆಪ್ಟೆಂಬರ್ 18: ರಾಜ್ಯದೆಲ್ಲೆಡೆ ಇಂದು ಗೌರಿ ಗಣೇಶ ಹಬ್ಬ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪಶುಪಾಲನೆ ವಿಭಾಗದ ಜಂಟಿ ನಿದೇರ್ಶಕರು ತಿಳಿಸಿದ್ದಾರೆ. ಅದೇ ರೀತಿಯಾಗಿ ನಗರದಾದ್ಯಂತ ಗಣೇಶ ಪೆಂಡಾಲ್ಗಳನ್ನು ಆಯೋಜಿಸುವವರಿಗೆ ನಾಗರಿಕ ಸಂಸ್ಥೆ ಕೆಲ ನಿಯಮಗಳ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ.
ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಮತ್ತು ತಯಾರಿಕೆಗೆ ಬಿಬಿಎಂಪಿ ಈಗಾಗಲೇ ಕಟ್ಟುನಿಟ್ಟಿನ ನಿಷೇಧ ಹೇರಿದ್ದು, ನಿಯಮಗಳನ್ನು ಉಲ್ಲಂಘಿಸಿದರೆ ತಯಾರಕರು ಭಾರಿ ದಂಡ ವಿಧಿಸಬೇಕಾಗುತ್ತದೆ. ನಗರದ ವಿವಿಧ ಸ್ಥಳಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುತ್ತಿರುವುದರಿಂದ ಬೀದಿಗಳಲ್ಲಿ ಯಾರಿಗೂ ತೊಂದರೆಯಾಗದಂತೆ ಆಚರಣೆಗೆ ಬಿಬಿಎಂಪಿ ನಿರ್ದೇಶನ ನೀಡಿದೆ.
ಇದನ್ನೂ ಓದಿ: Ganesh Chaturthi Guidelines 2023: ಗೌರಿ ಗಣೇಶ ಹಬ್ಬಕ್ಕೆ ಬೆಂಗಳೂರು ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್
ನಗರದಲ್ಲಿ ಪರಿಸರ ಸ್ನೇಹಿ ರೀತಿಯಲ್ಲಿ ಹಬ್ಬ ಆಚರಣೆಗೆ ಸೂಚಿಸಲಾಗಿದ್ದು, ಒಂದು ವೇಳ ಮಾರ್ಗಸೂಚಿಗಳನ್ನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ನಾಗರಿಕ ಸಂಸ್ಥೆ ತಿಳಿಸಿದೆ. ದೇಣಿಗೆಗಳ ಹೆಸರಿನಲ್ಲಿ ಜನರಿಂದ ಬಲವಂತವಾಗಿ ಹಣವನ್ನು ಸಂಗ್ರಹಿಸದಂತೆ ಸಂಘಟಕರಿಗೆ ಆದೇಶಿಸಲಾಗಿದೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಒಂದೇ ಸೂರಿನಡಿ ಸಬ್ ಡಿವಿಜನ್ ಮೂಲಕ ಅನುಮತಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತಿದೆ. ಏರಿಯಾದಲ್ಲಿ 10-20 ಫ್ಲೆಕ್ಸ್ಗಳನ್ನು ಹಾಕುವಂತಿಲ್ಲ. ಬೆಸ್ಕಾಂ, ಪೊಲೀಸ್, BBMP ಅಧಿಕಾರಿಗಳು ಒಂದೇ ಕಡೆ ಇದ್ದು, ಅನುಮತಿ ನೀಡಲಾಗುತ್ತೆ. ಬಟ್ಟೆಯಲ್ಲಿ ತಯಾರಿಸುವ ಬ್ಯಾನರ್ ಬಳಸಲು ಸೂಚಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬದ ಸಂಭ್ರಮ; ಕೆಆರ್ ಮಾರ್ಕೆಟ್ನಲ್ಲಿ ಖರೀದಿ ಭರಾಟೆ ಜೋರು
ವಾರ್ಡ್ನಲ್ಲಿ ಎರಡು ಕಡೆ ಟ್ಯಾಂಕರ್ ಇರಲಿದೆ. ಪಿಒಪಿ ಗಣೇಶ ಬ್ಯಾನ್ ಮಾಡಲಾಗಿದ್ದು, ಅದರ ಬದಲಾಗಿ ಮಣ್ಣಿನ ಗಣೇಶ ಕೂರಿಸುವಂತೆ ಬಿಬಿಎಂಪಿ ಮನವಿ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:20 am, Mon, 18 September 23