ಬೆಂಗಳೂರು: ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಕೌಂಟ್ಡೌನ್ ಪ್ರಾರಂಭವಾಗಿದ್ದು, ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಗೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ. ಗಣೇಶ ಮೂರ್ತಿ ವಿಸರ್ಜನೆಗೆ ಒಟ್ಟು 50 ಈಜುಗಾರರ ನೇಮಕ ಮಾಡಿದೆ. ಅಹಿತಕರ ಘಟನೆ ನಡೆಯದಂತೆ 150 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬಿಬಿಎಂಪಿಯಿಂದ 20 ಮಾರ್ಷಲ್ಸ್ಗಳನ್ನ ಸಹ ನಿಯೋಜನೆ ಮಾಡಲಾಗಿದೆ.
ಬೆಂಗಳೂರು ಮಹಾನಗರದಲ್ಲಿ 70-80 ಸಾವಿರ ಗಣೇಶ ಮೂರ್ತಿಗಳು ವಿಸರ್ಜನೆಯಾಗುವ ಸಾಧ್ಯತೆ ಇದೆ. ಟ್ರಾಫಿಕ್ ಪೋಲಿಸರು 50, ಕಾನ್ಸ್ ಸ್ಟೇಬಲ್ 40 , ಸಬ್ ಇನ್ಸ್ಸ್ಪೇಕ್ಟರ್ 8 , ಇಬ್ಬರು ಇನ್ಸ್ಸ್ಪೇಕ್ಟರ್ನ್ನು ನಿಯೋಜನೆ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ