Bangalore Covid Cases: ಕೊವಿಡ್ ನಿಯಮಗಳನ್ನು ಅನುಸರಿಸದ ಬೆಂಗಳೂರಿನ ಗರುಡಾ ಮಾಲ್​ಗೆ 20,000 ರೂ. ದಂಡ

Karnataka Covid Guidelines: ಈ ತಿಂಗಳ ಆರಂಭದಲ್ಲಿ ಕರ್ನಾಟಕವು ಮಾಲ್‌ಗಳು ಮತ್ತು ಥಿಯೇಟರ್‌ಗಳಂತಹ ಪ್ರದೇಶಗಳಿಗೆ ಪ್ರವೇಶಿಸುವ ಎಲ್ಲರಿಗೂ ಸಂಪೂರ್ಣವಾಗಿ ಲಸಿಕೆ ಹಾಕುವುದನ್ನು ಕಡ್ಡಾಯಗೊಳಿಸಿದೆ. ಒಮಿಕ್ರಾನ್ ರೂಪಾಂತರದ ಪ್ರಕರಣಗಳು ಪತ್ತೆಯಾದ ನಂತರ ಈ ಕ್ರಮಗಳನ್ನು ಜಾರಿಗೆ ತರಲಾಗಿದೆ.

Bangalore Covid Cases: ಕೊವಿಡ್ ನಿಯಮಗಳನ್ನು ಅನುಸರಿಸದ ಬೆಂಗಳೂರಿನ ಗರುಡಾ ಮಾಲ್​ಗೆ 20,000 ರೂ. ದಂಡ
ಗರುಡಾ ಮಾಲ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 27, 2021 | 1:25 PM

ಬೆಂಗಳೂರು: ಬೆಂಗಳೂರಿನ ಪ್ರಮುಖ ಶಾಪಿಂಗ್ ಕಾಂಪ್ಲೆಕ್ಸ್​ಗಳಲ್ಲಿ ಒಂದಾದ ಗರುಡಾ ಮಾಲ್ ತನ್ನ ಆವರಣದಲ್ಲಿ ಸೂಕ್ತ ರೀತಿಯಲ್ಲಿ ಕೊವಿಡ್ ನಿಯಮಗಳನ್ನು ಜಾರಿಗೊಳಿಸದ ಕಾರಣದಿಂದ ಬಿಬಿಎಂಪಿಯಿಂದ 20,000 ರೂ. ದಂಡವನ್ನು ವಿಧಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿದ ತಪಾಸಣೆಯಲ್ಲಿ ಗರುಡಾ ಮಾಲ್​ನೊಳಗೆ ಬರುವ ಗ್ರಾಹಕರು ಎರಡೂ ಲಸಿಕೆಗಳನ್ನು ಹೊಂದಿದ್ದಾರೆಯೇ ಎಂದು ಪರಿಶೀಲಿಸುತ್ತಿಲ್ಲ, ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿಲ್ಲ ಎಂಬುದು ಪತ್ತೆಯಾಗಿದೆ. ಹಾಗೇ, ಸಾಮಾಜಿಕ ಅಂತರದ ಮಾರ್ಗಸೂಚಿಗಳನ್ನು ಅನುಸರಿಸಲಾಗಿಲ್ಲ. ಮಾಲ್​ನೊಳಗೆ ಇರುವ ಬಹುತೇಕರು ಮಾಸ್ಕ್ ಧರಿಸಿರಲಿಲ್ಲ ಎಂದು ಅಧಿಕಾರಿಗಳು ನೀಡಿದ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಬಿಬಿಎಂಪಿ ಮುಖ್ಯ ಆರೋಗ್ಯ ಅಧಿಕಾರಿ ಡಾ. ಎ.ಎಸ್. ಬಾಲಸುಂದರ್ ಈ ಬಗ್ಗೆ ಮಾಹಿತಿ ನೀಡಿದ್ದು, ಮಾಲ್​ಗಳಿಗೆ ಭೇಟಿ ನೀಡುವವರು ಕೊವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆಯೇ ಎಂಬುದನ್ನು ಹೇಗೆ ಪರಿಶೀಲಿಸಬೇಕು ಎಂಬುದನ್ನು ಕೆಲವು ವಾರಗಳ ಹಿಂದೆ ಎಲ್ಲ ಮಾಲ್‌ಗಳಿಗೆ ತೋರಿಸಲಾಗಿದೆ. ಈ ತಪಾಸಣೆ ಮಾಡಲು ಒಬ್ಬ ವ್ಯಕ್ತಿಗೆ ಕೇವಲ ಒಂದು ನಿಮಿಷ ಸಾಕಾಗುತ್ತದೆ. ಆದರೆ, ಗರುಡಾ ಮಾಲ್ ಸಿಬ್ಬಂದಿ ಈ ಮಾರ್ಗಸೂಚಿಗಳನ್ನು ಅನುಸರಿಸುತ್ತಿಲ್ಲ ಎಂದು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದೆ.

ಇದು ಮೊದಲ ಘಟನೆಯಾಗಿರುವುದರಿಂದ ನಾವು ಕೊವಿಡ್ ಮಾರ್ಗಸೂಚಿಯ ಆದೇಶಗಳನ್ನು ಅನುಸರಿಸದ ಕಾರಣಕ್ಕೆ ಎಚ್ಚರಿಕೆಯ ಸಂದೇಶವಾಗಿ ಸಣ್ಣ ಮೊತ್ತವನ್ನು ದಂಡವಾಗಿ ವಿಧಿಸಿದ್ದೇವೆ. ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಪರಿಶೀಲಿಸದ ಮಾಲ್‌ಗಳು ಕಂಡುಬಂದರೆ ಮತ್ತು ಸರಿಯಾದ ಮಾರ್ಗಸೂಚಿಗಳನ್ನು ಅನುಸರಿಸದಿರುವುದು ದೃಢಪಟ್ಟರೆ ಆ ಮಾಲ್​ಗಳಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ದಂಡವನ್ನು ವಿಧಿಸಲಾಗುವುದು ಎಂದಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕರ್ನಾಟಕವು ಮಾಲ್‌ಗಳು ಮತ್ತು ಥಿಯೇಟರ್‌ಗಳಂತಹ ಪ್ರದೇಶಗಳಿಗೆ ಪ್ರವೇಶಿಸುವ ಎಲ್ಲರಿಗೂ ಸಂಪೂರ್ಣವಾಗಿ ಲಸಿಕೆ ಹಾಕುವುದನ್ನು ಕಡ್ಡಾಯಗೊಳಿಸಿದೆ. ಒಮಿಕ್ರಾನ್ ರೂಪಾಂತರದ ಪ್ರಕರಣಗಳು ಪತ್ತೆಯಾದ ನಂತರ ಈ ಕ್ರಮಗಳನ್ನು ಜಾರಿಗೆ ತರಲಾಗಿದೆ.

ನಿನ್ನೆ (ಭಾನುವಾರ) ಕರ್ನಾಟಕದಲ್ಲಿ 348 ಹೊಸ COVID-19 ಪ್ರಕರಣಗಳು ಮತ್ತು ಮೂರು ಸಾವುಗಳು ವರದಿಯಾಗಿವೆ. ಒಟ್ಟು ಸೋಂಕುಗಳ ಸಂಖ್ಯೆಯನ್ನು 30,04,587ಕ್ಕೆ ಮತ್ತು ಸಾವಿನ ಸಂಖ್ಯೆ 38,312ಕ್ಕೆ ತಲುಪಿದೆ. ದಿನದಲ್ಲಿ 198 ರೋಗಿಗಳು ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 29,58,828ಕ್ಕೆ ತಲುಪಿದೆ. ನಿನ್ನೆ ಪತ್ತೆಯಾದ 348 ಹೊಸ ಪ್ರಕರಣಗಳಲ್ಲಿ ಬೆಂಗಳೂರೊಂದರಲ್ಲೇ 248 ಕೇಸುಗಳು ಕಂಡುಬಂದಿದ್ದು, ಎರಡು ಸಾವುಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಕೊವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 7,418 ಆಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 12,61,556, ಮೈಸೂರು 1,80,224 ಮತ್ತು ತುಮಕೂರು 1,21,302 ಪಾಸಿಟಿವ್ ಪ್ರಕರಣಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಡಿಸ್ಚಾರ್ಜ್ ಆದವರಲ್ಲಿ ಬೆಂಗಳೂರು ನಗರವು 12,39,122 ರೊಂದಿಗೆ ಮತ್ತೆ ಅಗ್ರಸ್ಥಾನದಲ್ಲಿದೆ, ಮೈಸೂರು 1,77,681 ಮತ್ತು ತುಮಕೂರು 1,20,074. ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 5,59,98,380 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಇದನ್ನೂ ಓದಿ: ಒಮಿಕ್ರಾನ್, ಕೊರೊನಾ ಭೀತಿ ನಡುವೆ ಮತ್ತೊಂದು ಆತಂಕ; ಕಣ್ಣು ಬಿಡುವ ಮುನ್ನವೇ ಉಸಿರು ಚೆಲ್ಲುತಿವೆ ನವಜಾತ ಶಿಶುಗಳು

ಮತ್ತೆ ಹೆಚ್ಚಾದ ಕೊವಿಡ್​ 19, ಒಮಿಕ್ರಾನ್​ ಸೋಂಕು; ದೆಹಲಿಯಲ್ಲಿ ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ