AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ ಬಿದ್ದು ಸಾವು-ನೋವಿಗೆ ಬ್ರೇಕ್: ದುರ್ಬಲ ಮರಗಳ ಪತ್ತೆಗೆ ಮಾನವ ದೇಹದ ಸ್ಕ್ಯಾನಿಂಗ್ ಮಾದರಿ ತಂತ್ರಜ್ಞಾನಕ್ಕೆ ಜಿಬಿಎ ಮುಂದು!

ಬೆಂಗಳೂರಿನಲ್ಲಿ ಮಳೆ-ಗಾಳಿಗೆ ಮರಗಳು ಬಿದ್ದು ಸಂಭವಿಸುವ ಪ್ರಾಣಹಾನಿ ತಡೆಯಲು ಗ್ರೇಟರ್ ಬೆಂಗಳೂರು ಪ್ರಾಧಿಕಾರವು (GBA) ಮರ ವಿಜ್ಞಾನ ಸಂಸ್ಥೆಯೊಂದಿಗೆ ಸೇರಿ 4 ಕೋಟಿ ರೂ. ವೆಚ್ಚದಲ್ಲಿ 1,500 ಮರಗಳ ಒಳರಚನೆಯನ್ನು ಸ್ಕ್ಯಾನ್ ಮಾಡುವ ವಿಶೇಷ ಜಂಟಿ ಯೋಜನೆಗೆ ಸಿದ್ಧತೆ ಮಾಡಿದೆ. ಏನಿದು ಹೊಸ ಯೋಜನೆ? ಇದರಿಂದ ಜನರಿಗೆ ಏನು ಪ್ರಯೋಜನ ಎಂಬ ಮಾಹಿತಿ ಇಲ್ಲಿದೆ.

ಮರ ಬಿದ್ದು ಸಾವು-ನೋವಿಗೆ ಬ್ರೇಕ್: ದುರ್ಬಲ ಮರಗಳ ಪತ್ತೆಗೆ ಮಾನವ ದೇಹದ ಸ್ಕ್ಯಾನಿಂಗ್ ಮಾದರಿ ತಂತ್ರಜ್ಞಾನಕ್ಕೆ ಜಿಬಿಎ ಮುಂದು!
ರಸ್ತೆಯಲ್ಲಿ ಮರ ಬಿದ್ದಿರುವುದು (ಸಾಂದರ್ಭಿಕ ಚಿತ್ರ)Image Credit source: tv9
ಗಣಪತಿ ಶರ್ಮಾ
|

Updated on: Jun 05, 2026 | 7:27 AM

Share

ಬೆಂಗಳೂರು, ಜೂನ್ 5: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮಳೆ ಹಾಗೂ ಬಿರುಗಾಳಿಯ ಸಂದರ್ಭದಲ್ಲಿ ರಸ್ತೆಬದಿಯ ಮರಗಳು ಮತ್ತು ರೆಂಬೆಗಳು ಹಠಾತ್ತನೆ ಉರುಳಿ ಬಿದ್ದು ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿರುವುದು ಹಾಗೂ ಆಸ್ತಿ ಪಾಸ್ತಿ ನಷ್ಟವಾಗುತ್ತಿರುವುದು ನಿರಂತರವಾಗಿ ವರದಿಯಾಗುತ್ತಿದೆ. ಈ ಗಂಭೀರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈಗ ವಿನೂತನ ಹಾಗೂ ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದೆ. ನಗರದ ದುರ್ಬಲ ಹಾಗೂ ಅಪಾಯಕಾರಿ ಮರಗಳನ್ನು ವೈಜ್ಞಾನಿಕವಾಗಿ ಪತ್ತೆಹಚ್ಚಲು ‘ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ’ಯೊಂದಿಗೆ ಜಿಬಿಎ ಅರಣ್ಯ ವಿಭಾಗವು ಕೈಜೋಡಿಸಲು ಮುಂದಾಗಿದೆ.

ಮುಖ್ಯಾಂಶಗಳು

  • ಮರಗಳ ಒಳಭಾಗ ಕೊಳೆಯುತ್ತಿದೆಯೇ ಮತ್ತು ಬೇರುಗಳು ದುರ್ಬಲವಾಗಿವೆಯೇ ಎಂದು ಪತ್ತೆಹಚ್ಚಲು ಕ್ರಮ.
  • ಮಾನವ ದೇಹದ ಮಾದರಿಯಲ್ಲಿ ಸ್ಕ್ಯಾನಿಂಗ್ ತಂತ್ರಜ್ಞಾನ ಬಳಕೆ.
  • ಮರಗಳ ಸಮಗ್ರ ವೈಜ್ಞಾನಿಕ ಸರ್ವೇಗಾಗಿ ₹4 ಕೋಟಿ ವೆಚ್ಚದ ಯೋಜನೆ ಸಿದ್ಧ.

ಮರಗಳ ಆರೋಗ್ಯ ಪರೀಕ್ಷೆಗೆ ಅತ್ಯಾಧುನಿಕ ತಂತ್ರಜ್ಞಾನ

ನಗರದಲ್ಲಿರುವ ನೂರಾರು ಮರಗಳು ದಶಕಗಳಷ್ಟು ಹಳೆಯದಾಗಿದ್ದು, ಮೇಲ್ನೋಟಕ್ಕೆ ಹಸಿರಾಗಿ ಕಂಡರೂ ಒಳಭಾಗದಲ್ಲಿ ಸಂಪೂರ್ಣ ಕೊಳೆತು ಆಯುಷ್ಯ ಮುಗಿದಿರುತ್ತವೆ. ಇಂತಹ ಮರಗಳನ್ನು ಗುರುತಿಸುವುದು ಅರಣ್ಯ ಇಲಾಖೆಗೆ ದೊಡ್ಡ ಸವಾಲಾಗಿತ್ತು. ಇದಕ್ಕೆ ಪರಿಹಾರವಾಗಿ ಮರ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಜಿಬಿಎಗೆ ವಿಶೇಷ ಪ್ರಸ್ತಾವನೆಯೊಂದನ್ನು ಸಲ್ಲಿಸಿದೆ. ಈ ಯೋಜನೆಯಡಿ ಮರಗಳಿಗೆ ಯಾವುದೇ ಹಾನಿ ಮಾಡದ ನಾನ್-ಇನ್ವೇಸಿವ್ ಡಯಾಗ್ನೋಸ್ಟಿಕ್ (Non-invasive Diagnostic) ತಂತ್ರಜ್ಞಾನ, ರೆಸಿಸ್ಟೋಗ್ರಾಫ್, ಸೋನಿಕ್ ಟೊಮೊಗ್ರಫಿ, ಎಲೆಕ್ಟ್ರಿಕಲ್ ರೆಸಿಸ್ಟೆನ್ಸ್ ಟೊಮೊಗ್ರಫಿ ಹಾಗೂ ಟ್ರೀ-ಮೋಷನ್ ವಿಶ್ಲೇಷಣೆಯಂತಹ ಸುಧಾರಿತ ಸಾಧನಗಳನ್ನು ಬಳಸಲಾಗುತ್ತದೆ. ಇವುಗಳ ಮೂಲಕ ಮರದ ಒಳರಚನೆ, ಬೇರುಗಳ ಸಾಮರ್ಥ್ಯ ಮತ್ತು ಮರ ಇನ್ನು ಎಷ್ಟು ವರ್ಷ ಸುರಕ್ಷಿತವಾಗಿ ನಿಲ್ಲಬಲ್ಲದು ಎಂಬುದನ್ನು ನಿಖರವಾಗಿ ಅಂದಾಜಿಸಬಹುದು ಎಂದು ಜಿಬಿಎ ಅರಣ್ಯ ಸಂರಕ್ಷಣಾ ಅಧಿಕಾರಿ ಸುದರ್ಶನ್ ಮಾಹಿತಿ ನೀಡಿದ್ದಾರೆ.

ವಲಯವಾರು ವೆಚ್ಚ ಹಾಗೂ ಮುನ್ನೆಚ್ಚರಿಕೆ

ಪ್ರಾಯೋಗಿಕವಾಗಿ ಹಮ್ಮಿಕೊಳ್ಳಲಾಗಿರುವ ಈ ಯೋಜನೆಯ ಒಟ್ಟು ವೆಚ್ಚ 4 ಕೋಟಿ ರೂ. ಆಗಿದ್ದು, ಬೆಂಗಳೂರಿನ ವಿವಿಧ ವಲಯಗಳ ನಗರಪಾಲಿಕೆಗಳಿಗೆ ವೆಚ್ಚವನ್ನು ಹಂಚಿಕೆ ಮಾಡಲಾಗಿದೆ.

  • ಬೆಂಗಳೂರು ಕೇಂದ್ರ ನಗರಪಾಲಿಕೆ: 69.41 ಲಕ್ಷ ರೂ.
  • ಬೆಂಗಳೂರು ಪೂರ್ವ ನಗರಪಾಲಿಕೆ: 96 ಲಕ್ಷ ರೂ.
  • ಬೆಂಗಳೂರು ಉತ್ತರ ನಗರಪಾಲಿಕೆ: 104.49 ಲಕ್ಷ ರೂ.
  • ಬೆಂಗಳೂರು ದಕ್ಷಿಣ ನಗರಪಾಲಿಕೆ: 90.65 ಲಕ್ಷ ರೂ.
  • ಬೆಂಗಳೂರು ಪಶ್ಚಿಮ ನಗರಪಾಲಿಕೆ: 79.15 ಲಕ್ಷ ರೂ.

ಈ ತಾಂತ್ರಿಕ ಸಮೀಕ್ಷೆಯು ಯಶಸ್ವಿಯಾಗಿ ಜಾರಿಯಾದರೆ, ಮಳೆಗಾಲದಲ್ಲಿ ಹಠಾತ್ತನೆ ಮರಗಳು ಉರುಳುವ ಮುನ್ನವೇ ಅವುಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು ಸಾಧ್ಯವಾಗುತ್ತದೆ. ಈ ಮೂಲಕ ಸಾರ್ವಜನಿಕರ ಪ್ರಾಣಹಾನಿ ಮತ್ತು ವಾಹನಗಳ ಮೇಲಾಗುವ ಆಸ್ತಿ ನಷ್ಟದ ಗಂಡಾಂತರವನ್ನು ಸಂಪೂರ್ಣವಾಗಿ ತಪ್ಪಿಸಬಹುದಾಗಿದೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಕಿರಿಕಿರಿಯ ಸಾಧ್ಯತೆ
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಕಿರಿಕಿರಿಯ ಸಾಧ್ಯತೆ
ಎಟಿಎಂ ಯಂತ್ರವನ್ನೇ ಕಿತ್ತು, ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ಕಳ್ಳರು!
ಎಟಿಎಂ ಯಂತ್ರವನ್ನೇ ಕಿತ್ತು, ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ಕಳ್ಳರು!
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ
ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ