Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆಳ್ಳಂದೂರಿನ ಶಾಲೆ ಆವರಣದಲ್ಲಿ ಸ್ಫೋಟಕಗಳು ಪತ್ತೆ, ಆತಂಕ

ಬೆಂಗಳೂರು ನಗರದ ಬೆಳ್ಳಂದೂರಿನ ಶಾಲೆಯೆಂದರೆ ಆವರಣದಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ನೆನಪು ಮಾಸುವ ಮುನ್ನವೇ ಈ ವಿದ್ಯಮಾನ ನಡೆದಿದೆ. ಸದ್ಯ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ಬೆಳ್ಳಂದೂರಿನ ಶಾಲೆ ಆವರಣದಲ್ಲಿ ಸ್ಫೋಟಕಗಳು ಪತ್ತೆ, ಆತಂಕ
ಸಾಂದರ್ಭಿಕ ಚಿತ್ರ
Follow us
Prajwal Kumar NY
| Updated By: Ganapathi Sharma

Updated on:Mar 19, 2024 | 9:40 AM

ಬೆಂಗಳೂರು, ಮಾರ್ಚ್​ 19: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Bomb Blast) ಪ್ರಕರಣದ ಕಹಿ ನೆನಪು ಮಾಡಿಸುವ ಮುನ್ನವೇ ಬೆಂಗಳೂರಿನ (Bengaluru) ಶಾಲೆಯೊಂದರ ಮುಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು ಸ್ಫೋಟಕಗಳು ಬೆಂಗಳೂರಿನ ಬೆಳ್ಳಂದೂರಿನ (Bellandur) ಪ್ರಕ್ರಿಯಾ ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. ಸ್ಫೋಟಕಗಳನ್ನು ಟ್ರಾಕ್ಟರ್ ಒಂದರಲ್ಲಿ ಇಡಲಾಗಿತ್ತು. ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳ ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ, ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಸಲಾಗಿದೆ.

ಸದ್ಯ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹ ಮಾಡಿದ್ದಾರೆ ಎಂದು ಪೊಲೀಸರು ಸ್ವಯಂಪ್ರೇರಿತರಾಗಿ ಕೇಸ್ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಮಾರ್ಚ್ ಒಂದರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಪೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು. ಘಟನೆ ಬಗ್ಗೆ ಸಿಸಿಬಿ ಪೊಲೀಸರು ಹಾಗೂ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ಬಿಡುಗಡೆ ಮಾಡಲಾಗಿದೆ. ಆದಾಗ್ಯೂ, ಕೆಫೆಯಲ್ಲಿ ಬಾಂಬ್ ಇಟ್ಟು ಹೋಗಿದ್ದ ಉಗ್ರನನ್ನು ಬಂಧಿಸಲು ಇನ್ನೂ ಸಾಧ್ಯವಾಗಿಲ್ಲ.

ಹಲವು ಶಾಲೆಗಳಿಗೆ ಬಂದಿತ್ತು ಬಾಂಬ್ ಬೆದರಿಕೆ ಸಂದೇಶ

ಬೆಂಗಳೂರಿನ ಹಲವು ಶಾಲೆಗಳಿಗೆ ಇತ್ತೀಚೆಗೆ ಬಾಂಬ್ ದಾಳಿ ಬೆದರಿಕೆ ಸಂದೇಶ ಬಂದಿತ್ತು. ನಂತರ ಅದು ನಕಲಿ ಬೆದರಿಕೆ ಎಂಬುದು ತಿಳಿದು ಬಂದಿದ್ದರೂ, ಬೆದರಿಕೆ ಸಂದೇಶದ ಹಿಂದೆ ವಿದೇಶಿ ಉಗ್ರ ಸಂಘಟನೆಗಳ ಕೈವಾಡ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಅದಾದ ನಂತರ ಕೆಲವು ದಿನಗಳಲ್ಲಿ ತಮಿಳುನಾಡು ಮತ್ತು ಇತರ ಕೆಲವು ರಾಜ್ಯಗಳ ಶಾಲೆಗಳಿಗೂ ಬೆದರಿಕೆ ಸಂದೇಶ ಬಂದಿತ್ತು. ಇಂಥ ಸಂದರ್ಭದಲ್ಲಿ ಬೆಂಗಳೂರಿನ ಶಾಲೆಯ ಆವರಣದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:30 am, Tue, 19 March 24

ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಹೈಲೈಟ್ಸ್
ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಹೈಲೈಟ್ಸ್
ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಪಿಲ್ಲರ್ ಕುಸಿತ: ತಪ್ಪಿದ ಅನಾಹುತ
ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಪಿಲ್ಲರ್ ಕುಸಿತ: ತಪ್ಪಿದ ಅನಾಹುತ
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೊಲೀಸರ ಅತ್ಮಸ್ಥೈರ್ಯ ಕುಂದಿದೆ: ಅಶೋಕ
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೊಲೀಸರ ಅತ್ಮಸ್ಥೈರ್ಯ ಕುಂದಿದೆ: ಅಶೋಕ
ಇನ್ನೂ ಕಾರ್ಯಪ್ರವೃತ್ತರಾಗದ ಅರಣ್ಯ ಇಲಾಖೆ ಅಧಿಕಾರಿಗಳು
ಇನ್ನೂ ಕಾರ್ಯಪ್ರವೃತ್ತರಾಗದ ಅರಣ್ಯ ಇಲಾಖೆ ಅಧಿಕಾರಿಗಳು
Video: ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ ನೀಡಿದ ಡೊನಾಲ್ಡ್​ ಟ್ರಂಪ್
Video: ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆ ನೀಡಿದ ಡೊನಾಲ್ಡ್​ ಟ್ರಂಪ್
ನಾನು ರೆಸ್ಟ್​ನಲ್ಲಿದ್ದೇನೆ, ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ನಾನು ರೆಸ್ಟ್​ನಲ್ಲಿದ್ದೇನೆ, ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ವೈಷಮ್ಯ, ಹೆಣ್ಣು ಮತ್ತು ಮಣ್ಣು-ಬಾಗಪ್ಪ ಕೊಲೆ ಹಿಂದಿನ ಕಾರಣಗಳು: ಎಸ್​ಪಿ
ವೈಷಮ್ಯ, ಹೆಣ್ಣು ಮತ್ತು ಮಣ್ಣು-ಬಾಗಪ್ಪ ಕೊಲೆ ಹಿಂದಿನ ಕಾರಣಗಳು: ಎಸ್​ಪಿ
ಕಳ್ಳರ ಹಾವಳಿ‌ ತಡೆಯಲು ಮಹಿಳೆಯರ ರಾತ್ರಿ ಗಸ್ತು
ಕಳ್ಳರ ಹಾವಳಿ‌ ತಡೆಯಲು ಮಹಿಳೆಯರ ರಾತ್ರಿ ಗಸ್ತು
ರೆಡ್ ಕಾರ್ಪೆಟ್ ರೀ ಲಾಂಚ್​ಗೆ ಸ್ಟೈಲ್​ ಆಗಿ ಎಂಟ್ರಿ ಕೊಟ್ಟ ಪವಿತ್ರಾ ಗೌಡ
ರೆಡ್ ಕಾರ್ಪೆಟ್ ರೀ ಲಾಂಚ್​ಗೆ ಸ್ಟೈಲ್​ ಆಗಿ ಎಂಟ್ರಿ ಕೊಟ್ಟ ಪವಿತ್ರಾ ಗೌಡ
ವಿದ್ಯಾರ್ಥಿಗಳಿಗೆ ಅನುಕೂಲವಾಗದ ನಮ್ಮ ಮೆಟ್ರೊ ಟಿಕೆಟ್ ದರ ಪರಿಷ್ಕರಣೆ
ವಿದ್ಯಾರ್ಥಿಗಳಿಗೆ ಅನುಕೂಲವಾಗದ ನಮ್ಮ ಮೆಟ್ರೊ ಟಿಕೆಟ್ ದರ ಪರಿಷ್ಕರಣೆ