AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಭೀಕರ ಕೃತ್ಯ: ಗಿರಿನಗರದಲ್ಲಿ ನಡುರಸ್ತೆಯಲ್ಲೇ ವ್ಯಕ್ತಿಯ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬೆಂಗಳೂರಿನ ಗಿರಿನಗರದಲ್ಲಿ ವ್ಯಕ್ತಿಯೊಬ್ಬನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ನಡೆದಿದೆ. ಸಯ್ಯದ್ ಹಾಜಿ (ಮೊಹಮ್ಮದ್) ಶೇ. 50-70ರಷ್ಟು ಸುಟ್ಟ ಗಾಯಗಳೊಂದಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ರಾಜಧಾನಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳ ನಡುವೆ ಈ ಘಟನೆ ನಡೆದಿರುವುದು ಆತಂಕ ಸೃಷ್ಟಿಸಿದೆ. ಆರೋಪಿಗಳ ಪತ್ತೆಗೆ ದಕ್ಷಿಣ ವಿಭಾಗದ ಪೊಲೀಸರು 3 ವಿಶೇಷ ತಂಡ ರಚಿಸಿದ್ದಾರೆ.

ಬೆಂಗಳೂರಿನಲ್ಲಿ ಭೀಕರ ಕೃತ್ಯ: ಗಿರಿನಗರದಲ್ಲಿ ನಡುರಸ್ತೆಯಲ್ಲೇ ವ್ಯಕ್ತಿಯ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Nov 18, 2026 | 1:25 PM

Share

ಬೆಂಗಳೂರು, ನ,18: ರಾಜಧಾನಿಯಲ್ಲಿ ಕಳೆದ ಕೆಲವು ದಿನಗಳಿಂದ ಹಾಡುಹಗಲೇ ಕೊಲೆ, ದರೋಡೆ ಕೃತ್ಯಗಳು ಹೆಚ್ಚಾಗಿದೆ. ಜನರಲ್ಲಿ ಈ ಬಗ್ಗೆ ಆತಂಕ ಕೂಡ ಉಂಟಾಗಿದೆ. ಈ ಬಗ್ಗೆ ಸರ್ಕಾರಕ್ಕೂ ಹಾಗೂ ಪೊಲೀಸ್​​ ಇಲಾಖೆಗಳಿಗೆ ಹಲವು ಭಾರೀ ಮನವಿ ಹಾಗೂ ಎಚ್ಚರಿಕೆಗಳು ಹೋಗಿದೆ. ಇದೀಗ ಇಂದು ಬೆಳ್ಳಂಬೆಳಗ್ಗೆ ಅತ್ಯಂತ ಭೀಕರ ಹಾಗೂ ಅಮಾನವೀಯ ಘಟನೆಯೊಂದು ನಡೆದಿದೆ. ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಕೈಕಾಲು ಕಟ್ಟಿಹಾಕಿ, ಮೈಮೇಲೆ ಪೆಟ್ರೋಲ್ ಸುರಿದು ನಡುರಸ್ತೆಯಲ್ಲೇ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಸುಟ್ಟ ಗಾಯಗಳಿಗೆ ತುತ್ತಾಗಿರುವ ಸಯ್ಯದ್ ಹಾಜಿ ಅಲಿಯಾಸ್ ಮೊಹಮ್ಮದ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ.

ಇಂದು ಬೆಳಗ್ಗೆ ಸುಮಾರು 6:00 ರಿಂದ 6:30ರ ಸುಮಾರಿಗೆ ಗಿರಿನಗರ ವ್ಯಾಪ್ತಿಯ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಸುಟ್ಟ ಗಾಯಗಳಿಂದ ನರಳಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಗಿರಿನಗರ ಪೊಲೀಸರು ಗಾಯಾಳುವನ್ನು ರಕ್ಷಿಸಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟಗಾಯಗಳ ವಿಭಾಗದಲ್ಲಿ ಡಾ. ಯೋಗೇಶ್ವರಪ್ಪ ನೇತೃತ್ವದ ವೈದ್ಯರ ತಂಡ ಗಾಯಾಳುವಿಗೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡುತ್ತಿದೆ. ಗಾಯಾಳು ಸಯ್ಯದ್ ಹಾಜಿ ದೇಹವು ಶೇ. 50 ರಿಂದ 70ರಷ್ಟು ಸುಟ್ಟುಹೋಗಿದ್ದು, ಎದೆ ಹಾಗೂ ಶ್ವಾಸಕೋಶದ ಭಾಗಕ್ಕೂ ತೀವ್ರ ಹಾನಿಯಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಅವರು ಸದ್ಯ ಮಾತನಾಡುವ ಪರಿಸ್ಥಿತಿಯಲ್ಲೂ ಇಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಇದುವರೆಗೂ ಗಾಯಾಳುವಿನ ಸಂಬಂಧಿಕರು ಆಸ್ಪತ್ರೆಗೆ ಭೇಟಿ ನೀಡಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್: “ಅನುಮತಿ ಕೊಟ್ಟಿದ್ದು ನೀವೇನಾ?” ಎಂದು ಪ್ರಿಯಾಂಕ ಖರ್ಗೆಗೆ ಬಿಜೆಪಿ ಪ್ರಶ್ನೆ

ಆರೋಪಿಗಳ ಪತ್ತೆಗೆ 3 ವಿಶೇಷ ತಂಡ ರಚನೆ; ದಕ್ಷಿಣ ವಿಭಾಗ ಡಿಸಿಪಿ ಕೆ. ವಂಶಿಕೃಷ್ಣ ಹೇಳಿದ್ದೇನು?

ಘಟನೆ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಕೆ. ವಂಶಿಕೃಷ್ಣ, “ಬೆಳಗ್ಗೆ 6:30ರ ಸುಮಾರಿಗೆ ಮಾಹಿತಿ ಬಂದ ತಕ್ಷಣ ನಮ್ಮ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಗಾಯಾಳು ಸಯ್ಯದ್ ಹಾಜಿ ಅಲಿಯಾಸ್ ಮೊಹಮ್ಮದ್ ಅವರ ಕೈ ಮತ್ತು ಕಾಲುಗಳನ್ನು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಈ ಮೊದಲು ಪಾದರಾಯನಪುರದಲ್ಲಿ ವಾಸವಾಗಿದ್ದ ಅವರು ಇತ್ತೀಚೆಗೆ ಗಿರಿನಗರ ಭಾಗದಲ್ಲಿ ಓಡಾಡಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ” ಎಂದು ತಿಳಿಸಿದ್ದಾರೆ.

“ಈ ಕೃತ್ಯವನ್ನು ಯಾರು ಮತ್ತು ಯಾವ ಕಾರಣಕ್ಕಾಗಿ ಎಸಗಿದ್ದಾರೆ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ಪತ್ತೆಗಾಗಿ ಈಗಾಗಲೇ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು” ಎಂದು ಡಿಸಿಪಿ ವಂಶಿಕೃಷ್ಣ ಸ್ಪಷ್ಟಪಡಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ
ಇಂದು ಈ ರಾಶಿಯವರು ಜೊತೆಗಿರುವವರಿಂದ ಏನನ್ನೂ ನಿರೀಕ್ಷಿಸದಿರಿ
ಇಂದು ಈ ರಾಶಿಯವರು ಜೊತೆಗಿರುವವರಿಂದ ಏನನ್ನೂ ನಿರೀಕ್ಷಿಸದಿರಿ
16 ಲಕ್ಷ ರೂಪಾಯಿ ಮೌಲ್ಯದ 753 ಗ್ರಾಂ ಚರಸ್ ಜಪ್ತಿ: ಆರೋಪಿಗಳ ಬಂಧನ
16 ಲಕ್ಷ ರೂಪಾಯಿ ಮೌಲ್ಯದ 753 ಗ್ರಾಂ ಚರಸ್ ಜಪ್ತಿ: ಆರೋಪಿಗಳ ಬಂಧನ
ಮುಂದಿನ ಪ್ಲ್ಯಾನ್ ಬಗ್ಗೆ ಮಾತಾಡಿದ ‘ಪ್ರೇಮದ ಊರಲಿ’ ನಟಿ ರಮಿಕಾ ಶಿವು
ಮುಂದಿನ ಪ್ಲ್ಯಾನ್ ಬಗ್ಗೆ ಮಾತಾಡಿದ ‘ಪ್ರೇಮದ ಊರಲಿ’ ನಟಿ ರಮಿಕಾ ಶಿವು
ಫಿಲಿಪೈನ್ಸ್ ಭೇಟಿ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ನರೇಂದ್ರ ಮೋದಿ
ಫಿಲಿಪೈನ್ಸ್ ಭೇಟಿ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ನರೇಂದ್ರ ಮೋದಿ