ಅಪಾರ್ಟ್​ಮೆಂಟ್​ನ 29ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ

| Updated By: ವಿವೇಕ ಬಿರಾದಾರ

Updated on: Jan 24, 2024 | 10:00 AM

ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ಓದುತ್ತಿದ್ದ 12 ವರ್ಷದ ಬಾಲಕಿ ಬುಧವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಅಪಾರ್ಟ್​ಮೆಂಟ್​ನ 29ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿ ಅಪಾರ್ಟ್​ಮೆಂಟ್​​ನಲ್ಲಿ ಪೋಷಕರೊಂದಿಗೆ ವಾಸವಾಗಿದ್ದಳು. ಬಾಲಕಿಯ ಸಾವಿಗೆ ಕಾರಣ ತಿಳಿದು ಬಂದಿಲ್ಲ.

ಅಪಾರ್ಟ್​ಮೆಂಟ್​ನ 29ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಜನವರಿ 24: ನಗರದ ಬೇಗೂರು (Begur) ಬಳಿ ಇರುವ ಅಪಾರ್ಟ್​ಮೆಂಟ್​ನ (Apartment) 29ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹುಳಿಮಾವು ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಅಪಾರ್ಟ್​ಮೆಂಟ್​ನಲ್ಲಿ ಅಪ್ಪ-ಅಮ್ಮನ ಜೊತೆಗೆ ವಾಸವಿದ್ದಳು. ಇಂದು (ಜ.24) ನಸುಕಿನ ಜಾವ 5 ಗಂಟೆ ಸುಮಾರಿಗೆ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಾಲಕಿಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಳು. ತಂದೆ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದು, ತಾಯಿ ಗೃಹಿಣಿ. ನಸುಕಿನ ಜಾವ 4.30ರ ಸುಮಾರ ಎಚ್ಚರಗೊಂಡು ಬಾಲಕಿ ಮನೆಯ ಪಡಸಾಲೆಗೆ ಬಂದಿದ್ದಾಳೆ. ಈ ವೇಳೆ ತಾಯಿ ಬಾಲಕಿಗೆ ಪ್ರಶ್ನೆ ಮಾಡಿದ್ದಾರೆ. ತಾಯಿಯ ಪ್ರಶ್ನೆಗೆ ಬಾಲಕಿ ಸರಿಯಾಗಿ ಉತ್ತರ ಕೊಡದೆ ಮತ್ತೆ ಮಲಗುವುದಾಗಿ ಹೇಳಿ ರೂಮಿಗೆ ಹೋಗಿದ್ದಾಳೆ. ತಾಯಿ ಕೂಡ ಕೋಣೆಯೊಳಗೆ ಹೋಗಿದ್ದಾರೆ.

ಇದನ್ನೂ ಓದಿ: ಮೀಟರ್​ ಬಡ್ಡಿ ದಂಧೆ ಹಾವಳಿ, ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಎಚ್ಚೆತ್ತ ತುಮಕೂರು ಪೊಲೀಸರಿಂದ ಸಹಾಯವಾಣಿ

ಆದರೆ ಸ್ವಲ್ಪಹೊತ್ತಿನ ಬಳಿಕ 5 ಗಂಟೆ ಸುಮಾರಿಗೆ ಬಾಲಕಿ 29ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಿಕಿ ಬೀಳುತ್ತಿದ್ದಂತೆ ಜೋರಾದ ಶಬ್ದ ಕೇಳಿಬಂದಿದೆ. ಕೂಡಲೇ ಅಪಾರ್ಟ್ಮೆಂಟ್ ಕಾವಲುಗಾರ ಹೊರ ಬಂದು ನೋಡಿದಾಗ ಬಾಲಕಿಯ ರಕ್ತಸಿಕ್ತ ಶವ ಕಂಡಿದೆ. ತತಕ್ಷಣ ಕಾವಲುಗಾರ ಪೋಷಕರಿಗೆ ಮತ್ತು ಅಪಾರ್ಟ್ಮೆಂಟ್ ಅಸೋಸಿಯೇಷನ್​ಗೆ ಮಾಹಿತಿ ನೀಡಿದ್ದಾರೆ. ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ನೆಲಮಂಗಲ: ಕ್ಯಾಂಟರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಿದರಕಲ್ಲು ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಜಗದೀಶ್ (42) ಮೃತ ವ್ಯಕ್ತಿ. ಕ್ಯಾಂಟರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ