Bengaluru: ಗಾಲ್ಫ್ ಬಾಲ್ ಬಿದ್ದು ಕಾರಿನ ಗಾಜು ಜಖಂ, ಚಾಲಕನಿಗೆ ಗಾಯ: ಗಾಲ್ಫ್‌ ಕ್ಲಬ್‌ ವಿರುದ್ಧ ಎಫ್‌ಐಆರ್ ದಾಖಲು

ಚಲಿಸುತ್ತಿದ್ದ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಗಾಲ್ಫ್ ಬಾಲ್ ಬಿದ್ದು ಕಾರಿನ ಗಾಜು ಜಖಂ ಆಗಿದ್ದು, ಚಾಲಕನಿಗೆ ಗಾಯವಾಗಿರುವಂತಹ ಘಟನೆ ಇಂದು ಬೆಳಗ್ಗೆ 10:30ರ ವೇಳೆಗೆ ಓಲ್ಡ್ ಹೈಗ್ರೌಂಡ್ಸ್ ಜಂಕ್ಷನ್ ಬಳಿ ನಡೆದಿದೆ.

Bengaluru: ಗಾಲ್ಫ್ ಬಾಲ್ ಬಿದ್ದು ಕಾರಿನ ಗಾಜು ಜಖಂ, ಚಾಲಕನಿಗೆ ಗಾಯ: ಗಾಲ್ಫ್‌ ಕ್ಲಬ್‌ ವಿರುದ್ಧ ಎಫ್‌ಐಆರ್ ದಾಖಲು
ಗಾಲ್ಫ್ ಬಾಲ್ ಬಿದ್ದು ಕಾರಿನ ಗಾಜು ಜಖಂ ಆಗಿರುವುದು.
Follow us
ಗಂಗಾಧರ​ ಬ. ಸಾಬೋಜಿ
|

Updated on:Apr 20, 2023 | 10:13 PM

ಬೆಂಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಗಾಲ್ಫ್ ಬಾಲ್ (Golf ball) ಬಿದ್ದು ಕಾರಿನ ಗಾಜು ಜಖಂ ಆಗಿದ್ದು, ಚಾಲಕನಿಗೆ ಗಾಯವಾಗಿರುವಂತಹ ಘಟನೆ ಇಂದು ಬೆಳಗ್ಗೆ 10:30ರ ವೇಳೆಗೆ ಓಲ್ಡ್ ಹೈಗ್ರೌಂಡ್ಸ್ ಜಂಕ್ಷನ್ ಬಳಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ವಕೀಲ ಗಿರೀಶ್ ದೂರಿನ ಮೇರೆಗೆ ಗಾಲ್ಫ್ ಆಡಳಿತ ಮಂಡಳಿ ಹಾಗೂ ಆಟಗಾರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಸೇಬಿಗಾಗಿ ಮುಗಿಬಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಲಾಠಿಚಾರ್ಜ್​​ ಮಾಡಿರುವಂತಹ ಘಟನೆ ನೆಲಮಂಗಲದಲ್ಲಿ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮುಖಂಡರು ಆ್ಯಪಲ್​ ಹಾರ ಹಾಕಿದ್ದರು. ಈ ವೇಳೆ ಹಾರದಲ್ಲಿದ್ದ ಸೇಬು ಕಿತ್ತುಕೊಳ್ಳಲು ಕಾರ್ಯಕರ್ತರ ನಡುವೆ ತಳ್ಳಾಟ ಉಂಟಾಗಿದೆ. ಹಾಗಾಗಿ ಲಾಠಿ ಪ್ರಹಾರ ನಡೆಸಿ ಪೊಲೀಸರು ಕಾರ್ಯಕರ್ತರನ್ನು ಚದುರಿಸಿದ್ದರು.

ಕಲ್ಲು ತೂರಾಟ: ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್​ ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಕಿಡಿಗೇಡಿ‌ಗಳಿಂದ ಕೊರಟಗೆರೆ ತಾಲೂಕು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ಇತ್ತೀಚೆಗೆ ನಡೆದಿತ್ತು. ಕಲ್ಲು ತೂರಾಟ ವೇಳೆ ಮಹಿಳಾ ಪೊಲೀಸ್​ ಸಿಬ್ಬಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿ, ಚಿಕಿತ್ಸೆ ನೀಡಲಾಗಿತ್ತು. ನಾಮಪತ್ರ ಸಲ್ಲಿಕೆ ಬಳಿಕ ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಕಚೇರಿ ಮೇಲೆ ಯಾರು ಕಲ್ಲು ಎಸೆದರು ಅಂತಾ ನನಗೆ ಗೊತ್ತಿಲ್ಲ. ನಾನು ನಾಮಪತ್ರ ಸಲ್ಲಿಸಲು ಒಳಗೆ ಹೋದಾಗ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರ ಬಳಿ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ಮಹಿಳೆಯರು ನೋಡಲೇಬೇಕಾದ ವಿಡಿಯೋ ಇದು! ಅಬ್ಬಾ ಆ ಖದೀಮರಿಬ್ಬರು ಮಹಿಳೆಯ ಕೊರಳಿಂದ ಚಿನ್ನದ ಸರ ದೋಚಿದ್ದು ಹೇಗೆ ಗೊತ್ತಾ?

ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ದಾಳಿ, ಮಚ್ಚು-ಲಾಂಗು ವಶಕ್ಕೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುಮಾರು 1500ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಂದ 500ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ದಾಳಿ ನಡೆದಿದೆ. ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ರೌಡಿ ಶೀಟರ್​ಗಳ ಮನೆ ಮೇಲೆ ದಾಳಿ ಮಾಡಲಾಗಿದೆ. ದಾಳಿ ವೇಳೆ ವಾರಂಟ್ ಪೆಂಡಿಂಗ್ ಇದ್ದ ಕೆಲ ರೌಡಿಗಳ ಮನೆಯಲ್ಲಿ ಮಚ್ಚು, ಲಾಂಗುಗಳು ಪತ್ತೆಯಾಗಿವೆ.

ಇದನ್ನೂ ಓದಿ: ಬೆಂಗಳೂರು: ಒಂಟಿತನ ಕಾಡುತ್ತಿದೆ ಎಂದು ಆಸ್ಪತ್ರೆಯಿಂದ ಮಗು ಕಳ್ಳತನ, 600 ಸಿಸಿಟಿವಿ ಪರಿಶೀಲನೆ ಬಳಿಕ ಸಿಕ್ಕ ಕಳ್ಳಿ

ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸೂಚನೆ ಮೇರೆಗೆ ಎಲ್ಲಾ ವಿಭಾಗದ ಡಿಸಿಪಿಗಳ ನೇತ್ರತ್ವದಲ್ಲಿ ದಾಳಿ ನಡೆದಿದೆ. ಕೇಂದ್ರ ವಿಭಾಗ, ದಕ್ಷಿಣ ವಿಭಾಗ, ಪಶ್ಚಿಮ ವಿಭಾಗ ಮತ್ತು ಉತ್ತರ ವಿಭಾಗದಲ್ಲಿ ಸುಮಾರು ಐನೂರಕ್ಕೂ ಹೆಚ್ಚು ರೌಡಿಗಳ ನಿವಾಸದ ಮೇಲೆ ದಾಳಿ ನಡೆಸಿ ಮಾರಕಾಸ್ತ್ರ ಇಟ್ಟುಕೊಂಡಿದ್ದ ರೌಡಿಗಳನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ರೌಡಿಗಳಿಗೆ ಚುನಾವಣಾ ಸಮಯದಲ್ಲಿ ಯಾವ ಪಕ್ಷದ ಪರ ಹೋಗಿ ಗಲಾಟೆ, ರೌಡಿಸಂ ಮಾಡದಂತೆ ಎಚ್ಚರಿಕೆ ನೀಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:13 pm, Thu, 20 April 23

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ