AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ರಮ ಗನ್ ಡೀಲಿಂಗ್: ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ಮಾರಾಟ ಮಾಡುತ್ತಿದ್ದ 7 ಮಂದಿಯ ಬಂಧನ

ಬೆಂಗಳೂರಿನ ಆನೇಕಲ್‌ನಲ್ಲಿ ಅಕ್ರಮವಾಗಿ ಕಂಟ್ರಿಮೇಡ್ ಪಿಸ್ತೂಲ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಐದು ಪಿಸ್ತೂಲ್ ಹಾಗೂ 10 ಗುಂಡುಗಳನ್ನು ಜಪ್ತಿ ಮಾಡಿದ್ದಾರೆ. ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳ ಸಂಪರ್ಕದ ಶಂಕೆಯೂ ವ್ಯಕ್ತವಾಗಿದ್ದು, ಆ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.

ಬೆಂಗಳೂರಿನಲ್ಲಿ ಅಕ್ರಮ ಗನ್ ಡೀಲಿಂಗ್: ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ಮಾರಾಟ ಮಾಡುತ್ತಿದ್ದ 7 ಮಂದಿಯ ಬಂಧನ
ಆನೇಕಲ್ ಪೊಲೀಸ್Image Credit source: tv9
ರಾಮು, ಆನೇಕಲ್​
| Edited By: |

Updated on:Sep 22, 2026 | 9:17 AM

Share

ಮುಖ್ಯಾಂಶಗಳು

  • ಅಕ್ರಮ ಗನ್ ಮಾರಾಟ ಆರೋಪ; ಏಳು ಮಂದಿ ಬಂಧನ
  • ಐದು ಪಿಸ್ತೂಲ್, ಹತ್ತು ಗುಂಡುಗಳು ಜಪ್ತಿ
  • ರಾಜಕಾರಣಿಗಳ ಸಂಪರ್ಕದ ಬಗ್ಗೆಯೂ ತನಿಖೆ

ಆನೇಕಲ್, ಸೆಪ್ಟೆಂಬರ್ 22: ಅಕ್ರಮವಾಗಿ ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಆನೇಕಲ್ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರದೀಪ್ ರಮೇಶ್, ಮನೋಜ್ ಅಲಿಯಾಸ್ ಜಾಕಿ, ರಿಜ್ವಾನ್ ಪಾಷಾ, ನಂಜಪ್ಪ, ವೆಂಕಟರಾಜು, ಸುಣವಾರ ಗೋಪಿ ಹಾಗೂ ಶಿವರಾಜ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಐದು ಕಂಟ್ರಿಮೇಡ್ ಪಿಸ್ತೂಲ್ ಹಾಗೂ 10 ಗುಂಡುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆಗಸ್ಟ್ 14ರಂದು ಗಸ್ತಿನಲ್ಲಿದ್ದ ಪೊಲೀಸರಿಗೆ ಹಾಲ್ದೇನಹಳ್ಳಿ ರೈಲ್ವೆ ಗೇಟ್ ಬಳಿ ಬ್ಯಾಗ್‌ನೊಂದಿಗೆ ನಿಂತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದ. ಪರಿಶೀಲನೆ ವೇಳೆ ಆತನ ಬಳಿಯಿಂದ ಮೂರು ಕಂಟ್ರಿಮೇಡ್ ಪಿಸ್ತೂಲ್ ಹಾಗೂ 10 ಗುಂಡುಗಳು ಪತ್ತೆಯಾಗಿದ್ದವು. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಂಟ್ರಿಮೇಡ್ ಪಿಸ್ತೂಲ್ ಮಾರಾಟದ ದಂಧೆ ಬಯಲಾಗಿದೆ.

ಅಕ್ರಮ ಗನ್ ಡೀಲಿಂಗ್​ಗೆ ಮಧ್ಯ ಪ್ರದೇಶದ ಲಿಂಕ್

ಮಧ್ಯಪ್ರದೇಶದ ಬೇಡಘಾಟ್‌ನ ದಾವೂದ್ ಎಂಬಾತ ದಂಧೆಯ ಕಿಂಗ್‌ಪಿನ್ ಎಂದು ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ದಾವೂದ್‌ನಿಂದ ಪ್ರದೀಪ್ ರಮೇಶ್ ಮೂಲಕ ಟ್ರೈನ್‌ನಲ್ಲಿ ಆನೇಕಲ್‌ಗೆ ಪಿಸ್ತೂಲ್‌ಗಳನ್ನು ರವಾನೆ ಮಾಡಲಾಗುತ್ತಿತ್ತು. ಗನ್ ಡೆಲಿವರಿಗೆ ಕಾಯುತ್ತಿದ್ದ ವೇಳೆ ಪ್ರದೀಪ್ ರಮೇಶ್ ಸಿಕ್ಕಿಬಿದ್ದಿದ್ದ. ತನಿಖೆ ಮುಂದುವರಿಸಿದ ಪೊಲೀಸರು ಕಂಟ್ರಿಮೇಡ್ ಪಿಸ್ತೂಲ್ ಮಾರಾಟದ ಬಗ್ಗೆ ಮತ್ತಷ್ಟು ಮಾಹಿತಿ ಕಲೆಹಾಕಿದ್ದಾರೆ. ಕೆ.ಜಿ.ಹಳ್ಳಿ ರೌಡಿಶೀಟರ್ ಕುಳ್ಳ ರಿಜ್ವಾನ್‌ಗೆ ಒಂದು ಪಿಸ್ತೂಲ್ ಹಾಗೂ ರೌಡಿಶೀಟರ್ ಮನೋಜ್ ಅಲಿಯಾಸ್ ಜಾಕಿಗೆ ಮತ್ತೊಂದು ಪಿಸ್ತೂಲ್ ಮಾರಾಟ ಮಾಡಿರುವುದು ತಿಳಿದುಬಂದಿದೆ.

ಕೋಕಾ ಕಾಯ್ದೆಯಡಿ ಪ್ರಕರಣ

ಉಳಿದ ಆರೋಪಿಗಳು ಗನ್ ಸಪ್ಲೈಯರ್‌ಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಏಳು ಮಂದಿ ಹಲವು ಅಪರಾಧ ಕೃತ್ಯಗಳಲ್ಲಿ ಶಾಮೀಲಾಗಿದ್ದ ಆರೋಪಿಗಳಾಗಿದ್ದು, ಅವರ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

LIVE TV

ಡಿವೈಎಸ್ಪಿ ಗೋಪಾಲ್ ನಾಯಕ್ ಹಾಗೂ ಇನ್ಸ್‌ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ. ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳ ಸಂಪರ್ಕ ಇರುವ ಶಂಕೆಯೂ ಇದ್ದು, ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 am, Tue, 22 September 26

Follow Us
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು