AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಅವ್ಯವಹಾರ: ಸಿಬಿಐ ತನಿಖೆಗೆ ಶಿಫಾರಸು ಮಾಡಲು ತೀರ್ಮಾನ

ಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಬಗ್ಗೆ ಸಚಿವ ಸಂಪುಟದಲ್ಲಿ ಪ್ರಸ್ತಾಪಿಸಲು ತೀರ್ಮಾನಿಸಲಾಗಿದೆ.

ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಅವ್ಯವಹಾರ: ಸಿಬಿಐ ತನಿಖೆಗೆ ಶಿಫಾರಸು ಮಾಡಲು ತೀರ್ಮಾನ
ಗುರುರಾಘವೇಂದ್ರ ಸಹಕಾರ ಬ್ಯಾಂಕ್‌
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Jan 17, 2023 | 7:35 PM

Share

ಬೆಂಗಳೂರು ನಗರದ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ (Guru Raghavendra Co Operative Bank) ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ. ವಿಕಾಸಸೌಧದಲ್ಲಿ ಇಂದು(ಜನವರಿ 17) ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬ್ಯಾಂಕ್‌ನ ಅವ್ಯವಹಾರಗಳ ಕುರಿತ ಪರಾಮರ್ಶೆ  ಚರ್ಚಿಸಲಾಗಿದ್ದು, ಈ ಕುರಿತು ಸಚಿವ ಸಂಪುಟದಲ್ಲಿ ಪ್ರಸ್ತಾವನೆ ಮಂಡಿಸಲು ತೀರ್ಮಾನಿಸಲಾಗಿದೆ. ಇದೇ ವೇಳೆ ಸಚಿವ ಸೋಮಶೇಖರ್ ಅವರು ಶಿಫಾರಸು ಕುರಿತು ನಿರ್ಣಯ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಅವ್ಯವಹಾರ ಪ್ರಕರಣ; ಇಡಿ ಅಧಿಕಾರಿಗಳಿಂದ ಬ್ಯಾಂಕ್ ಮ್ಯಾನೇಜರ್​ ಬಂಧನ

ಠೇವಣಿದಾರರ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಪ್ರಕರಣ ಸಿಬಿಐ ತನಿಖೆಗೆ ವಹಿಸುವಂತೆ ಸಚಿವ ಸಂಪುಟದಲ್ಲಿ ಪ್ರಸ್ತಾವನೆ ಮಂಡಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿಕಾಸಸೌಧದಲ್ಲಿ ನಡೆದ ಗುರುರಾಘವೇಂದ್ರ ಬ್ಯಾಂಕ್‌ನ ಅವ್ಯವಹಾರಗಳು ಮತ್ತು ಪುನಃಶ್ಚೇತನ ಹಾಗೂ ವಶಿಷ್ಟ ಸೌಹಾರ್ದ ಬ್ಯಾಂಕ್‌ನ ಅವ್ಯವಹಾರಗಳ ಕುರಿತ ಪರಾಮರ್ಶೆ ಸಭೆಯಲ್ಲಿ ಶಾಸಕರಾದ ರವಿಸುಬ್ರಹ್ಮಣ್ಯ, ಸೌಮ್ಯಾರೆಡ್ಡಿ, ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಉಪಸ್ಥಿತರಿದ್ದರು.

ಶ್ರೀ ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಬಹುಕೋಟಿ ಅವ್ಯವಹಾರ ಎದುರಿಸುತ್ತಿತ್ತು. ಇಡಿ ತನಿಖೆ ವೇಳೆ ಹೆಚ್ಚಿನ ಮಾಹಿತಿ ಬೆಳಕಿಗೆ ಬಂದಿತ್ತು. ನಕಲಿ ದಾಖಲೆಗಳ ಅಧಾರದ ಮೇಲೆ 892.85 ಕೋಟಿ ರೂ. ಸಾಲ ಕೊಟ್ಟಿರುವುದು ತನಿಖೆಯಲ್ಲಿ ಹೊರಬಿದ್ದಿತ್ತು. ಬ್ಯಾಂಕ್‌ನ ಅಧ್ಯಕ್ಷ ಕೆ.ರಾಮಕೃಷ್ಣ ಫೆಬ್ರವರಿ 18 ರ ವರೆಗೆ ಇಡಿ ವಶಕ್ಕೆ ಪಡೆಯಲಾಗಿದೆ. ಒಟ್ಟಾರೆ 1,544.43 ಕೋಟಿ ರೂ.ಗಳಷ್ಟು ಸಾಲಗಳನ್ನು ನೀಡಿರುವ ಬ್ಯಾಂಕ್, ನಕಲಿ ದಾಖಲೆಗಳ ಅಧಾರದ ಮೇಲೆ 892.85 ಕೋಟಿ ರೂಪಾಯಿ ಸಾಲ ನೀಡಿರುವುದು ಇಡಿ ತನಿಖೆ ವೇಳೆ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬ್ಯಾಂಕ್ ಮ್ಯಾನೇಜರ್ ಕೆ. ರಾಮಕೃಷ್ಣ ಅವರನ್ನು ಇಡಿ ಬಂಧಿಸಿತ್ತು.

Published On - 7:31 pm, Tue, 17 January 23