Odisha Train Accident: ಬೆಂಗಳೂರು-ಗುವಾಹಟಿ ಎಕ್ಸ್‌ಪ್ರೆಸ್ ರೈಲು ಸಂಚಾರ ಕ್ಯಾನ್ಸಲ್, ಒಡಿಶಾ ರೈಲು ದುರಂತದಲ್ಲಿ ಕನ್ನಡಿಗರು ಸೇಫ್
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು-ಗುವಾಹಟಿ ಎಕ್ಸ್‌ಪ್ರೆಸ್ ರೈಲು ಸಂಚಾರ ಕ್ಯಾನ್ಸಲ್ ಮಾಡಲಾಗಿದೆ. ಒಡಿಶಾ ಮಾರ್ಗವಾಗಿ ತೆರಳಬೇಕಿದ್ದ ಬೆಂಗಳೂರು-ಗುವಾಹಟಿ ರೈಲು ಬೆಂಗಳೂರು ನಿಲ್ದಾಣದಲ್ಲೇ ನಿಂತಿದೆ.
ಬೆಂಗಳೂರು: ಒಡಿಶಾದ ಬಾಲಸೋರ್ (Balasore) ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಹೌರಾದಿಂದ ಚೆನ್ನೈಗೆ (Chennai) ತೆರಳುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ (Coromandel Express) ರೈಲು ಶುಕ್ರವಾರ ಸಂಜೆ ಅಪಘಾತಕ್ಕೀಡಾಗಿದ್ದು ಸುಮಾರು 233 ಜನ ಮೃತಪಟ್ಟಿದ್ದಾರೆ. ಈ ಘಟನೆ ಹಿನ್ನೆಲೆ ಬೆಂಗಳೂರು-ಗುವಾಹಟಿ ಎಕ್ಸ್‌ಪ್ರೆಸ್ ರೈಲು(Bengaluru-Guwahati Express Train) ಸಂಚಾರ ಕ್ಯಾನ್ಸಲ್ ಮಾಡಲಾಗಿದೆ.
ರಾತ್ರಿ 10.30ಕ್ಕೆ ಬೈಯ್ಯಪ್ಪನಹಳ್ಳಿ ನಿಲ್ದಾಣದಿಂದ ಒಡಿಶಾ ಮಾರ್ಗವಾಗಿ ತೆರಳಬೇಕಿದ್ದ ಬೆಂಗಳೂರು-ಗುವಾಹಟಿ ರೈಲು ಬೆಂಗಳೂರು ರೈಲು ನಿಲ್ದಾಣದಲ್ಲೇ ನಿಂತಿದೆ. ಹೀಗಾಗಿ ಬೈಯ್ಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ಪರದಾಡುತ್ತಿದ್ದಾರೆ. ಬೆಂಗಳೂರಿನಿಂದ ಒಡಿಶಾಗೆ ತೆರಳಲು ಟಿಕೆಟ್ ಬುಕ್ ಮಾಡಿದ್ದ ಜನರು ರೈಲು ಬರುತ್ತೆ ಎಂದು ಕಾದು ಕುಳಿತಿದ್ದಾರೆ. ಮತ್ತೊಂದೆಡೆ ಜನರಲ್ ಟಿಕೆಟ್ ಪಡೆದಿದ್ದ ಪ್ರಯಾಣಿಕರಿಗೆ ಹಣ ವಾಪಸ್ ನೀಡಲಾಗುತ್ತಿದೆ. ಬೈಯ್ಯಪ್ಪನಹಳ್ಳಿ ನಿಲ್ದಾಣದಲ್ಲಿ ಹಣ ವಾಪಸ್ ನೀಡಲಾಗುತ್ತಿದೆ. ಇನ್ನು ಒಡಿಶಾ ಮಾರ್ಗದಲ್ಲಿ ತೆರಳುವ ರೈಲುಗಳ ಸಂಚಾರ ನಾಳೆ ಕೂಡ ಬಹುತೇಕ ರದ್ದು? ಹೀಗಾಗಿ ಪ್ರಯಾಣಿಕರು ರೈಲು ಮುಖಾಂತರ ಒಡಿಶಾಗೆ ಹೋಗಲು ಇನ್ನೆರಡು ದಿನ ಅಸಾಧ್ಯ.
ರೈಲು ನಿಲ್ದಾಣದಲ್ಲಿ ಸಹಾಯವಾಣಿ ಕೇಂದ್ರ ಓಪನ್
ಇನ್ನು ರೈಲ್ವೆ ಅಧಿಕಾರಿಗಳು ಕರ್ನಾಟಕದ ಪ್ರಯಾಣಿಕರ ಮಾಹಿತಿಯನ್ನು ಕಲೆ ಹಾಕ್ತಿದ್ದಾರೆ. ಸಹಾಯವಾಣಿ ಮೂಲಕ ಮಾಹಿತಿ ಪಡೆಯುವ ಪ್ರಯತ್ನ ನಡೆಯುತ್ತಿದೆ. ಬೈಯಪ್ಪನಹಳ್ಳಿಯ SMVT ರೈಲು ನಿಲ್ದಾಣದಲ್ಲೂ ಸಹಾಯವಾಣಿ ಓಪನ್ ಮಾಡಲಾಗಿದೆ. ಈ ನಿಲ್ದಾಣದಿಂದ ಹೊರಟ ಪ್ರಯಾಣಿಕರ ಮಾಹಿತಿ ಪಡೆಯಲು ಪ್ರಯತ್ನ ನಡೆಯುತ್ತಿದೆ.
ಇದನ್ನೂ ಓದಿ: Odisha Train Accident: ಒಡಿಶಾದ ಬಾಲಸೋರ್ನಲ್ಲಿ ಭೀಕರ ರೈಲು ಅಪಘಾತ; 50 ಮಂದಿ ಸಾವು
ಒಡಿಶಾ ರೈಲು ದುರಂತದಲ್ಲಿ ಕನ್ನಡಿಗರು ಸೇಫ್
ಅಪಘಾತಕ್ಕೀಡಾದ ರೈಲಿನಲ್ಲಿ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ 110 ಜನ ಪ್ರಯಾಣಿಸುತ್ತಿದ್ರು. ಸದ್ಯ ರೈಲಿನಲ್ಲಿ ತೆರಳುತ್ತಿದ್ದ ಕಳಸ ತಾಲೂಕಿನ 110 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಬೆಂಗಳೂರಿನಿಂದ ಹೌರಾ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸುತ್ತಿದ್ದ 110 ಜನ ಬೆಂಗಳೂರಿನಿಂದ ಕೊನೆಯ S5, S6, S7 ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು. ಮಧ್ಯಾಹ್ನ ಕೋಲ್ಕತ್ತಾ ಬಳಿ ಇಂಜಿನ್ ಬದಲಿಸಿದ್ದ ಕಾರಣ ರೈಲಿನ ಮೊದಲ ಬೋಗಿಗೆ ಶಿಫ್ಟ್ ಆಗಿದ್ದರು. ಮೊದಲ ಬೋಗಿಗೆ ಶಿಫ್ಟ್ ಆದ ಹಿನ್ನೆಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಟಿವಿ9ಗೆ ಹೌರಾ ಎಕ್ಸ್‌ಪ್ರೆಸ್ ರೈಲಿನಲ್ಲಿದ್ದ ಪ್ರಯಾಣಿಕರ ಸಂಬಂಧಿ ಮಾಹಿತಿ ನೀಡಿದರು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ