Bengaluru Habba: ಮಾ. 25, 26ರಂದು ನಡೆಯಲಿರುವ ಬೆಂಗಳೂರು ಹಬ್ಬದ ಬಗ್ಗೆ ನೀವು ತಿಳಿಯಲೇಬೇಕಾದ 5 ಸಂಗತಿಗಳು

ಬೆಂಗಳೂರು ಹಬ್ಬವು ಕಲಾವಿದರು, ಚಲನಚಿತ್ರಗಳು ಮತ್ತು ಆಹಾರದ ಮೂಲಕ ಬೆಂಗಳೂರು ನಗರದ ಭವ್ಯತೆ ಮತ್ತು ಸಂಸ್ಕೃತಿಯನ್ನು ಪ್ರಸ್ತುತಪಡಿಸುವ ಉತ್ಸವವಾಗಿದೆ.

Bengaluru Habba: ಮಾ. 25, 26ರಂದು ನಡೆಯಲಿರುವ ಬೆಂಗಳೂರು ಹಬ್ಬದ ಬಗ್ಗೆ ನೀವು ತಿಳಿಯಲೇಬೇಕಾದ 5 ಸಂಗತಿಗಳು
ವಿಧಾನಸೌಧ
Follow us
ಆಯೇಷಾ ಬಾನು
|

Updated on:Mar 24, 2023 | 11:59 AM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾರ್ಚ್ 25 ಮತ್ತು 26 ರಂದು ವಾರ್ಷಿಕ ಬೆಂಗಳೂರು ಹಬ್ಬ(Bengaluru Habba) ಆಚರಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಬೆಂಗಳೂರು ಹಬ್ಬದಲ್ಲಿ ನಗರದ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಪ್ರದರ್ಶಿಸಲಾಗುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆಯಿದೆ. ಈ ಹಬ್ಬದಲ್ಲಿ ನಾಟಕ, ಕಲೆ, ನೃತ್ಯ ಸೇರಿದಂತೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಬೆಂಗಳೂರು ಹಬ್ಬದ ಬಗ್ಗೆ ತಿಳಿದುಕೊಳ್ಳಬೇಕಾದ ಐದು ವಿಷಯಗಳು

  1.  ಬೆಂಗಳೂರು ಹಬ್ಬವು ಕಲಾವಿದರು, ಚಲನಚಿತ್ರಗಳು ಮತ್ತು ಆಹಾರದ ಮೂಲಕ ಬೆಂಗಳೂರು ನಗರದ ಭವ್ಯತೆ ಮತ್ತು ಸಂಸ್ಕೃತಿಯನ್ನು ಪ್ರಸ್ತುತಪಡಿಸುವ ಉತ್ಸವವಾಗಿದೆ. ಕರ್ನಾಟಕದಾದ್ಯಂತ ಕಲಾವಿದರು ಈ ಹಬ್ಬದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ.
  2.  ಬೆಂಗಳೂರಿನ ನಿರ್ಮಾಣ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ವಿಜಯನಗರ ಸಾಮ್ರಾಜ್ಯದ ದೊರೆ ನಾಡಪ್ರಭು ಕೆಂಪೇಗೌಡರಿಗೆ ಈ ಹಬ್ಬದ ಮೂಲಕ ಗೌರವ ಸಲ್ಲಿಸಲಾಗುತ್ತದೆ.
  3. ಕಬ್ಬನ್ ಪಾರ್ಕ್ ಮತ್ತು ವಿಧಾನಸೌಧದ ಸುತ್ತಮುತ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹಾಗೂ ಬಿಬಿಎಂಪಿ ಕೂಡ ನಗರದಾದ್ಯಂತ ಮಾರ್ಚ್ 25 ಮತ್ತು 26 ರಂದು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.
  4. ಮಾರ್ಚ್ 25 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಬಳಿ ಬೆಂಗಳೂರು ಹಬ್ಬವನ್ನು ಉದ್ಘಾಟಿಸಲಿದ್ದಾರೆ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾರ್ಚ್ 26 ರಂದು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
  5. ಸಮಯದ ಅಭಾವದಿಂದ ಈ ವರ್ಷ ಬೆಂಗಳೂರು ಹಬ್ಬವನ್ನು ಸಣ್ಣ ಪ್ರಮಾಣದಲ್ಲಿ ಆಯೋಜಿಸಲಾಗಿದೆ ಎಂದು ಸಚಿವ ಆರ್ ಅಶೋಕ ಹೇಳಿದರು. ಈ ವರ್ಷ ಬೆಂಗಳೂರು ಹಬ್ಬವನ್ನು ಸರಳ ರೀತಿಯಲ್ಲಿ ನಡೆಸಲಾಗುವುದು. ಆದರೆ ಮುಂದಿನ ವರ್ಷದಿಂದ ಮೈಸೂರು ದಸರಾ ಹಬ್ಬದಂತೆಯೇ ಅದ್ಧೂರಿಯಾಗಿ ಆಚರಿಸುತ್ತೇವೆ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ: Namma Bengaluru Habba: ಮಾರ್ಚ್​ 25, 26ಕ್ಕೆ ನಮ್ಮ ಬೆಂಗಳೂರು ಹಬ್ಬ ಆಯೋಜನೆ

ಬೆಂಗಳೂರು ಹಬ್ಬದಲ್ಲಿ ವಿವಿಧ ಕಾರ್ಯಕ್ರಮ

ಬಾಲಭವನ ಆವರಣದ ಆಂಪಿಕ್ ಥಿಯೇಟರ್ ವಿವಿಧ ಅಕಾಡೆಮಿಗಳು, ರಂಗಶಂಕರ ಮತ್ತು ನೀನಾಸಂ ಸಂಸ್ಥೆಗಳ ಸಹಯೋಗದಲ್ಲಿ ನಾಟಕ, ಬೀದಿ ನಾಟಕಗಳು, ಗೊಂಬೆ ಪ್ರದರ್ಶನ, ಯಕ್ಷಗಾನ, ಗಾಯನ, ನೃತ್ಯ ಕಾರ್ಯಕ್ರಮಗಳನ್ನು ಬಾಲಭವನ ಆವರಣದ ಆಂಪೀಕ್ ಥಿಯೇಟರ್‌ನಲ್ಲಿ ಆಯೋಜಿಸಲಾಗಿದೆ. ಕಬ್ಬನ್ ಪಾರ್ಕ್‌ನ ಬ್ಯಾಂಡ್ ಸ್ಟಾಂಡ್ ವೇದಿಕೆಯಲ್ಲಿ ಪೋಲಿಸ್ ಬ್ಯಾಂಡ್ ವಾದನ, ನೃತ್ಯ ಜನಪದ ಗಾಯನ, ಯಕ್ಷಗಾನ, ನಾಟಕ ಹಾಗೂ ವಿವಿಧ ರಾಜ್ಯಗಳ ಸಂಘಟನೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನವಿರುತ್ತದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:59 am, Fri, 24 March 23

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ