AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸಿಷ್ಠ ಕೋಆಪರೇಟಿವ್ ಬ್ಯಾಂಕ್‌ ನಿರ್ದೇಶಕರ ಮನೆ ಮೇಲೆ ಪೊಲೀಸರ ದಾಳಿ; ದಾಖಲೆ ವಶಕ್ಕೆ

ಗಿರಿನಗರದ 2 ಕಡೆ, ಶಂಕರಪುರಂನ ಬಳಿ, ಹನುಮಂತನಗರ 4 ಕಡೆ ಸೇರಿದಂತೆ 11 ಕಡೆ ಪೊಲೀಸರು ದಾಳಿ ನಡೆಸಿದ್ದಾರೆ. ಹೂಡಿಕೆದಾರರಿಗೆ ಹಣ ವಾಪಸ್ ನೀಡದ ಹಿನ್ನೆಲೆಯಲ್ಲಿ ಈ ಮುನ್ನ ಹನುಮಂತನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ಹಿನ್ನೆಲೆ ಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದ ಪೊಲೀಸರು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ವಸಿಷ್ಠ ಕೋಆಪರೇಟಿವ್ ಬ್ಯಾಂಕ್‌ ನಿರ್ದೇಶಕರ ಮನೆ ಮೇಲೆ ಪೊಲೀಸರ ದಾಳಿ; ದಾಖಲೆ ವಶಕ್ಕೆ
ಶ್ರೀ ವಸಿಷ್ಠ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ
TV9 Web
| Edited By: |

Updated on: Jul 09, 2021 | 7:39 PM

Share

ಬೆಂಗಳೂರು: ವಸಿಷ್ಠ ಕೋಆಪರೇಟಿವ್ ಬ್ಯಾಂಕ್‌ ನಿರ್ದೇಶಕ ಕೃಷ್ಣಪ್ರಸಾದ್ ಮತ್ತು ವೆಂಕಟನಾರಾಯಣ ಸೇರಿ ಹಲವು ನಿರ್ದೇಶರ ಮನೆಗಳ ಮೇಲೆಹನುಮಂತ ನಗರ ಪೊಲೀಸರು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ 11 ಕಡೆ ನಡೆಸಿದ ದಾಳಿಯಲ್ಲಿ ಬ್ಯಾಂಕ್‌ಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ಗಿರಿನಗರದ 2 ಕಡೆ, ಶಂಕರಪುರಂನ ಬಳಿ, ಹನುಮಂತನಗರ 4 ಕಡೆ ಸೇರಿದಂತೆ 11 ಕಡೆ ಪೊಲೀಸರು ದಾಳಿ ನಡೆಸಿದ್ದಾರೆ. ಹೂಡಿಕೆದಾರರಿಗೆ ಹಣ ವಾಪಸ್ ನೀಡದ ಹಿನ್ನೆಲೆಯಲ್ಲಿ ಈ ಮುನ್ನ ಹನುಮಂತನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ಹಿನ್ನೆಲೆ ಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದ ಪೊಲೀಸರು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ ಕಳೆದ 10 ವರ್ಷಗಳಿಂದ ಈ ಸೊಸೈಟಿ ಚಾಲ್ತಿಯಲ್ಲಿತ್ತು. ಅದರ ನಂಬಿಕೆ ಆಧಾರದ ಮೇಲೆ ಜನ ಹೆಚ್ಚು ಹೆಚ್ಚಾಗಿ ಇತ್ತೀಚೆಗೆ ಠೇವಣಿಗಳನ್ನು ಇಡತೊಡಗಿದ್ದರು. ಜನರ ಆ ಅಮಾಯಕ ನಂಬಿಕೆಯನ್ನೇ ಆಧಾರವಾಗಿಸಿಕೊಂಡು ಹಣ ಕ್ರೋಢೀಕರಣವಾಗುತ್ತಿದ್ದಂತೆ ಸೊಸೈಟಿ ಕಡೆಯಿಂದ ವಂಚನೆ ನಡೆದಿದ್ದು, ಇಬ್ಬರು ಪರಾರಿಯಾಗಿದ್ದಾರೆ.

ಸರಿಯಾಗಿ 2 ದಶಕದ ಹಿಂದೆ ಇದೇ ಹನುಮಂತನಗರ, ಬಸವನಗುಡಿ, ಸ್ವಲ್ಪ ಅದರಾಚೆಗೆ ಸಜ್ಜನರಾವ್​ ಸರ್ಕಲ್​ವರೆಗೂ ವಿಸ್ತರಿಸಿಕೊಂಡು ವಿನಿವಿಂಕ್​ ಹೆಸರಿನಲ್ಲಿ ಶ್ರೀನಿವಾಸ ಶಾಸ್ತ್ರಿ ಮತ್ತು ಲೋಕೇಶ್ ಎಂಬಿಬ್ಬರು ಸ್ಕೀಮಿಗಳು ಚೈನ್​ ಮನಿ ಮೂಲಕ (Ponzi scheme) ನೂರಾರು ಮಂದಿಗೆ ನೂರಾರು ಕೋಟಿ ರೂ ನಾಮ ತಿಕ್ಕಿದ್ದರು ಎಂಬುದನ್ನು ಸ್ಮರಿಸಬಹುದು.

ಬ್ಯಾಂಕ್ ಮುಖ್ಯಸ್ಥರಾದ ವೆಂಕಟನಾರಾಯಣ ಮತ್ತು ಕೃಷ್ಣ ಪ್ರಸಾದ್ ವಿರುದ್ದ ಜೋರಾದ ವಂಚನೆ ಆರೋಪ ಕೇಳಿಬಂದಿದೆ. ಅದಾಗಲೇ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ವಶಿಷ್ಠ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ವಿರುದ್ಧ ಎಫ್ಐಆರ್ ಸಹ ದಾಖಲಾಗಿದೆ. FIR ಆದ ತಕ್ಷಣ ಆರೋಪಿಗಳಿಬ್ಬರು ಎಸ್ಕೇಪ್ ಆಗಿದ್ದಾರೆ. ವೆಂಕಟನಾರಾಯಣ ಮತ್ತು ಕೃಷ್ಣ ಪ್ರಸಾದ್ ಪರಾರಿಯಾದವರು.

ಇದನ್ನೂ ಓದಿ:

 ಅಕ್ರಮ ಗಣಿಗಾರಿಕೆ ನಿಲ್ಲದಿದ್ದಲ್ಲಿ ನಾನೂ ಸುಮಲತಾರ ಹಾದಿಯಲ್ಲೇ ಹೋರಾಡುವೆ: ಮಂಡ್ಯ ಉಸ್ತುವಾರಿ ಸಚಿವ ನಾರಾಯಣಗೌಡ

ಪದೇ ಪದೇ ನನ್ನ ತಂದೆಯ ಸಾವಿನ ವಿಚಾರ ತರಬೇಡಿ: ಅಭಿಷೇಕ್ ಅಂಬರೀಶ್ ಎಚ್.ಡಿ.ಕುಮಾರಸ್ವಾಮಿಗೆ ಮನವಿ

(Bengaluru Hanumantha Nagar Police attack home of Vasishtha Co operative Bank directors)