AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲ ಬೇಗೆ ತಾಳಲಾರದೆ ಹೆಚ್ಚೆಚ್ಚು ಕೂಲ್ ಡ್ರಿಂಕ್ಸ್ ಕುಡಿಯುತ್ತೀರಾ? ಹಾಗಿದ್ರೆ ವೈದ್ಯರ ಈ ಎಚ್ಚರಿಕೆ ಗಮನಿಸಲೇಬೇಕು

ಬೆಂಗಳೂರಿನಲ್ಲಿ ಬಿಸಿಲಿನ ಬೇಗೆ ತಾಳಲಾರದೆ ಜನರು ಐಸ್‌ಕ್ರೀಂ ಮತ್ತು ಕೂಲ್‌ ಡ್ರಿಂಕ್ಸ್‌ಗಳ ಮೊರೆ ಹೋಗುತ್ತಿದ್ದಾರೆ. ಹೆಚ್ಚೆಚ್ಚು ಸೇವನೆ ಮಾಡುತ್ತಿದ್ದಾರೆ. ಆದರೆ ಇವುಗಳ ಅತಿಯಾದ ಸೇವನೆಯಿಂದ ಕೆಮ್ಮು, ಶೀತ ಮತ್ತು ನ್ಯುಮೋನಿಯಾ ಬರುವ ಸಾಧ್ಯತೆ ಇದೆ ಎಂದು ಕೆಸಿ ಜನರಲ್ ಆಸ್ಪತ್ರೆಯ ವೈದ್ಯರು ಎಚ್ಚರಿಕೆ ನೀಡಿದ್ದಾರೆ. ವೈದ್ಯರು ಏನೇನಂದ್ರು ಎಂಬ ಮಾಹಿತಿ ಇಲ್ಲಿದೆ.

ಬಿಸಿಲ ಬೇಗೆ ತಾಳಲಾರದೆ ಹೆಚ್ಚೆಚ್ಚು ಕೂಲ್ ಡ್ರಿಂಕ್ಸ್ ಕುಡಿಯುತ್ತೀರಾ? ಹಾಗಿದ್ರೆ ವೈದ್ಯರ ಈ ಎಚ್ಚರಿಕೆ ಗಮನಿಸಲೇಬೇಕು
ಕೆಸಿ ಜನರಲ್ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಮುರಳೀಧರ್ ಹಾಗೂ ಕೂಲ್ ಡ್ರಿಂಕ್ಸ್​ನ ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Apr 24, 2026 | 7:17 AM

Share

ಬೆಂಗಳೂರು, ಏಪ್ರಿಲ್ 24: ಬೆಂಗಳೂರಿನಲ್ಲಿ (Bengaluru) ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮನೆಯಿಂದ ಹೊರಬಂದರೆ ಸಾಕು ಕೆಂಡದಂತಹ ವಾತಾವರಣ ಜನರನ್ನು ಹೈರಾಣಾಗಿಸುತ್ತಿದೆ. ಈ ಸುಡುವ ಬಿಸಿಲಿನಿಂದ ಪಾರಾಗಲು ಮತ್ತು ದೇಹವನ್ನು ತಂಪಾಗಿಸಿಕೊಳ್ಳಲು ಜನರು ಐಸ್‌ಕ್ರೀಂ ಹಾಗೂ ಕೂಲ್ ಡ್ರಿಂಕ್ಸ್‌ಗಳ ಮೊರೆ ಹೋಗುತ್ತಿದ್ದಾರೆ. ಆದರೆ, ಇವುಗಳ ಅತಿಯಾದ ಸೇವನೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಹೆಚ್ಚಿದ ಬೇಡಿಕೆ, ಹೆಚ್ಚಿದ ಆತಂಕ

ನಗರದ ಗರಿಷ್ಠ ತಾಪಮಾನ ಏರುತ್ತಿರುವ ಹಿನ್ನೆಲೆಯಲ್ಲಿ ಐಸ್‌ಕ್ರೀಂ ಪಾರ್ಲರ್‌ ಹಾಗೂ ತಂಪು ಪಾನೀಯಗಳ ಅಂಗಡಿಗಳ ಮುಂದೆ ಜನವೋ ಜನ. ದಣಿವು ಆರಿಸಿಕೊಳ್ಳಲು ಜನರು ಅತಿಯಾಗಿ ತಂಪು ಪಾನೀಯಗಳನ್ನು ಕುಡಿಯುತ್ತಿದ್ದಾರೆ. ಆದರೆ ಇದು ತಾತ್ಕಾಲಿಕವಾಗಿ ತಂಪು ನೀಡಿದರೂ, ದೇಹದ ಆಂತರಿಕ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ವೈದ್ಯರ ಎಚ್ಚರಿಕೆ ಏನು?

ಈ ಕುರಿತು ಮಾಹಿತಿ ನೀಡಿರುವ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಯ ಹಿರಿಯ ವೈದ್ಯರಾದ ಡಾ. ಮುರಳೀಧರ್, ‘ಹೊರಗಿನ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಿದ್ದಾಗ ದೇಹಕ್ಕೆ ಅತಿ ತಣ್ಣನೆಯ ಆಹಾರ ಅಥವಾ ಪಾನೀಯ ಸೇರಿದರೆ ರೋಗನಿರೋಧಕ ಶಕ್ತಿ ಕುಂದಬಹುದು. ಇದರಿಂದ ಕೆಮ್ಮು, ನೆಗಡಿ, ಶೀತ ಮಾತ್ರವಲ್ಲದೆ ನ್ಯುಮೋನಿಯಾದಂತಹ ಗಂಭೀರ ಕಾಯಿಲೆಗಳಿಗೂ ಕಾರಣವಾಗಬಹುದು’ ಎಂದು ತಿಳಿಸಿದ್ದಾರೆ.

ನೈಸರ್ಗಿಕ ಪಾನೀಯಕ್ಕೆ ಒತ್ತು ನೀಡಿ

ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಕೃತಕ ಪಾನೀಯಗಳಿಗಿಂತ ಎಳನೀರು, ಮಜ್ಜಿಗೆಯಂತಹ ನೈಸರ್ಗಿಕ ಪಾನೀಯಗಳಿಗೆ ಆದ್ಯತೆ ನೀಡುವುದು ಉತ್ತಮ. ಐಸ್‌ಕ್ರೀಂ ಮತ್ತು ಕೂಲ್ ಡ್ರಿಂಕ್ಸ್‌ಗಳ ಸೇವನೆ ಮಿತವಾಗಿರಲಿ ಎಂಬುದು ವೈದ್ಯರ ಕಿವಿಮಾತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಂಜೆ ಮಳೆ ಫಿಕ್ಸ್: ಕರಾವಳಿ ಜನರಿಗೆ ಸೆಖೆಯ ಕಾಟ; ಉಷ್ಣಾಂಶದ ಮಟ್ಟ ಏರಿಕೆಯಾಗುವ ಸಾಧ್ಯತೆ

ವರದಿ: ಲಕ್ಷ್ಮಿ ನರಸಿಂಹ, ಟಿವಿ9, ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ