ಬೆಂಗಳೂರಿನಲ್ಲಿ ರಣ ಬಸಿಲು: ಆರೋಗ್ಯ ಇಲಾಖೆಯ ಮಾರ್ಗಸೂಚಿ, ಗರ್ಭಿಣಿಯರು, ಮಕ್ಕಳಿಗೆ ಎಚ್ಚರಿಕೆ

Bangaluru Weather Forecast: ಕೂಲ್ ಸಿಟಿ ಬೆಂಗಳೂರು ಇದೀಗ ತೀವ್ರ ಬಿಸಿಲ ಝಳಕ್ಕೆ ತತ್ತರಿಸಿದೆ, ತಾಪಮಾನ ಏರಿಕೆಯಿಂದ ಜನ ಕಂಗೆಟ್ಟಿದ್ದಾರೆ. ಆರೋಗ್ಯ ಇಲಾಖೆ ಮಕ್ಕಳು, ವೃದ್ಧರು, ಗರ್ಭಿಣಿಯರಿಗೆ ವಿಶೇಷ ಎಚ್ಚರಿಕೆ ನೀಡಿದೆ. ನಿರ್ಜಲೀಕರಣ, ಚರ್ಮದ ಸಮಸ್ಯೆಗಳು ಹೆಚ್ಚುತ್ತಿದ್ದು, ಮಧ್ಯಾಹ್ನ ಬಿಸಿಲಿಗೆ ಮೈಯೊಡ್ಡದಂತೆ, ದೇಹವನ್ನು ಹೈಡ್ರೇಟ್ ಆಗಿರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.

ಬೆಂಗಳೂರಿನಲ್ಲಿ ರಣ ಬಸಿಲು: ಆರೋಗ್ಯ ಇಲಾಖೆಯ ಮಾರ್ಗಸೂಚಿ, ಗರ್ಭಿಣಿಯರು, ಮಕ್ಕಳಿಗೆ ಎಚ್ಚರಿಕೆ
ಪ್ರಾತಿನಿಧಿಕ ಚಿತ್ರ
Image Credit source: indianexpress
Edited By:

Updated on: Apr 17, 2026 | 9:31 PM

ಬೆಂಗಳೂರ, ಏಪ್ರಿಲ್​ 17: ಕೂಲ್ ಸಿಟಿ ಎಂದು ಕರೆಸಿಕೊಳ್ಳುವ ರಾಜಧಾನಿ ಬೆಂಗಳೂರು (bangaluru) ಸದ್ಯ ಹಾಟ್ ಸಿಟಿಯಾಗಿ (Heatwave) ಬದಲಾಗಿದೆ. ಸೆಕೆ ಜೊತೆಗೆ ಏರಿಕೆಯಾಗುತ್ತಿರುವ ತಾಪಮಾನಕ್ಕೆ ಸಿಟಿ ಜನ ಶಾಪ್ ಹಾಕುವುದಕ್ಕೆ ಶುರು ಮಾಡಿದ್ದಾರೆ. ಅದರಲ್ಲೂ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಗರ್ಭಿಣಿಯರು, ಮಕ್ಕಳ ಬಗ್ಗೆ ಎಚ್ಚರ 

ಬೆಂಗಳೂರಿನಲ್ಲಿ ಇಂದು 36ರ ಗರಿಷ್ಠ ತಾಪಮಾನ ದಾಖಲಾಗಿದೆ. ಕ್ಷಣಕ್ಷಣಕ್ಕೂ ಏರಿಕೆ ಆಗುತ್ತಿರುವ ರಾಜಧಾನಿಯ ವಾತಾವರಣ ಬೆಂಗಳೂರಿಗರನ್ನ ಹೈರಾಣಾಗಿಸಿದೆ. ಮುಂಜಾನೆ ಸೂರ್ಯನ ಉದಯವಾಗುತ್ತಿದ್ದಂತೆ ಬಿರುಬಿಸಿಲು, ರಾತ್ರಿ ಆದರೆ ಬಿಸಿ ಗಾಳಿ, ಈ ವರ್ಷದ ತಾಪಮಾನ ಹಾಗೂ ಸೆಕೆಯಿಂದ ಜನರು ಕಂಗಾಲಾಗಿದ್ದರೆ ಗರ್ಭಿಣಿಯರು, ವೃದ್ಧರು, ಮಕ್ಕಳ ಬಗ್ಗೆ ವೈದ್ಯರು ತುಸು ಎಚ್ಚರ ಎನ್ನುತ್ತಿದ್ದಾರೆ.

ಇದನ್ನೂ ಓದಿ: ಬಿಸಿಲ ಝಳದಿಂದ ತತ್ತರಿಸಿದ ಜನತೆ: ಇನ್ನೂ 3 ದಿನ ಉಷ್ಣ ಅಲೆ, ಬೆಂಗಳೂರಿಗೂ ತಟ್ಟಲಿದೆ ತಾಪಮಾನ ಏರಿಕೆ ಬಿಸಿ

ಕೂಲ್ ಕೂಲ್ ಸಿಟಿಗೆ ಈಗ ವೆದರ್ ಟ್ರಬಲ್ ಶುರುವಾಗಿದೆ. ಬಿಸಿಲಿನ ಎಫೆಕ್ಟ್ ಜನರ ಆರೋಗ್ಯಕ್ಕೆ ಸಂಕಷ್ಟ ತರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರಿಗೆ ವೆದರ್ ತೊಂದರೆ ಕೊಡುತ್ತಿದೆ. ಹೀಗಾಗಿ ಸಿಟಿಯ ಆಸ್ಪತ್ರೆಗಳಲ್ಲಿ ನಿತ್ರಾಣ, ನಿರ್ಜಲೀಕರಣ , ಚರ್ಮದಲ್ಲಿ ಅಲರ್ಜಿ ಹಾಗೂ ಅಜೀರ್ಣ ಸೇರಿದಂತೆ ಸಾಕಷ್ಟು ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ.

ಆರೋಗ್ಯ ಇಲಾಖೆಯ ಮಾರ್ಗಸೂಚಿ ಏನು?

ಇನ್ನು ಆರೋಗ್ಯ ಇಲಾಖೆಯಿಂದ ಈಗಾಗಲೇ ಮಾರ್ಗಸೂಚಿ ನೀಡಲಾಗಿದೆ. ತಾಪಮಾನ ಇಳಿಕೆಯವರೆಗೂ ಅಂದರೆ 11 ರಿಂದ 4 ಗಂಟೆ ವರೆಗೆ ಹೆಚ್ಚು ಬಿಸಿಲಿಗೆ ಮೈ ಒಡ್ಡದೆ ಇರುವಂತೆ ಸಲಹೆ ನೀಡಲಾಗಿದೆ. ಇನ್ನು ಹೈ ಬಿಪಿ, ಹೃದಯ ಸಂಬಂಧಿ ಖಾಯಿಲೆ ಇರುವವರು ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡದಂತೆ ಎಚ್ಚರಿಕೆ ನೀಡಲಾಗಿದೆ.

ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಿಷ್ಟು

ಬಿಸಿ ಗಾಳಿ ಬೀಸುವ ಪ್ರದೇಶಗಳ ಬಗ್ಗೆ ಗಮನ ಹರಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಹೀಟ್ ವೇವ್ ಎಚ್ಚರಿಕೆ ಇದೆ. ಈ ತಿಂಗಳು ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಸೂಕ್ತ‌ ಎಚ್ಚರಿಕೆ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇದನ್ನೂ ಓದಿ: ಬಿಸಿಲಿನ ಬೇಗೆಗೆ ಬೆಂದ ಕರ್ನಾಟಕ: ಬೆಂಗಳೂರು ಸೇರಿ ವಿವಿಧೆಡೆ ಹೀಟ್‌ವೇವ್ ಅಲರ್ಟ್

ತಾಪಮಾನ ಏರಿಕೆಯಿಂದ ನಿರ್ಜಲೀಕರಣ ಹಾಗೂ ಉಸಿರಾಟದ ಸಮಸ್ಯೆ ಎದುರಾಗುವ ಸಮಸ್ಯೆ ಇದ್ದು, ದೇಹವನ್ನು ಹೈಡ್ರೇಟ್ ಆಗಿ ಇಟ್ಟುಕೊಳ್ಳುವಂತೆ ತಿಳಿಸಲಾಗಿದೆ. ಹೀಗಾಗಿ‌ ಸಿಲಿಕಾ‌ನ್ ಸಿಟಿ ಜನರು ದೇಹದ ತಾಪಮಾನವನ್ನ ಚೆನ್ನಾಗಿ ಇಟ್ಟುಕೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us